Homeಕರ್ನಾಟಕಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

- Advertisement -
- Advertisement -

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯು ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಜಲಾವೃತವಾಗಿದೆ. ಇದರಿಂದ ರಾಜ್ಯದ ರಾಮನಗರ ಸಮೀಪ ಸರಣಿ ಅಪಘಾತ ಸಂಭವಿಸಿ, ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು.

ರಾಮನಗರ ಜಿಲ್ಲೆ ಬಳಿ 8,480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಷ್ಟ್ರೀಯ ಹೆದ್ದಾರಿ ಮಳೆಯಿಂದಾಗಿ ಜಲಾವೃತವಾಗಿದೆ. ಹೆದ್ದಾರಿಯಲ್ಲಿನ ಕೆಳಸೇತುವೆಯಲ್ಲಿ ನೀರು ನಿಂತಿದ್ದು, ಬಂಪರ್-ಟು-ಬಂಪರ್ ಸರಣಿ ಅಪಘಾತಗಳಿಗೆ ಕಾರಣವಾಯಿತು. ಇದರಿಂದಾಗಿ ವಾಹನಗಳು ನಿಧಾನವಾಗಿ ಚಲಿಸಿದ್ದರಿಂದ ಬಹಳ ಸಮಯದವರೆಗೂ ಟ್ರಾಫಿಕ್ ಜಾಮ್ ಉಂಟಾಯಿತು.

ಕಳೆದ ವರ್ಷ ಕರ್ನಾಟಕದಲ್ಲಿ ಹಿಂದೆಂದೂ ಕಂಡಿರದ ಮಳೆ ಸುರಿದಾಗಲೂ ಇದೇ ರೀತಿ ಕೆಳಸೇತುವೆಯು ಜಲಾವೃತವಾಗಿತ್ತು.

”ತಮ್ಮ ವಾಹನಗಳಿಗೆ ಹಾನಿ ಮಾಡುವುದಕ್ಕಾಗಿಯೇ ಮುಖ್ಯಮಂತ್ರಿ ಬಿ.ಎಸ್.ಬೊಮ್ಮಾಯಿ ಮತ್ತು ಪ್ರಧಾನಿ ಮೋದಿ ತರಾತುರಿಯಲ್ಲಿ ಈ ಹೆದ್ದಾರಿ ಉದ್ಘಾಟನೆಗೆ ಮಾಡಿದ್ದಾರೆಯೇ?” ಎಂದು ಅಲ್ಲಿ ಪರದಾಡಿದ ಕೆಲ ಪ್ರಯಾಣಿಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

ಈ ಬಗ್ಗೆ ಪ್ರಯಾಣಿಕ ವಿಕಾಸ್ ಎನ್ನುವವರು ಎನ್‌ಡಿಟಿವಿ ಜೊತೆ ಮಾತನಾಡಿ, ”ನನ್ನ ಮಾರುತಿ ಸ್ವಿಫ್ಟ್ ಕಾರು ಜಲಾವೃತಗೊಂಡ ಕೆಳಸೇತುವೆಯಲ್ಲಿ ಅರ್ಧ ಮುಳುಗಿ ಅಲ್ಲಿಯೇ ನಿಂತುಬಿಟ್ಟಿತ್ತು. ಹಿಂದಿನಿಂದ ಬಂದ ಲಾರಿ ನನ್ನ ಕಾರಿಗೆ ಡಿಕ್ಕಿ ಹೊಡೆದಿದೆ, ಇದಕ್ಕೆ ಯಾರು ಹೊಣೆ? ನನ್ನ ಕಾರನ್ನು ರಿಪೇರಿ ಮಾಡುವಂತೆ ನಾನು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತಿದ್ದೇನೆ ಎಂದರು.

”ಪ್ರಧಾನಿ ಮೋದಿ ಹೆದ್ದಾರಿಯನ್ನು ಉದ್ಘಾಟಿಸಿದರು, ಈ ರಸ್ತೆ ಉದ್ಘಾಟನೆಗೆ ಸಿದ್ಧವಾಗಿದೆಯೇ ಎಂದು ಅವರು ತಮ್ಮ ರಸ್ತೆ ಮತ್ತು ಸಾರಿಗೆ ಸಚಿವಾಲಯದಿಂದ ಪರಿಶೀಲಿಸಿದ್ದೀರಾ? ಅವರ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾವು ತೊಂದರೆ ಅನುಭವಿಸಬೇಕೇ? ಅವರು ಹೆಚ್ಚಿನ ಟೋಲ್ ಶುಲ್ಕವನ್ನು ವಿಧಿಸುತ್ತಾರೆ, ಆದರೆ ರಸ್ತೆ ಮಾತ್ರ ಈ ರೀತಿಯಲ್ಲಿದೆ. ನಾವು ಟೋಲ್ ಶುಲ್ಕ್ ಕಟ್ಟಿದರೂ ಏನು ಪ್ರಯೋಜನ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಂಪರ್ ಟು ಬಂಪರ್ ಅಪಘಾತಗಳಲ್ಲಿ ತಮ್ಮ ವಾಹನವೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದ ಮತ್ತೊಬ್ಬ ಪ್ರಯಾಣಿಕ ನಾಗರಾಜು, ”ಅಪಘಾತಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಬಂದಿದ್ದರೇ 10 ನಿಮಿಷದಲ್ಲಿ ಈ ಜಲಾವೃತವನ್ನು ರಾಜ್ಯ ಸರ್ಕಾರವು ತೆರವುಗೊಳಿಸುತ್ತಿತ್ತು” ಎಂದು ಅಸಮಾಧಾನ ಹೊರಹಾಕಿದರು.

“ಕೆಳಸೇತುವೆಯಲ್ಲಿ ನೀರು ತುಂಬಲು ಪ್ರಾರಂಭಿಸಿದ ಕೆಲವೇ ಸಮಯದಲ್ಲಿ ಹಲವಾರು ಸರಣಿ ಅಪಘಾತಗಳು ಸಂಭವಿಸಿದ ಬಗ್ಗೆ ವರದಿಯಾದವು. ಅದರಲ್ಲಿ ಮೊದಲು ನನ್ನದು… ಮತ್ತು ನಂತರ ಏಳೆಂಟು ವಾಹನಗಳನ್ನು ಒಳಗೊಂಡ ಸರಣಿ ಅಪಘಾತಗಳು ಸಂಭವಿಸಿದವು” ಎಂದು ತಿಳಿಸಿದರು.

”ರಸ್ತೆ ಮೇಲಿನ ನೀರು ಹೊರ ಹೋಗಲು ಸ್ಥಳವಿಲ್ಲ. ಒಂದುವೇಳೆ ಪ್ರಧಾನಿ ಆಗಮನದ ಸುದ್ದಿ ಬಂದಿದ್ದರೆ, ಅವರು (ಬೊಮ್ಮಾಯಿ) 10 ನಿಮಿಷಗಳಲ್ಲಿ ಈ ಜಲಾವೃತವನ್ನು ತೆರವುಗೊಳಿಸುತ್ತಾರೆ. ನಾವು ಸಾಮಾನ್ಯ ಜನರು, ನಮ್ಮ ಕಷ್ಟ ಕೇಳುವವರು ಯಾರು? ಈ ತೊಂದರೆಗಳಿಗೆ ಯಾರು ಹೊಣೆ?” ಎಂದು ನಾಗರಾಜು ಅಳಲು ತೋಡಿಕೊಂಡಿದ್ದಾರೆ.

ಮಾರ್ಚ್ 12ರಂದು ಪ್ರಧಾನಿ ಮೋದಿ ಅವರು 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸಿದರು. ಉದ್ಘಾಟಿಸಿದ ದಿನದಿಂದ ದಿನನಿತ್ಯ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಒಂದು ಕಡೆ ಹೆಚ್ಚಿನ ಟೋಲ್ ಶುಲ್ಕ್ ವಸೂಲಿ, ಮತ್ತೊಂದಡೆ ರಸ್ತೆ ನಿರ್ಮಾಣದ ಬಗ್ಗೆ ಆರೋಪಗಳು ಕೇಳಿಬರುತ್ತಿವೆ.

ರಸ್ತೆ ಉದ್ಘಾಟನೆಯಾದ ದಿನವೇ ಒಂದು ಅಪಘಾತ ಸಂಭವಿಸಿತ್ತು. ಮರುದಿನವೇ ರಸ್ತೆಯ ಟಾರು ಕಿತ್ತು ಬಂದಿತ್ತು. ಇನ್ನೂ ಟೋಲ್ ವಸೂಲಿ ವಿಚಾರಕ್ಕೆ ಪ್ರತಿನಿತ್ಯ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ವಿಚಾರಕ್ಕೆ ಈಗಾಗಲೇ ಕರ್ನಾಟಕ ಹೈಕೋರ್ಟ್ ಸುಮೋಟೋ ವಿಚಾರಣೆ ಆರಂಭಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...