Homeಕರ್ನಾಟಕಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

- Advertisement -
- Advertisement -

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು ನಡೆಯಬೇಕಿದ್ದ ಈ ಸಮಾರಂಭವನ್ನು “ಅನಿವಾರ್ಯ ಕಾರಣಗಳಿಂದ” ರದ್ದುಗೊಳಿಸಲಾಗುತ್ತಿದ್ದು, 2026ರ ಬ್ಯಾಚ್‌ನ ಪದವೀಧರರು ಪ್ರಮಾಣಪತ್ರಗಳನ್ನು ಕೊರಿಯರ್ ಮೂಲಕ ಸ್ವೀಕರಿಸಬಹುದು ಅಥವಾ ಕ್ಯಾಂಪಸ್‌ನಲ್ಲಿ ಸಂಗ್ರಹಿಸಬಹುದು, ಇದಕ್ಕೆ ಸಂಬಂಧಿಸಿದ ಹೊಸ ಫಾರ್ಮ್ ಶೀಘ್ರದಲ್ಲೇ ಹಂಚಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

ಆಡಳಿತ ಮಂಡಳಿಯು ತಾಂತ್ರಿಕ ಕಾರಣಗಳನ್ನು ನೀಡಿದ್ದರೂ, ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ಆಹ್ವಾನಕ್ಕೆ ಸಂಬಂಧಿಸಿದಂತೆ ಎದ್ದಿರುವ ಭಾರಿ ವಿವಾದವೇ ಈ ರದ್ದತಿಗೆ ಪ್ರಮುಖ ಕಾರಣ ಎನ್ನಲಾಗಿದೆ.

ವಿವಾದದ ಹಿನ್ನೆಲೆ ಏನು?

ಈ ವಿವಾದದ ಕಿಡಿ ಹೊತ್ತಿಕೊಂಡಿದ್ದು ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದಲ್ಲಿ. ಅಲ್ಲಿನ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಸಿಜೆಐ ಸೂರ್ಯ ಕಾಂತ್ ಅವರನ್ನು ಆಹ್ವಾನಿಸುವುದಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಮುಖ್ಯಸ್ಥ ಮನನ್ ಕುಮಾರ್ ಮಿಶ್ರಾ ಅವರು ನಾಲ್ಸಾರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಕೀಲರಾಗಿ ನೋಂದಣಿ ಮಾಡಿಕೊಳ್ಳುವುದನ್ನು ತಾತ್ಕಾಲಿಕವಾಗಿ ತಡೆಹಿಡಿಯುವ ವಿವಾದಾತ್ಮಕ ಆದೇಶ ಹೊರಡಿಸಿದ್ದರು. ಈ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಕೆಲವೇ ಗಂಟೆಗಳಲ್ಲಿ ಆದೇಶವನ್ನು ಹಿಂಪಡೆದು ವಿದ್ಯಾರ್ಥಿಗಳ ಕ್ಷಮೆಯಾಚಿಸಿದ್ದರು.

ಬೆಂಗಳೂರು ಲಾ ಸ್ಕೂಲ್ ವಿದ್ಯಾರ್ಥಿಗಳ ಆಕ್ರೋಶ

ಹೈದರಾಬಾದ್‌ನ ನಾಲ್ಸಾರ್ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ ಬೆಂಗಳೂರಿನ NLSIU ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ ಬಹಿರಂಗ ಪತ್ರವೊಂದನ್ನು ಬರೆದಿದ್ದರು.

  • 700ಕ್ಕೂ ಹೆಚ್ಚು ಜನರ ಸಹಿ: ಈ ಪತ್ರಕ್ಕೆ 165 ಪದವಿ ಪಡೆಯಲಿರುವ ವಿದ್ಯಾರ್ಥಿಗಳು, 409 ಪ್ರಸ್ತುತ ವಿದ್ಯಾರ್ಥಿಗಳು ಮತ್ತು 128 ಹಳೆಯ ವಿದ್ಯಾರ್ಥಿಗಳು ಸಹಿ ಹಾಕಿದ್ದರು.
  • ಆಹ್ವಾನಕ್ಕೆ ವಿರೋಧ: ವಿದ್ಯಾರ್ಥಿಗಳ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸಿದ ಬಾರ್ ಕೌನ್ಸಿಲ್ ಮುಖ್ಯಸ್ಥ ಮನನ್ ಕುಮಾರ್ ಮಿಶ್ರಾ ಮತ್ತು ಸಿಜೆಐ ಸೂರ್ಯ ಕಾಂತ್ ಅವರು ತಮ್ಮ ಘಟಿಕೋತ್ಸವಕ್ಕೆ ಬರುವುದನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು ಹಾಗೂ ವಿದ್ಯಾರ್ಥಿಗಳ ಹೋರಾಟವನ್ನು ಕೀಳಾಗಿ ಕಂಡು, ಅವರ ವಿರುದ್ಧ ಅಸಂವಿಧಾನಿಕ ಕ್ರಮ ಕೈಗೊಂಡ ಗಣ್ಯರಿಂದ ಪದವಿ ಸ್ವೀಕರಿಸುವುದು ನಮಗೆ ಮಾಡುವ ಅಪಮಾನ” ಎಂದು ವಿದ್ಯಾರ್ಥಿ ಸಮೂಹ ಆಕ್ರೋಶ ಹೊರಹಾಕಿತ್ತು.

ಆಡಳಿತ ಮಂಡಳಿಯ ಅಂತಿಮ ನಿರ್ಧಾರ

ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಅಂತಿಮವಾಗಿ ಇಡೀ ಘಟಿಕೋತ್ಸವ ಕಾರ್ಯಕ್ರಮವನ್ನೇ ರದ್ದುಗೊಳಿಸುವ ತೀರ್ಮಾನಕ್ಕೆ ಬಂದಿದೆ. ಆದಾಗ್ಯೂ, ಆಡಳಿತ ಮಂಡಳಿಯು ತನ್ನ ಅಧಿಕೃತ ನೋಟಿಸ್‌ನಲ್ಲಿ ‘ಅನಿವಾರ್ಯ ಕಾರಣಗಳಿಂದ’ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳಿಗೆ ನೇರವಾಗಿ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು ಮತ್ತು ಹೊಸ ಅರ್ಜಿ ನಮೂನೆಯನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. ಈ ಬೆಳವಣಿಗೆಯು ಪ್ರಸ್ತುತ ದೇಶದ ಕಾನೂನು ಮತ್ತು ಉನ್ನತ ಶಿಕ್ಷಣ ವಲಯದಲ್ಲಿ ಭಾರಿ ಚರ್ಚೆಗೆ ಒಳಪಟ್ಟಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...