Homeಕರ್ನಾಟಕಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ...

ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ಡಾಂಬರೀಕರಣ ಮಾಡಿ ಅಭಿವೃದ್ಧಿ ಪಡಿಸಿದ್ದ ರಸ್ತೆ ಮೂರೇ ದಿನದಲ್ಲಿ ಕಿತ್ತು ಹೋಗಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಇದರಿಂದ ಮುಜುಗರಕ್ಕೀಡಾಗಿರುವ ಪ್ರಧಾನಿ ಕಾರ್ಯಾಲಯವು ರಾಜ್ಯ ಸರ್ಕಾರದಿಂದ ಸಮಗ್ರ ವರದಿ ಕೇಳಿದೆ.

ಎರಡು ದಿನಗಳ ರಾಜ್ಯ ಪ್ರವಾಸದ ಅಂಗವಾಗಿ ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದರು. ಆಗ ಬಿಬಿಎಂಪಿ 24 ಕೋಟಿ ರೂಪಾಯಿ ವೆಚ್ಚ ಮಾಡಿ ರಸ್ತೆ, ವಿದ್ಯುತ್‌ ದೀಪ, ಚರಂಡಿ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಿತ್ತು. ಇದರ ಭಾಗವಾಗಿ ಜ್ಞಾನಭಾರತಿಯ ಡಾ.ಬಿ.ಆರ್.ಅಂಬೇಡ್ಕರ್‌ ಸ್ಕೂಲ್ ಆಫ್‌ ಎಕಾನಮಿಕ್ಸ್‌ (ಬೇಸ್‌) ಕ್ಯಾಂಪಸ್‌ ಬಳಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಅದೇ ರಸ್ತೆ ಕುಸಿದಿದೆ.

ಈ ರಸ್ತೆಯ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲಾಣದಲ್ಲಿ ವೈರಲ್ ಆಗಿದ್ದವು. ಕಳಪೆ ಕಾಮಗಾರಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಸಾಕ್ಷಿ ಎಂದೆಲ್ಲ ಟೀಕೆ ವ್ಯಕ್ತವಾಗಿತ್ತು. ಇದರಿಂದ ಪ್ರಧಾನಿ ಕಚೇರಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ವರದಿ ಕೇಳಿದೆ.

ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

ಪ್ರಧಾನ ಮಂತ್ರಿ ಕಚೇರಿ ಅಧಿಕಾರಿಗಳು ಗುರುವಾರ ಮುಖ್ಯಮಂತ್ರಿ ಕಚೇರಿಗೆ ಕರೆ ಮಾಡಿ, ಘಟನೆಯ ವರದಿಯನ್ನು ತಕ್ಷಣವೇ ಸಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ವಿವರಣೆಯನ್ನು ಸಲ್ಲಿಸುವಂತೆ ಹೇಳಿದ್ದು, ಕಳಪೆ ಕಾಮಗಾರಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚಿಸಿದ್ದಾರೆ.

ತನಿಖೆಗೆ ಸೂಚಿಸಿರುವ ಸಿಎಂ ಬೊಮ್ಮಾಯಿ, ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕಳಪೆ ಕಾಮಗಾರಿ ಮಾಡಿದ ಅಧಿಕಾರಿಯನ್ನು ಅಮಾನತುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಭೇಟಿಗೂ ಮುನ್ನ ಮೈಸೂರು ರಸ್ತೆ ಮತ್ತು ಬಳ್ಳಾರಿ ರಸ್ತೆ ಸೇರಿದಂತೆ 14 ಕಿಮೀ ಉದ್ದದ ರಸ್ತೆಗಳನ್ನು ಮರುನಿರ್ಮಾಣ ಮಾಡಲು 24 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಬಿಬಿಎಂಪಿ ಇತ್ತೀಚೆಗೆ ಮಾಹಿತಿ ನೀಡಿದೆ.

ಬಿಬಿಎಂಪಿ ಪ್ರಕಾರ, ಕೆಂಗೇರಿಯಿಂದ ಕೊಮ್ಮಘಟ್ಟದವರೆಗಿನ ಏಳು ಕಿಮೀ ಉದ್ದದ ರಸ್ತೆಯನ್ನು 6 ಕೋಟಿ ರೂಪಾಯಿ ವೆಚ್ಚದಲ್ಲಿ ಡಾಂಬರೀಕರಣಗೊಳಿಸಲಾಗಿದೆ. ನಗರಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಪ್ರಧಾನಿ ಮೋದಿ ಈ ಮಾರ್ಗದಲ್ಲಿ ಪ್ರಯಾಣಿಸಿದ್ದರು. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ರಸ್ತೆ ಕುಸಿದಿದೆ ಎಂದು ಬಿಬಿಎಂಪಿ ಹೇಳಿದೆ.

ಬೆಂಗಳೂರು ನಗರದ ಮೂಲಸೌಕರ್ಯಗಳ ಕಳಪೆ ಪರಿಸ್ಥಿತಿಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಹೈಕೋರ್ಟ್ ಕೂಡ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡು, ಆದಷ್ಟು ಬೇಗ ರಸ್ತೆ ಗುಂಡಿಗಳನ್ನು ತುಂಬಲು ಬಿಬಿಎಂಪಿಗೆ ನಿರ್ದೇಶನ ನೀಡಿದೆ.


ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸೋಮವಾರ ಬಹುಮತ ಯಾಚಿಸಲಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ಉದ್ಧವ್, ಆದಿತ್ಯ ಠಾಕ್ರೆ ಉಚ್ಛಾಟನೆ?

0
ಮಹಾರಾಷ್ಟ್ರ ಶಿವಸೇನೆಯ ಮುಖಂಡ ಏಕನಾಥ್ ಶಿಂಧೆ 40 ಶಿವಸೇನಾ ಪಕ್ಷದ ಶಾಸಕರ ಬೆಂಬಲದೊಂದಿಗೆ ಬಂಡಾಯವೆದ್ದು, ಬಿಜೆಪಿ ಬೆಂಬಲದೊಂದಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಸೋಮವಾರ ಬಹುಮತ ಸಾಬೀತುಪಡಿಸಬೇಕೆಂದು ಸುಪ್ರೀಂ ಕೋರ್ಟ್...