ಬೆಂಗಳೂರು ಅರಮನೆ ಮೈದಾನ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ-2025 ವಿಪಕ್ಷ ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆಯೂ ಗುರುವಾರ (ಮಾ.6) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಈ ಮಸೂದೆ ಮೂಲಕ ಬೆಂಗಳೂರು ಅರಮನೆ ಮೈದಾನದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ತನ್ನ ಬಳಿಯೇ ಇಟ್ಟುಕೊಳ್ಳುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಸುಗ್ರೀವಾಜ್ಞೆ ರೂಪದಲ್ಲಿದ್ದ ಮಸೂದೆಗೆ ಕೆಲ ಸಣ್ಣ ತಿದ್ದುಪಡಿಗಳೊಂದಿಗೆ ಗುರುವಾರ ಕಾನೂನು ಸಚಿವ ಹೆಚ್‌.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ರಸ್ತೆ ವಿಸ್ತರಣೆಯ ಉದ್ದೇಶಕ್ಕಾಗಿ ಬಳಕೆಯಾಗುವ ಅರಮನೆ ಮೈದಾನದ 15 ಎಕರೆ 36 … Continue reading ಬೆಂಗಳೂರು ಅರಮನೆ ಮೈದಾನ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ