Homeಕರ್ನಾಟಕಬೆಂಗಳೂರು ಅರಮನೆ ಮೈದಾನ ಪ್ರಕರಣ | ಟಿಡಿಆರ್ ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಜ್ಯ...

ಬೆಂಗಳೂರು ಅರಮನೆ ಮೈದಾನ ಪ್ರಕರಣ | ಟಿಡಿಆರ್ ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮತ್ತು ಇತರರ ಕಾನೂನುಬದ್ಧ ಉತ್ತರಾಧಿಕಾರಿ ಪರವಾಗಿ 3,400 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ವರ್ಗಾವಣೆ ಅಭಿವೃದ್ಧಿ ಹಕ್ಕುಗಳ (ಟಿಡಿಆರ್‌) ಪ್ರಮಾಣಪತ್ರಗಳನ್ನು ಬಿಡುಗಡೆ ಮಾಡಲು ಮೇ 22 ರಂದು ಹೊರಡಿಸಲಾದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿದೆ. ಬೆಂಗಳೂರು ಅರಮನೆ ಮೈದಾನ ಪ್ರಕರಣ

ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್, ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಅರ್ಜಿಯನ್ನು ಮಂಗಳವಾರ ಪರಿಗಣಿಸಲು ಪೀಠ ಒಪ್ಪಿಕೊಂಡಿದ್ದಾಗಿ ವರದಿಯಾಗಿದೆ.

ಟಿಡಿಆರ್‌ಗಳನ್ನು ಈಗಾಗಲೇ ಶುಕ್ರವಾರ ಹಸ್ತಾಂತರಿಸಲಾಗಿದೆ ಮತ್ತು ಎಲ್ಲಾ ಅರ್ಜಿಗಳನ್ನು ಪರಿಗಣಿಸಿದ ನಂತರ ನಿರ್ದೇಶನವನ್ನು ಅಂಗೀಕರಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಅಂದಿನಿಂದ ಈ ವಿಷಯವು ನಿಷ್ಪ್ರಯೋಜಕವಾಗಿದೆ ಎಂದು ಕೂಡಾ ಸಲ್ಲಿಸಲಾಗಿದೆ.

“ಕಾಯ್ದೆಯೆ ಅನ್ವಯಿಸದೇ ಇರುವಾಗ ಟಿಡಿಆರ್ ಅನ್ನು ಕಾನೂನಿನಲ್ಲಿ ಅಡಿಯಲ್ಲಿ ಹೇಗೆ ನೀಡಲು ಸಾಧ್ಯ? ಟಿಡಿಆರ್ ಜಾರಿಗೆ ಬಂದಿದ್ದು 2004 ರಲ್ಲಾಗಿದೆ, ಹೀಗಿರುವಾಗ ಅವುಗಳನ್ನು ಅದಕ್ಕೂ ಹಿಂದಿನಿಂದ ಲೆಕ್ಕ ಹಾಕಿ ಹೇಗೆ ನೀಡಲು ಸಾಧ್ಯ” ಎಂದು ಸಿಬಲ್ ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರ ಪೀಠವು ಮೇ 22 ರಂದು ಟಿಡಿಆರ್ ಬಿಡುಗಡೆಗೆ ತೀರ್ಪು ನೀಡಿದ್ದು, ಈ ವೇಳೆ ರಾಜ್ಯ ಸರ್ಕಾರದ ಎಲ್ಲಾ ವಾದಗಳನ್ನು ತಿರಸ್ಕರಿಸಿತ್ತು.

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಕಾನೂನುಬದ್ಧ ಉತ್ತರಾಧಿಕಾರಿ ಮತ್ತು ವಕೀಲೆ ನಯನಾ ತಾರಾ ಬಿ.ಜಿ. ಮತ್ತು ಇತರರನ್ನು ಪ್ರತಿನಿಧಿಸಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗಳ ಗುಂಪನ್ನು ನ್ಯಾಯಾಲಯ ವಿಲೇವಾರಿ ಮಾಡಿತು.

ಜನವರಿ 29, 2025 ರಂದು, ಕರ್ನಾಟಕ ಸರ್ಕಾರವು ಬೆಂಗಳೂರು ಅರಮನೆ (ಭೂಮಿ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ 2025 ಅನ್ನು ಅಧಿಸೂಚನೆ ಮಾಡಿತ್ತು. ಡಿಸೆಂಬರ್ 10, 2024 ರಂದು ಸುಪ್ರೀಂಕೋರ್ಟ್ ಟಿಡಿಆರ್ ನೀಡುವ ಬಗ್ಗೆ ಆದೇಶ ಹೊರಡಿಸಿದ ನಂತರ, ಬೆಂಗಳೂರು ನಗರದ ಹೃದಯಭಾಗದಲ್ಲಿರುವ ವಿವಾದಿತ ಅರಮನೆ ಭೂಮಿಯ ಭಾಗಗಳನ್ನು ಸ್ವಾಧೀನಪಡಿಸಿಕೊಳ್ಳದಿರುವ ಹಕ್ಕನ್ನು ಕಾಯ್ದಿರಿಸಿತು.

ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ, 1996 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ 1997 ರ ಸಿವಿಲ್ ಮೇಲ್ಮನವಿಯನ್ನು ಕೈಗೆತ್ತಿಕೊಳ್ಳುವಂತೆ ಸುಪ್ರೀಂಕೋರ್ಟ್ ಅನ್ನು ಒತ್ತಾಯಿಸಿ ಕರ್ನಾಟಕ ಸರ್ಕಾರವು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ. ಬೆಂಗಳೂರು ಅರಮನೆ ಮೈದಾನ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....