Homeಕರ್ನಾಟಕಬೆಂಗಳೂರು: ಡ್ರಗ್ಸ್ ಸೇವನೆ ಆರೋಪ, ಬಾಲಿವುಡ್ ನಟ ಶಕ್ತಿ ಕಪೂರ್‌ ಪುತ್ರ ಸಿದ್ಧಾಂತ್ ಕಪೂರ್‌ ಸೇರಿ...

ಬೆಂಗಳೂರು: ಡ್ರಗ್ಸ್ ಸೇವನೆ ಆರೋಪ, ಬಾಲಿವುಡ್ ನಟ ಶಕ್ತಿ ಕಪೂರ್‌ ಪುತ್ರ ಸಿದ್ಧಾಂತ್ ಕಪೂರ್‌ ಸೇರಿ ಐವರ ಬಂಧನ

ನಟ ಸಿದ್ಧಾಂತ್ ಕಪೂರ್‌ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರ ಸಹೋದರ

- Advertisement -
- Advertisement -

ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದ ಪಾರ್ಟಿಯೊಂದರಲ್ಲಿ ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಬಾಲಿವುಡ್ ನಟ, ಶಕ್ತಿ ಕಪೂರ್‌ ಪುತ್ರ ಸಿದ್ಧಾಂತ್ ಕಪೂರ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್‌ ಉಪ ಪೊಲೀಸ್ ಆಯುಕ್ತ (ಪೂರ್ವ) ಭೀಮಾಶಂಕರ್ ಎಸ್ ಗುಳೇದ್ ಸೋಮವಾರ ತಿಳಿಸಿದ್ದಾರೆ.

ನಟ ಸಿದ್ಧಾಂತ್ ಕಪೂರ್‌ ಸೇರಿ ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕ ದ್ರವ್ಯ ಸೇವಿಸಿರುವ ಶಂಕಿತ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು, ಐವರು ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿದ್ದಾರೆ.

ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಜಿಟಿ ಮಾಲ್ ಮುಂಭಾಗದಲ್ಲಿರುವ “THE PARK” ಪಂಚ ತಾರ ಹೋಟೆಲ್ ಮೇಲೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಸುಮಾರು 35 ಮಂದಿ ಭಾಗವಹಿಸಿದ್ದು, ಎಲ್ಲರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

 ಇದನ್ನೂ ಓದಿ: ಯುಪಿ: 9 ಜನರ ಮೇಲೆ ಪೊಲೀಸರ ಅಮಾನವೀಯ ಹಲ್ಲೆ, ರಿಟರ್ನ್ ಗಿಫ್ಟ್ ಎಂದ ಬಿಜೆಪಿ ಶಾಸಕ

ಹಲಸೂರು ಇನ್‌ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದು, ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬಂಧಿಸಿರುವ ಐವರು ಹೋಟೆಲ್‌ನಲ್ಲಿ ಡ್ರಗ್ಸ್ ಸೇವಿಸಿದ್ದಾರೋ ಅಥವಾ ಹೊರಗೆ ಡ್ರಗ್ಸ್ ಸೇವಿಸಿ ಪಾರ್ಟಿಗೆ ಬಂದಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

2020 ರಲ್ಲಿ, ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಹೊಂದಿದ್ದ ಆರೋಪದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಪ್ರಶ್ನಿಸಿದವರಲ್ಲಿ ನಟಿ ಶ್ರದ್ಧಾ ಕಪೂರ್ ಕೂಡ ಸೇರಿದ್ದಾರೆ.


ಇದನ್ನೂ ಓದಿ: ಜಾಹೀರಾತಿನಲ್ಲಿ ತಪ್ಪು ಸಂದೇಶದ ಆರೋಪ: ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌ | Naanu Gauri

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

0
ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ...