Homeಕರ್ನಾಟಕಎಲ್ಲೆಂದರಲ್ಲಿ ವಾಹನ ಸವಾರರನ್ನು ಅಡ್ಡ ಹಾಕಿ ದಾಖಲೆ ಪರಿಶೀಲಿಸುವಂತಿಲ್ಲ: ಡಿಜಿಪಿ

ಎಲ್ಲೆಂದರಲ್ಲಿ ವಾಹನ ಸವಾರರನ್ನು ಅಡ್ಡ ಹಾಕಿ ದಾಖಲೆ ಪರಿಶೀಲಿಸುವಂತಿಲ್ಲ: ಡಿಜಿಪಿ

- Advertisement -
- Advertisement -

ಬೆಂಗಳೂರಿನಲ್ಲಿ ಯಾವುದೇ ಸಂಚಾರಿ ನಿಯಮ ಉಲ್ಲಂಘನೆಯಾಗದಿದ್ದರೂ ವಾಹನ ಸವಾರರನ್ನು ತಡೆದು ನಿಲ್ಲಿಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಟ್ರಾಫಿಕ್ ಪೊಲೀಸರ ವಿರುದ್ಧ ಪದೇ ಪದೇ ಆರೋಪ ಕೇಳಿ ಬರುತ್ತಿತ್ತು. ಈ ಹಿನ್ನೆಲೆ ಡಿಜಿ, ಐಜಿಪಿ ಪ್ರವೀಣ್ ಸೂದ್, ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಅನವಶ್ಯಕವಾಗಿ ಯಾವುದೇ ಸಂಚಾರಿ ನಿಯಮ ಉಲ್ಲಂಘಟನೆಯಾಗದಿದ್ದರೂ ವಾಹನಗಳನ್ನು ತಡೆದು ದಾಖಲೆ ಪರಿಶೀಲನೆ ನಡೆಸಲಾಗುತ್ತಿತ್ತು. ಇದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಅಧಿಕವಾಗಿತ್ತು. ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಆಕ್ರೋಶ ಹೊರಹಾಕಿದ್ದರು.

ಈ ಹಿನ್ನೆಲೆ ಸಭೆ ನಡೆಸಿದ ಡಿಜಿಪಿ ಪ್ರವೀಣ್‌ ಸೂದ್ ಬಳಿಕ ಆದೇಶ ಹೊರಡಿಸಿದ್ದಾರೆ. “ನಾನು ಮತ್ತೊಮ್ಮೆ ಪುನರುಚ್ಚರಿಸುತ್ತೇನೆ. ಕಣ್ಣಿಗೆ ಕಾಣುವ ಸಂಚಾರಿ ನಿಯಮ ಉಲ್ಲಂಘನೆ ಹೊರತು ಪಡಿಸಿ ಯಾವುದೇ ವಾಹನವನ್ನು ದಾಖಲೆಗಳನ್ನು ಪರಿಶೀಲಿಸಲು ಮಾತ್ರವೇ ನಿಲ್ಲಿಸುವಂತಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಕುಡಿದು ವಾಹನ ಚಲಾಯಿಸುವವರನ್ನು ಹೊರತು ಪಡಿಸಿ, ಈ ಆದೇಶವನ್ನು ತಕ್ಷಣದಿಂದಲೇ ಅನುಷ್ಠಾನಕ್ಕೆ ತರುವಂತೆ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಮತ್ತು ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್‌ ಅವರಿಗೆ ಸೂಚನೆ ನೀಡಲಾಗಿದೆ.

ಟ್ರಾಫಿಕ್ ಪೊಲೀಸರು ಕೇವಲ ದಾಖಲೆಗಳನ್ನು ಪರಿಶೀಲಿಸಲು ವಾಹನಗಳನ್ನು ನಿಲ್ಲಿಸಬಾರದು ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರ ಆದೇಶ ಇದು ಮೊದಲೇನಲ್ಲ.

2021 ರ ಡಿಸೆಂಬರ್‌ನಲ್ಲಿಯೂ ಸಹ, ದಾಖಲೆಗಳನ್ನು ಪರಿಶೀಲಿಸಲು ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಬಾರದು. ವಾಹನ ಸವಾರರಿಗೆ ಕಿರುಕುಳ ನೀಡುವುದು, ಅವರಿಗೆ ವಿಳಂಬವಾದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದರು.

ಯಾವುದೇ ಕಾರಣಕ್ಕೂ ವಾಹನಗಳನ್ನು ಸುಖಾಸುಮ್ಮನೆ ನಿಲ್ಲಿಸುವುದು ಸರಿಯಲ್ಲ. ನಗರದಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂದು ಅಂದಿನ ನಗರ ಪೊಲೀಸ್ ಮುಖ್ಯಸ್ಥ ಕಮಲ್ ಪಂತ್ ಹೇಳಿದ್ದರು. ಆದರೂ ರಸ್ತೆಯಲ್ಲಿ ವಾಹನಗಳಿಗೆ ಪೊಲೀಸರು ಅಡ್ಡ ಹಾಕುವುದು ನಡೆಯುತ್ತಲೇ ಇತ್ತು.


ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...