Homeಕರ್ನಾಟಕನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ: 318 ವಾಹನಗಳು ಪೊಲೀಸ್ ವಶಕ್ಕೆ

ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ: 318 ವಾಹನಗಳು ಪೊಲೀಸ್ ವಶಕ್ಕೆ

- Advertisement -
- Advertisement -

ಹೊಸ ವರ್ಷದ ಸಂಭ್ರಮಾಚರಣೆ ನಿರ್ಬಂಧಿಸಿ ವಿಧಿಸಲಾಗಿದ್ದ ನೈಟ್ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬೆಂಗಳೂರು ನಗರ ಪೊಲೀಸರು 318 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

“280 ದ್ವಿಚಕ್ರ ವಾಹನಗಳು, 28 ಕಾರು ಮತ್ತು 10 ಆಟೋಗಳನ್ನು ವಶ ಪಡಿಸಿಕೊಳ್ಳಲಾಗಿದೆ. ನೈಟ್ ಕರ್ಫ್ಯೂ ಗಡುವನ್ನು ಮೀರಿ ವಾಹನ ಸವಾರರು ಯಾವುದೇ ಉದ್ದೇಶವಿಲ್ಲದೆ ತಿರುಗಾಡುತ್ತಿದ್ದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡ ಬೆನ್ನಲ್ಲೇ ಹೊಸ ವರ್ಷದ ಸಂಭ್ರಮಾಚರಣೆಗೆ ವಿಧಿಸಿದ್ದ ನಿಬಂಧಗಳನ್ನು ಮತ್ತಷ್ಟು ಬಿಗಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸೆಂಬರ್‌ 31 ರ ಸಂಜೆ 6 ರಿಂದ ಜನವರಿ 1ರ ಬೆಳಗ್ಗೆ 5 ಗಂಟೆಯವರಗೆ ನಿಷೇಧಾಜ್ಞೆ ಜಾರಿ ಮಾಡಿ ಪರಿಷ್ಕೃತ ಆದೇಶ ಹೊರಡಿಸಲಾಗಿತ್ತು.

ಇನ್ನು ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ 10 ದಿನಗಳವರೆಗೆ ನೈಟ್ ಕರ್ಫ್ಯೂ ವಿಧಿಸಿದೆ. ಈ ವೇಳೆ ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ಜನರನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ.


ಇದನ್ನೂ ಓದಿ: ಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧ: ಇಂದು ಸಂಜೆ 6 ರಿಂದ ಬೆಂಗಳೂರಿನಲ್ಲಿ ಕರ್ಫ್ಯೂ ಜಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

0
"ಕಾಂಗ್ರೆಸ್ ಪ್ರಾಣಾಳಿಕೆಯಾ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆಯಾ?" "ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು,...