Homeಕರ್ನಾಟಕಬೆಂಗಳೂರು ಪೊಲೀಸರ ಚಿತ್ರಹಿಂಸೆಯಿಂದ ಕೈಕಳೆದುಕೊಂಡ ಯುವಕ: ಪಿಎಫ್‌ಐ ಆರೋಪ

ಬೆಂಗಳೂರು ಪೊಲೀಸರ ಚಿತ್ರಹಿಂಸೆಯಿಂದ ಕೈಕಳೆದುಕೊಂಡ ಯುವಕ: ಪಿಎಫ್‌ಐ ಆರೋಪ

ತನಗಾದ ಅನ್ಯಾಯಕ್ಕೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿ ಸಂತ್ರಸ್ತ ಸಲ್ಮಾನ್ ಖಾನ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

- Advertisement -
- Advertisement -

ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಯುವಕನೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ಕೈಕಳೆದುಕೊಳ್ಳುವಂತೆ ಮಾಡಿದ್ದಾರೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಂಗಳೂರು ಜಿಲ್ಲಾಧ್ಯಕ್ಷ ಸೈಯ್ಯದ್ ಜಾವೇದ್ ಆರೋಪಿಸಿದ್ದಾರೆ.

ಸಲ್ಮಾನ್ ಖಾನ್ ಎಂಬ ಯುವಕನನ್ನು ಯಾವುದೇ ದೂರು ದಾಖಲಿಸದೇ, ನಾಲ್ಕೈದು ದಿನ ಅಕ್ರಮ ಬಂಧನದಲ್ಲಿಟ್ಟು, ಬರ್ಬರವಾಗಿ ಥಳಿಸಿ ಚಿತ್ರಹಿಂಸೆ ನೀಡಿದ ಸರ್ಕಲ್ ಇನ್ಸ್ ಪೆಕ್ಟರ್ ಸೋಮಶೇಖರ್, ಎಸ್ಸೈ ಮಂಜುನಾಥ್ ರನ್ನು ಕೂಡಲೇ ಅಮಾನತುಗೊಳಿಸಬೇಕು. ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಬೇಕು. ಕುಟುಂಬದ ಆಧಾರಸ್ಥಂಭವಾಗಿದ್ದ ಸಲ್ಮಾನ್ ಕೈಕಳೆದುಕೊಂಡಿದ್ದು, ಸರಕಾರವು ಕುಟುಂಬಕ್ಕೆ 25 ಲಕ್ಷ ಪರಿಹಾರ ಧನ ಘೋಷಿಸಬೇಕು ಮತ್ತು ಆತನ ಚಿಕಿತ್ಸಾ ವೆಚ್ಚವನ್ನು ಸರಕಾರದ ವತಿಯಿಂದಲೇ ಭರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕಳ್ಳತನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೋಳಿ ಅಂಗಡಿ ನಡೆಸುತ್ತಿರುವ ಸಲ್ಮಾನ್ ಖಾನ್ ಎಂಬ ಯುವಕನನ್ನು ವರ್ತೂರು ಪೊಲೀಸರು ಅಕ್ಟೋಬರ್ 27ರಂದು ಬಂಧಿಸಿದ್ದರು. ಆತನ ಬಗ್ಗೆ ಯಾವುದೇ ಸುಳಿವು ಸಿಗದೇ ಇದ್ದಾಗ ಮನೆಮಂದಿ ನಾಪತ್ತೆ ದೂರು ದಾಖಲಿಸಲು ನಿರಂತರ ಮೂರು ದಿನಗಳ ವರೆಗೆ ಪೊಲೀಸ್ ಠಾಣೆಗೆ ಅಲೆದಾಡಿದ್ದರು. ತಮಗೆ ಆತನ ಬಗ್ಗೆ ಮಾಹಿತಿ ಇಲ್ಲ ಎಂದಿದ್ದ ಪೊಲೀಸರು ದೂರು ದಾಖಲಿಸಿಕೊಳ್ಳಲೂ ನಿರಾಕರಿಸಿದ್ದರು. ನಾಲ್ಕನೇ ದಿನ ತಾಯಿ ಠಾಣೆಗೆ ತೆರಳಿದ್ದ ಸಂದರ್ಭದಲ್ಲಿ ಸಲ್ಮಾನ್ ನನ್ನು ಠಾಣೆಯಲ್ಲಿ ಕೂಡಿ ಹಾಕಿರುವ ವಿಚಾರ ಆಕೆಯ ಗಮನಕ್ಕೆ ಬಂದಿದೆ. ಆ ವೇಳೆ ಆತನನ್ನು ಬಿಡುಗಡೆ ಮಾಡಬೇಕಾದರೆ 50,000 ರೂಪಾಯಿ ನೀಡಬೇಕೆಂದು ಪೊಲೀಸರು ಒತ್ತಡ ಹೇರಿದ್ದರೆಂದು ಸ್ವತಃ ಕುಟುಂಬಸ್ಥರು ಹೇಳಿದ್ದಾರೆ. ಎರಡು-ಮೂರು ದಿನಗಳ ಬಳಿಕ ತಾಯಿ 10,000 ರೂಪಾಯಿ ಹೊಂದಿಸಿ ಆತನನ್ನು ಬಿಡಿಸಿಕೊಂಡು ಬಂದಿದ್ದರು. ಮನೆಗೆ ಬಂದ ಬಳಿಕ, ಪೊಲೀಸರು ಠಾಣೆಯಲ್ಲಿ ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಆಸ್ಪತ್ರೆಗೆ ದಾಖಲಿಸಿದಾಗ ಪೊಲೀಸರ ಗಂಭೀರ ಹೊಡೆತದ ಪರಿಣಾಮ ಆತನ ಕೈಯಲ್ಲಿ ಸಂಪೂರ್ಣವಾಗಿ ಕೀವು ತುಂಬಿದ್ದು, ಕೂಡಲೇ ಕೈ ಕತ್ತರಿಸಬೇಕೆಂದು ವೈದ್ಯರು ಸೂಚಿಸಿದ್ದಾರೆ. ಪೊಲೀಸರ ಇಂತಹ ನಿಷ್ಕರುಣೆಯ ಕ್ರಮ ನಾಗರಿಕ ಸಮಾಜವನ್ನು ಆತಂಕಕ್ಕೆ ತಳ್ಳಿದೆ ಎಂದು ಸೈಯ್ಯದ್ ಜಾವೇದ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತನಗಾದ ಅನ್ಯಾಯಕ್ಕೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿ ಸಂತ್ರಸ್ತ ಸಲ್ಮಾನ್ ಖಾನ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.


ಇದನ್ನೂ ಓದಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...