Homeಕರ್ನಾಟಕಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ; ನಗರ ತುಂಬಾ ಟ್ರಾಫಿಕ್ ಜಾಂ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ; ನಗರ ತುಂಬಾ ಟ್ರಾಫಿಕ್ ಜಾಂ

- Advertisement -
- Advertisement -

ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಮತ್ತು ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿಗೆ ಬಂದಿಳಿದ್ದು, ಮುಂಜಾನೆಯಿಂದಲೆ ನಗರ ಟ್ರಾಫಿಕ್ ಜಾಂನಿಂದಾಗಿ ತತ್ತರಿಸಿ ಹೋಗಿದೆ. ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಭೇಟಿ ಅವರು ನೀಡಲಿದ್ದಾರೆ.

ಇಂದು ಪ್ರಧಾನಮಂತ್ರಿ ವಿಧಾನಸೌಧದಲ್ಲಿ ಕನಕದಾಸರು ಮತ್ತು ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿ, ನಂತರ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ನಂತರ ಅವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಪ್ರಧಾನಿ ಉದ್ಘಾಟಿಸಿ, ಮಧ್ಯಾಹ್ನ 12 ಗಂಟೆಗೆ ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮಧ್ಯಾಹ್ನ 12:30 ಕ್ಕೆ ಬೆಂಗಳೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ವಿಮಾನ ನಿಲ್ದಾಣದಿಂದ ಮತ್ತು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಜನರ ಸಂಚಾರ ಮಾರ್ಗವನ್ನು ಬದಲಾಯಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಕಾರ್ಯಕ್ರಮ ಇರುವುದರಿಂದ ನಗರದಿಂದ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಟ್ರಾಫಿಕ್‌‌ ದಟ್ಟಣೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ವಿಮಾನ ನಿಲ್ದಾಣಕ್ಕೆ ತೆರಳುವ ಜನರು ಮೈಲನಹಳ್ಳಿ-ಬೇಗೂರು ರಸ್ತೆಯಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ತೆರಳುವಂತೆ ತಿಳಿಸಲಾಗಿದೆ. ವಿಮಾನ ನಿಲ್ದಾಣ ಮತ್ತು ನಗರದ ನಡುವೆ ಪ್ರಯಾಣಿಸುವವರಿಗೂ ಬೆಳಿಗ್ಗೆ 9 ರಿಂದ ಸಂಜೆ 5 ರ ನಡುವೆ ಇದೇ ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

ನಗರಕ್ಕೂ ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಹಲವಾರು ಸಂಚಾರ ನಿರ್ಬಂಧಗಳು ಮತ್ತು ತಿರುವುಗಳನ್ನು ಸಹ ಜಾರಿಗೆ ತಂದಿದ್ದಾರೆ. ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ವೃತ್ತ, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ, ಏರ್‌ಪೋರ್ಟ್ ಎಲಿವೇಟೆಡ್ ಕಾರಿಡಾರ್, ಶೇಷಾದ್ರಿ ರಸ್ತೆ(ಮಹಾರಾಣಿ ಸೇತುವೆಯಿಂದ ಕೆಆರ್‌ಎಸ್ ರೈಲು ನಿಲ್ದಾಣದ ಪ್ರವೇಶದವರೆಗೆ), ಕೆ.ಜಿ.ರಸ್ತೆ, ವಾಟಾಳ್ ನಾಗರಾಜ್ ರಸ್ತೆ ಮತ್ತು ಕೆಂಪೇಗೌಡ ಅಂತರರಾಷ್ಟ್ರೀಯ ರಸ್ತೆಯ ಸುತ್ತಮುತ್ತಲಿನ ಎಲ್ಲಾ ರಸ್ತೆಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಸಂಚಾರ ನಿರ್ಬಂಧವನ್ನು ನಿರೀಕ್ಷಿಸಲಾಗಿದೆ.

ಪ್ರಧಾನಿ ಮೋದಿ ಆಗಮನದಿಂದಾಗಿ ನಗರದಲ್ಲಿ ಮುಂಜಾನೆಯಿಂದಲೇ ಟ್ರಾಫಿಕ್ ಜಾಂ ಕಿರಿಕಿರಿ ಹೆಚ್ಚಾಗಿದೆ. ಪ್ರಧಾನಿಯ ಸಾರ್ವಜನಿಕ ಭಾಷಣಕ್ಕೆ ಜನಸೇರಿಸಲು ಬಿಜೆಪಿ ಹೆಚ್ಚಿನ ಬಿಎಂಟಿಸಿಯ ಬಸ್ಸುಗಳನ್ನು ಬುಕ್‌ ಮಾಡಿದ್ದು, ಹೀಗಾಗಿ ತಮ್ಮ ದಿನನಿತ್ಯದ ಕೆಲಸಕ್ಕೆ ತೆರಳುವ ಸಾಮಾನ್ಯ ಜನರು ಬಸ್‌ಗಳು ಇಲ್ಲದೆ ಬಸ್‌ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಈ ನಡುವೆ ಬರುವ ಬಸ್‌ಗಳು ಕಿಕ್ಕಿರಿದು ಪ್ರಯಾಣಿಸುತ್ತಿವೆ.

ಕೆಂಪೇಗೌಡರ ಬೃಹತ್ ಪ್ರತಿಮೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರಿದೆ ಎಂದು ವರದಿಯಾಗಿದೆ. ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ, ಕೆಂಪೇಗೌಡರ ಮೊದಲ ಮತ್ತು ಅತೀ ಎತ್ತರದ ಪ್ರತಿಮೆಯಾಗಿದೆ. ವಿಶ್ವ ದಾಖಲೆ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ 6 ಸಾವಿರ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ: DDPU ಸುತ್ತೋಲೆಗೆ ಕಾಂಗ್ರೆಸ್ ಆಕ್ರೋಶ

ಬೃಹತ್ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಲಾಗಿದ್ದು, ವಿಮಾನ ನಿಲ್ದಾಣದ 23 ಎಕರೆ ಆವರಣದಲ್ಲಿ ಕೆಂಪೇಗೌಡರಿಗೆ ಮೀಸಲಾದ ಪಾರಂಪರಿಕ ಉದ್ಯಾನವನವಾಗಿ ಅಭಿವೃದ್ಧಿಪಡಿಸಲಾಗಿದೆ. ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬೃಹತ್ ಪ್ರತಿಮೆ ನಿರ್ಮಾಣವಾಗಿದೆ. 98 ಟನ್ ಕಂಚು ಮತ್ತು 120 ಟನ್ ಉಕ್ಕನ್ನು ಈ ಪ್ರತಿಮೆಗೆ ಬಳಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...