Homeಕರ್ನಾಟಕಬೆಂಗಳೂರು : IIScಯಲ್ಲಿ 'ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ' ಖಂಡಿಸಿ ಪ್ರತಿಭಟನೆ

ಬೆಂಗಳೂರು : IIScಯಲ್ಲಿ ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ಖಂಡಿಸಿ ಪ್ರತಿಭಟನೆ

ಪ್ಯಾಲೆಸ್ತೀನ್ ಧ್ವಜ ಕಿತ್ತೊಯ್ದ ಪೊಲೀಸರು

- Advertisement -
- Advertisement -

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯಲ್ಲಿ ‘ಭಾರತ-ಇಸ್ರೇಲ್‌ ವ್ಯಾಪಾರ ಶೃಂಗಸಭೆ’ ಆಯೋಜಿಸಿರುವುದನ್ನು ಖಂಡಿಸಿ ಹೋರಾಟಗಾರರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಐಐಎಸ್‌ಸಿ ಸಂಸ್ಥೆಯ ಕ್ಯಾಂಪಸ್ ಒಳಗೆ ಪ್ರತಿಭಟನೆ ಮತ್ತು ಹೊರಗೆ ಸುದ್ದಿಗೋಷ್ಠಿ ನಡೆಯಿತು. ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ), ಭಾರತೀಯ ಮ್ಯಾನೇಜ್ಮೆಂಟ್ ಸಂಸ್ಥೆ(ಐಐಎಂ), ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು (ಐಐಐಟಿಬಿ) ರಾಷ್ಟ್ರೀಯ ಉನ್ನತ ಸಂಶೊಧನಾ ಸಂಸ್ಥೆ(ಎನ್‌ಐಎಸ್‌) ಹಾಗೂ ಕರ್ನಾಟಕ ಸರ್ಕಾರ ಶೃಂಗಸಭೆಯಲ್ಲಿ ತೊಡಗಿಸಿಕೊಂಡಿದ್ದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

ಜಗತ್ತಿನಾದ್ಯಂತ ವಿಶ್ವವಿದ್ಯಾಲಯಗಳು ಇಸ್ರೇಲ್‌ನೊಂದಿಗಿನ ಸಂಬಂಧಕ್ಕೆ ಕಡಿವಾಣ ಹಾಕುತ್ತಿರುವಾಗ, ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳು ಇಸ್ರೇಲ್ ಜೊತೆ ಕೈಜೋಡಿಸಿ, ನ್ಯಾಯ ಹಾಗೂ ಅಂತಾರಾಷ್ಟ್ರೀಯ ಕಾನೂನಿನ ವಿರುದ್ಧ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾಝಾದಲ್ಲಿ ನರಮೇಧ ಮತ್ತು ಲೆಬಾನಾನಿ ಜನತೆಯ ವಿರುದ್ಧ ಹಿಂಸಾತ್ಮಕ ಕ್ರಿಯೆಗಳನ್ನು ತೀವ್ರಗೊಳಿಸುತ್ತಾ..ಇಸ್ರೇಲ್ ಸಾವಿರಾರು ಜನರ ಹತ್ಯೆಗೆ ಕಾರಣವಾಗಿರುವ ಸಮಯದಲ್ಲೇ ಐಐಎಸ್‌ಇಯು ತನ್ನ ಸಭಾಂಗಣವನ್ನು ಸಮಾವೇಶಕ್ಕೆ ನೀಡಿರುವುದ್ದಕ್ಕೆ ಪ್ರತಿಭಟನೆ ಮತ್ತು ಸುದ್ದಿಗೋಷ್ಟಿಯಲ್ಲಿದ್ದ ಹೋರಾಟಗಾರರು, ವಿದ್ವಾಂಸರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಭಾರತ ಮತ್ತು ಪ್ಯಾಲೆಸ್ತೀನ್ ಬಾವುಟಗಳನ್ನು ಒಟ್ಟಿಗೆ ಪ್ರದರ್ಶಿಸಲಾಯಿತು. ನ್ಯಾಯ ಮತ್ತು ಶಾಂತಿಗಾಗಿ ಬೆಂಗಳೂರು ಸಂಸ್ಥೆಯ ಐಶ್ವರ್ಯ ಅವರು ಸುದ್ದಿಗೋಷ್ಠಿ ಪ್ರಾರಂಭಿಸುತ್ತಿದ್ದಂತೆಯೇ, ಪೋಲಿಸರು ಬಂದು ಪ್ಯಾಲೆಸ್ತೀನ್ ಬಾವುಟವನ್ನು ತೆಗೆಯಬೇಕೆಂದು ಬಲವಂತ ಮಾಡುತ್ತಾ ಸುದ್ದಿಗೋಷ್ಠಿಯನ್ನು ನಿಲ್ಲಿಸಲು ಪ್ರಯತ್ನಿಸಿದರು. ಪೊಲೀಸರು ಪ್ಯಾಲೆಸ್ತೀನ್ ಬಾವುಟವನ್ನು ಒಬ್ಬ ಪ್ರತಿಭಟನಾಕಾರರ ಕೈಯಿಂದ ಕಿತ್ತೊಯ್ದ ನಂತರವೇ ಸುದ್ದಿಗೋಷ್ಠಿಯನ್ನು ಮುಂದುವರೆಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ (ಎಐಎಲ್‌ಎ) ಕ್ಲಿಫ್ಟನ್ ರೊಜಾರಿಯೋ ಅವರು “ನಾವು ಪ್ಯಾಲೆಸ್ತೀನ್‌ನ ಮಕ್ಕಳು ಮಹಿಳೆಯರ ಹತ್ಯೆಯನ್ನೊಳಗೊಂಡ ನರಮೇಧವನ್ನು ನೋಡುತ್ತಿದ್ದೇವೆ. ಹೀಗಿರುವಾಗ ನಮ್ಮ ಸಂಸ್ಥೆಗಳು ಇಸ್ರೇಲ್ ಜೊತೆ ವಾಣಿಜ್ಯ ಸಂಬಂಧಗಳನ್ನು ಬೆಳೆಸುತ್ತಿವೆ. ಇಸ್ರೇಲ್ ಜೊತೆ ಸಂಬಂಧಗಳನ್ನು ಬೆಳೆಸದಂತೆ ಸರ್ಕಾರಗಳಿಗೆ ಅಂತಾರಾಷ್ಟ್ರೀಯ ನ್ಯಾಯಾಲ ಆದೇಶ ನೀಡುತ್ತಿರುವಂತೆಯೇ ಐಐಎಸ್‌ಯು ಇಂದಿನ ಸಮಾವೇಶದಂತಹ ಕಾರ್ಯಕ್ರಮಗಳಿಗೆ ಆಶ್ರಯ ನೀಡಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ” ಎಂದರು.

ಖಗೋಳ ವಿಜ್ಞಾನಿ ಪ್ರಜ್ವಲ್ ಶಾಸ್ತ್ರಿ ಮಾತನಾಡಿ, ಐಐಎಸ್‌ಸಿ ಸಂಸ್ಥೆಯ ವ್ಯವಹಾರ ನೀತಿಗಳನ್ನು ಪ್ರಶ್ನಿಸಿದರು. “ನಾವು ಕೇಳಬೇಕಾಗಿರುವುದು ಏನೆಂದರೆ, ಈ ಸಂಸ್ಥೆಗಳು ಶಾಂತಿ ಮತ್ತು ಸಮಾತೆಯ ಬಾಳ್ವೆಗೋಸ್ಕರ ಜ್ಞಾನಾರ್ಥಿಗಳಾಗಿದ್ದಾವೆಯೇ? ಅಥವಾ ಹಿಂಸೆ, ಘರ್ಷಣೆ ಕದನಗಳನ್ನು ಪ್ರೋತ್ಸಾಹಿಸುತ್ತಿರುವೆಯೇ?. ಇಂತಹ ಸಮಾವೇಶಗಳನ್ನು ನಡೆಸುವುವುದು ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ನರಮೇಧವನ್ನು ಸಮರ್ಥಿಸಿದಂತೆ. ನಾವು ತಮ್ಮ ಸಭಾಂಗಣವನ್ನು ಮಾತ್ರ ಬಾಡಿಗೆಗೆ ನೀಡಿದ್ದೇವೆ ಎಂಬ ಐಐಎಸ್‌ಇಯ ಹೇಳಿಕೆಯನ್ನು ಪ್ರಶ್ನಿಸಬೇಕಾಗಿದೆ. ಅಂಬಾನಿಯಂತಹ ವಾಣಿಜ್ಯದಾರರು ಸಭಾಂಗಣದ ಲಭ್ಯತೆ ಕೋರಿದ್ದರೆ, ಪರಿಣಾಮಗಳನ್ನು ಪರಿಗಣಿಸದಯೇ ಐಐಎಸ್‌ಸಿ ಸಭಾಂಗಣವನ್ನು ನೀಡುತ್ತಿತ್ತೇ?” ಎಂದು ಪ್ರಶ್ನಿಸಿದರು.

“ಪ್ಯಾಲೆಸ್ತೀನ್‌ ಜನತೆಯ ಮೇಲೆ ಅಸ್ತ್ರಗಳನ್ನು ಬಳಸಿ ಇಸ್ರೇಲ್ ತನ್ನ ಅಸ್ತ್ರಗಳ ಶೋಧನೆ ಮಾಡುತ್ತಿದೆ. ಅದನ್ನು ಈ ಸಮಾವೇಶವು ಬೆಂಬಲಿಸುವುದೇ? ನಮ್ಮ ಶೈಕ್ಷಣಿಕ ಸಂಸ್ಥೆಗಳು ಇಂತಹದನ್ನು ಪ್ರಶ್ನೆಯಿಲ್ಲದೆ ಬೆಂಬಲಿಸಲು ನೈತಿಕತೆ ಇಲ್ಲವೇ? ಎಂದು ಸ್ತ್ರೀವಾದಿ ಚಳುವಳಿಗಾರರಾದ ಮಧು ಭೂಷಣ್ ಖಂಡನೆ ವ್ಯಕ್ತಪಡಿಸಿದರು. ಪ್ಯಾಲೆಸ್ತೀನ್ ಜನರಿಗೂ ಜೀವಿಸುವ ಹಕ್ಕಿದೆ. ಅದರೊಂದಿಗೆ ನಾವು ನಿಲ್ಲಬೇಕು. ನಮ್ಮ ಶೆಕ್ಷಣಿಕ ಸಂಸ್ಥೆಗಳ ಈ ನಡೆಯಿಂದ ನಮಗೆ ಬಹಳ ನೋವುಂಟಾಗಿದೆ” ಎಂದು ಹೇಳಿದರು.

ರಕ್ಷಣಾ ಮತ್ತು ಶಸ್ತ್ರಾಸ್ತ್ರ ವ್ಯಾಪಾರದ ಮೇಲೆ ಕೇಂದ್ರೀಕರಿಸಿದ ಈ ಸಮಾವೇಶವು, ಇಸ್ರೇಲ್ ವಿರುದ್ಧದ ಶಸ್ತ್ರಾಸ್ತ್ರ ನಿರ್ಬಂಧದ ಜಾಗತಿಕ ಕರೆಗಳಿಗೆ ವಿರುದ್ಧವಾಗಿವೆ ಎಂದು ಪ್ರತಿಭಟನಾಕಾರರು ಪ್ರತಿಪಾದಿಸಿದರು. ಇಸ್ರೇಲ್‌ನ ಕ್ರಮಗಳನ್ನು ಬೆಂಬಲಿಸದಂತೆ ಸಂಸ್ಥೆಗಳನ್ನು ಒತ್ತಾಯಿಸುವ ಇತ್ತೀಚಿನ ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ತೀರ್ಪಿನ ಬೆಳಕಿನಲ್ಲಿ, ಈ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಒಳಗೊಳ್ಳುವಿಕೆಯನ್ನೂ ಖಂಡಿಸಿದರು.

ಜಗತ್ತಿನಾದ್ಯಂತ ಅನೇಕರು ಪ್ಯಾಲೆಸ್ತೀನ್‌ನೊಂದಿಗೆ ಒಗ್ಗಟ್ಟಿನಿಂದ BDS( Boycott, Divestment, Sanctions) ಚಳುವಳಿ ಮೂಲಕ ಇಸ್ರೇಲ್‌ನಿಂದ ಹೂಡಿಕೆಯನ್ನು ತ್ಯಜಿಸಿದ್ದಾರೆ. ಐಐಎಸ್‌ಸಿ ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳು ಕೂಡ ಈ ಜಾಗತಿಕ ಚಳುವಳಿಗೆ ಸೇರಲು ಸಾರ್ವಜನಿಕರಿಂದ ಮನವಿ ಮಾಡಲಾಯಿತು. ಈ ಸಂಸ್ಥೆಗಳು ಮಾನವ ಹಕ್ಕುಗಳು ಮತ್ತು ನ್ಯಾಯದ ಸಾರ್ವತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಇಸ್ರೇಲ್ ವಿರುದ್ಧ ಶಸ್ತ್ರಾಸ್ತ್ರ ನಿರ್ಬಂಧದ ಸಾಮೂಹಿಕ ಕರೆಗೆ ಸೇರಬೇಕೆಂದು ಒತ್ತಾಯಿಸಿದರು.

ಭಾರತ-ಇಸ್ರೇಲ್ ಶೃಂಗಸಭೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಸಭಾಂಗಣದಲ್ಲಿ ಥಿಂಕ್ ಇಂಡಿಯಾ, ಇಂಡಿಯನ್ ಚೇಂಬರ್ ಆಫ್ ಇಂಟರ್‌ನ್ಯಾಷನಲ್ ಬ್ಯುಸಿನೆಸ್ ಮತ್ತು ಮೈಸೂರು ಲ್ಯಾನ್ಸರ್ಸ್ ಹೆರಿಟೇಜ್ ಫೌಂಡೇಶನ್ ಇಂದು (ಸೆ.23) ಭಾರತ-ಇಸ್ರೇಲ್ ಶೃಂಗಸಭೆ ಕಾರ್ಯಕ್ರಮವನ್ನು ಆಯೋಜಿಸಿದೆ.

ಇದನ್ನೂ ಓದಿ : ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...