Homeಕರ್ನಾಟಕಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಮತ್ತು ಕರ್ನಾಟಕದ ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇದುವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು (ಏಪ್ರಿಲ್ 23) ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರ ನೀಡದಿರುವುದನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

“ಸೆಪ್ಟೆಂಬರ್ 22, 2023ರಂದು ಬರದ ಕುರಿತು ನಾವು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೆವು. ಬಳಿಕ ಕೇಂದ್ರದ ತಂಡ ರಾಜ್ಯಕ್ಕೆ ಬಂದು 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿತ್ತು. ಈ ಮಧ್ಯೆ ಸಚಿವರಾದ ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ ಮತ್ತು ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದರು. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂತಹ ಬರಗಾಲ ಎದುರಾಗಿದೆ ಎಂದು ನಾವು ಮನವಿ ಕೊಟ್ಟಿದ್ದರೂ ಕೂಡ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದಿದ್ದರು” ಎಂದು ಸಿಎಂ ಹೇಳಿದರು.

ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ:

“ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ, ಬರಗಾಲಕ್ಕೆ ಅಲ್ಲ ಎಂದು ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ” ಎಂದು ಸಿಎಂ ತಿಳಿಸಿದರು.

ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ:

“ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ವೆಚ್ಚ ಭರಿಸಿದ್ದೇವೆ. 36 ಸಾವಿರ ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52 ಸಾವಿರ ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48 ಸಾವಿರ ಹೆಕ್ಟೇರ್ ಪ್ರದೇಶ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2 ಸಾವಿರ ರೂ.ವರೆಗೆ 34 ಲಕ್ಷ ರೈತರಿಗೆ ಪರಿಹಾರ ನೀಡಿದೆ. ಇದಕ್ಕಾಗಿ 650 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ ಎಂದು ಸಿಎಂ ವಿವರಿಸಿದರು.

ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ?

ನಾವು 18,172 ಕೋಟಿ ರೂಪಾಯಿ ಬರ ಪರಿಹಾರವನ್ನು ಎನ್‌ಡಿಆರ್‌ಎಫ್‌ನಿಂದ ಬಿಡುಗಡೆ ಮಾಡುವಂತೆ ಕೋರಿದ್ದೇವೆ. ಈ ಸಂಬಂಧ ಮನವಿ ಸಲ್ಲಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಹೇಳುವುದಾಗಿ ಪ್ರಧಾನಿ ಹೇಳಿದ್ದರು. ನಂತರ ನಾನು, ಕೃಷ್ಣಬೈರೇಗೌಡ ಡಿಸೆಂಬರ್ 20, 2023ರಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆವು. ಡಿಸೆಂಬರ್ 23ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಅವರು ಭರವಸೆ ನೀಡಿದ್ದರು. ಆದರೆ ಈವರೆಗೆ ಏನೂ ಮಾಡಿಲ್ಲ. ಹೀಗಿರುವಾಗ ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ? ರಾಜ್ಯಕ್ಕೆ ಮೇಲಿಂದ ಮೇಲೆ ಬರಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿ ಪ್ರತಿಭಟಿಸಿ ಅವರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದರು.

ಗೋ ಬ್ಯಾಕ್ ನರೇಂದ್ರ ಮೋದಿ, ಅಮಿತ್ ಶಾ

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್‌ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15ನೇ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ 5,495 ಕೋಟಿ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಕೊಡದೇ ಇರಲು ಕಾರಣ ನಿರ್ಮಲಾ ಸೀತಾರಾಮನ್ ಮತ್ತು ನರೇಂದ್ರ ಮೋದಿ ಎಂದು ಕಿಡಿಕಾರಿದರು.

ಬೆಂಗಳೂರಿನ ಪೆರಿ ಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡಿ ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಅದನ್ನೂ ಕೊಟ್ಟಿಲ್ಲ. ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಈಗ ಕರ್ನಾಟಕದ ಮತದಾರರಿಂದ ಮತ ಕೇಳಲು ಬರುತ್ತಿದ್ದಾರೆ. ಹಾಗಾಗಿ, ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದರು.

ಅಮಿತ್ ಶಾ ಬರ ಪರಿಹಾರ ಕೊಟ್ಟು ರಾಜ್ಯಕ್ಕೆ ಬರಲಿ

ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18,171 ಕೋಟಿ ರೂ. ರಾಜ್ಯದ ಬರ ಪರಿಹಾರ ಕೊಟ್ಟು ಆಮೇಲೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದು ಸಿಎಂ ಹೇಳಿದರು.

ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಸ್ಥಿತಿ

ರಾಜ್ಯ ಸರ್ಕಾರ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಪರಿಸ್ಥಿತಿ ಬಂತು. ಅಲ್ಲಿ ಅಟಾರ್ನಿ ಜನರಲ್ ಅವರು ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಸುಳ್ಳಿನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ತೆರಿಗೆ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದ ಹಾಗೂ ಸತ್ಯಾಂಶವನ್ನು ಮಂಡಿಸಿದ್ದರಿಂದ ಕರ್ನಾಟಕದ ಮೇಲೆ ನ್ಯಾಯಾಲಯ ಕರುಣೆ ತೋರಿತು. ಒಂದು ವೇಳೆ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೇ ಇದ್ದಿದ್ದರೆ, ಒಂದು ರೂ.ಪರಿಹಾರ ಕೂಡ ನೀಡುತ್ತಿರಲಿಲ್ಲ ಎಂದರು.

ನ್ಯಾಯ ಕೇಳಲು ಜನತಾ ನ್ಯಾಯಾಲಯದ ಮೊರೆ : ಸುರ್ಜೇವಾಲ

ರಾಜ್ಯದ ಪರವಾಗಿ, ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಾರತೀಯ ಚೆಂಬು ಪಕ್ಷದ ಸುಳ್ಳುಗಳನ್ನು ಜನತೆಗೆ ತೋರಿಸುತ್ತೇವೆ. ಈಗಾಗಲೇ ಸರ್ವೋಚ್ಚ ನ್ಯಾಯಾಲಯಕ್ಕೇ ಹೋಗಿದ್ದೇವೆ. ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ಭಾರತದ ಇತರೆಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದರು.

ಅನ್ಯಾಯ ಸಹಿಸಲು ಸಾಧ್ಯವಿಲ್ಲ

ರಾಜಕೀಯ ಸಂಘರ್ಷ ಮುಂದುವರೆದರೆ ರಾಜ್ಯಕ್ಕೆ ಬರಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇಲ್ಲವೇ? ತೊಂದರೆಯಾಗುವುದಿಲ್ಲವೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹಾಗಾದರೆ ನ್ಯಾಯ ಕೊಡಲಿ. ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದರು.

ಪ್ರತಿಭಟನೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...