Homeಕರ್ನಾಟಕಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಖಾಸಗಿ ವಿದ್ಯಾಸಂಸ್ಥೆಯಾದ ಚಾಣಕ್ಯ ವಿವಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿ 116 ಎಕರೆ ಭೂಮಿ ನೀಡಿರುವುದನ್ನು ಸರ್ಕಾರ ಈ ಕೂಡಲೇ ರದ್ದು ಮಾಡಬೇಕು ಎಂದು ಸಿಪಿಐಎಂನ ರಾಜ್ಯ ಸಮಿತಿ ಸದಸ್ಯ ಜಿ.ಸಿ.ಬೈಯ್ಯಾರೆಡ್ಡಿ ಒತ್ತಾಯಿಸಿದರು.

ಚಾಣಕ್ಯ ಖಾಸಗಿ ವಿವಿಗೆ ಅಕ್ರಮವಾಗಿ ನೀಡಿರುವ ಭೂಮಿ ರದ್ದತಿಗಾಗಿ ಕಾನೂನು ಉಲ್ಲಂಘನೆ ಮಾಡಿರುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಾರ್ಕ್ಸ್‌ ವಾದಿ ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಬಳಿ 2019ರಲ್ಲಿ ಕೆಐಎಡಿಬಿ ರೈತರ ಫಲವತ್ತಾದ 1300 ಎಕರೆ ಕೃಷಿ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದೆ. ಅದರಲ್ಲಿ 116 ಎಕರೆ ಭೂಮಿಯನ್ನು ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅಂದಿನ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯ ಎಂಬ ಖಾಸಗಿ ಸಂಸ್ಥೆಗೆ ಅತೀ ಕಡಿಮೆ ದರದಲ್ಲಿ ನೀಡಿದೆ. ಇದರಿಂದ ಸರ್ಕಾರಕ್ಕೆ ₹250 ಕೋಟಿ ನಷ್ಟ ಉಂಟಾಗಿದೆ ಎಂದು ಆರೋಪಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೊಂದು ದೊಡ್ಡ ಹಗರಣವಾಗಿದ್ದು, ಇದನ್ನು ಇಲ್ಲಿಗೆ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯಾದಾದ್ಯಂತ ಈ ರೀತಿಯ ಪ್ರಕರಣಗಳು ಹಲವಾರು ಬೆಳಕಿಗೆ ಬಂದಿದ್ದು ಈ ಹೋರಾಟವನ್ನು ರಾಜ್ಯವ್ಯಾಪಿ ವಿಸ್ತರಣೆ ಮಾಡುತ್ತೇವೆ ಎಂದು ಗುಡುಗಿದರು.

ದೇಶ ಸ್ವಾತಂತ್ರ್ಯ ಪಡೆದ ನಂತರ 70% ಜನರಿಗೆ ರಾಜಕೀಯ ಸ್ವಾತಂತ್ರ್ಯ ಮಾತ್ರ ಲಭಿಸಿದ್ದು, ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಇನ್ನೂ ಸಿಗಲಿಲ್ಲ. ತೊಂಬತ್ತರ ದಶಕದ ನಂತರ ಜಾಗತೀಕರಣದ ಪ್ರಭಾವದಿಂದ ದೇಶದಲ್ಲಿ ಏಳು ಲಕ್ಷ ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಸಿಗುತ್ತಿಲ್ಲ, ವ್ಯವಸಾಯ ಮಾಡಿ ಬದುಕಲು ಸರ್ಕಾರ ಭೂಮಿ ನೀಡುವುದಿಲ್ಲ. ರಾಜ್ಯದ ನಲವತ್ತು ಲಕ್ಷ ಎಕರೆ ಭೂಮಿಗೆ ದಲಿತರು, ಬಡ ರೈತರು ತುಂಡು ಭೂಮಿ ಪಡೆಯಲು ಅರ್ಜಿ ಹಾಕಿಕೊಂಡು ನಲವತ್ತು ವರ್ಷದಿಂದ ಕಾಯುತ್ತಿದ್ದಾರೆ. ಆದರೆ ಸರ್ಕಾರ ಅವರಿಗೆ ಭೂಮಿ‌ ನೀಡಲು ನಿರಾಕರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರೈತರಿಗೆ ಇನ್ಮುಂದೆ ಸಾಗುವಳಿ ಚೀಟಿ ಕೊಡಲ್ಲ, ಸರ್ಕಾರಿ ಭೂಮಿಯನ್ನು ಲೀಸ್ಗೆ ಕೊಡ್ತೇವೆ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದಾರೆ. ಸರ್ಕಾರ ಭೂಮಿಯನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ‌ ಕೊಟ್ಟು ರೈತರನ್ನು ಒಕ್ಕಲೆಬ್ಬಿಸಿ ಕಂಪನಿ ಕೃಷಿಗೆ ಪ್ರೊತ್ಸಾಹ ನೀಡುತ್ತಿದೆ ಎಂದು ಎಚ್ಚರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಬಳಿ ಜಮೀನುಗಳು ಇಲ್ಲ. ಅದರಲ್ಲೂ ದೇವನಹಳ್ಳಿ ತಾಲ್ಲೂಕಿನ 70% ಭೂಮಿ ರೈತರ ಬಳಿ ಇಲ್ಲ. ಮುವ್ವತ್ತು, ಐವತ್ತು ಮತ್ತು ನೂರು ಎಕರೆ ಭೂಮಿಯನ್ನು ನಗರದ ಬಂಡವಾಳಶಾಹಿಗಳು ಖರೀದಿಸಿ ಕಾಂಪೌಂಡ್ ಹಾಕಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಸರ್ಕಾರ ದೇಶಭಕ್ತಿಯ ಪಾಠ ಮಾಡುತ್ತಿದೆ. ಹಸಿವನ್ನು‌ ನೀಗಿಸುವ ರೈತರು ಮತ್ತು ಸಂಪತ್ತನ್ನು ಸೃಷ್ಟಿ ಮಾಡುವ ಕಾರ್ಮಿಕರು ನಿಜವಾದ ದೇಶಪ್ರೇಮಿಗಳು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕೆಐಎಡಿಬಿ 2019ರಲ್ಲಿ ರೈತರಿಂದ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಯಾವುದೇ ಅಭಿವೃದ್ಧಿ ಮಾಡದೆ ಖಾಸಗಿ ಸಂಸ್ಥೆಯಾದ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಎಕರೆಗೆ 50 ಲಕ್ಷ ರೂ.ನಂತೆ ಕೊಡಲಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರಿ ವಿವಿ ಆದರೆ ಎಕರೆ ಭೂಮಿಯನ್ನ 25 ಲಕ್ಷಕ್ಕೆ ಕೊಡಲಿ, ನಮ್ಮ ಅಭ್ಯಾಂತರವಿಲ್ಲ. ನಿಯಮಗಳ ಪ್ರಕಾರ ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಕಾರ್ಖಾನೆಗಳ ಅಭಿವೃದ್ಧಿಗೆ ಬಳಸಬೇಕು. ಆದರೆ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಖಾಸಗಿ ವಿವಿಗೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಬೊಕ್ಕಸಕ್ಕೆ ನಷ್ಟಮಾಡಿ ವಿವಿಗೆ ಭೂಮಿ ನೀಡಿರುವವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಚಂದ್ರತೇಜಸ್ವಿ‌‌ ಮಾತನಾಡಿ, “ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಸರ್ಕಾರ 116 ಖಾಸಗಿ ವಿವಿಗೆ ಮಂಜೂರಿ ಮಾಡಿದೆ. ಇದರಿಂದ ರಾಜ್ಯಕ್ಕೆ 250 ಕೋಟಿ ನಷ್ಟ ಉಂಟಾಗಿದೆ. ಬಿಜೆಪಿ ಸರ್ಕಾರದಲ್ಲಿ ತಮ್ಮ ಆರ್‌ಎಸ್‌ಎಸ್‌ನ ಅಂಗ ಸಂಸ್ಥೆಗಳಿಗೆ ಸಾವಿರಾರು ಎಕರೆ ಭೂಮಿ‌ ಮಂಜೂರು ಮಾಡಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ನಗರ ಜಿಲ್ಲೆಯ ಕುರುಬರಹಳ್ಳಿ ಬಳಿ ನಿವೇಶನಕ್ಕಾಗಿ ಮೀಸಲಿಟ್ಟ 35 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್ ಶಿಕ್ಷಣ ಸಂಸ್ಥೆಗೆ ಅಕ್ರಮವಾಗಿ ಮಂಜೂರು ಮಾಡಿರುವುದು ತಾಜಾ ಉದಾಹರಣೆಯಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೆಐಎಡಿಬಿ ನಿಯಮ ಮೀರಿ ಚಾಣಕ್ಯ ಖಾಸಗಿ ವಿವಿಗೆ ಭೂಮಿ ನೀಡಿರುವುದನ್ನು ಈ ಕೂಡಲೇ ರದ್ದು ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಆರ್.ಲತಾ ಅವರ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಕಮ್ಯುನಿಸ್ಟ್ ಪಕ್ಷದ ನಾಯಕರಾದ ಹರೀಂದ್ರ, ರುದ್ರಾರಾಧ್ಯ, ರೇಣುಕಾರಾಧ್ಯ, ಡಿಎಸ್‌ಎಸ್‌ನ ವೆಂಕಟರಾಜು, ಪಿ.ಎ.ವೆಂಕಟೇಶ್, ದಲಿತ ಮುಖಂಡ ಕಾರಳ್ಳಿ ಶ್ರೀನಿವಾಸ್, ರೈತ ಮುಖಂಡರಾದ ಮುಕುಂದ, ಪ್ರಮೋದ್ ಪ್ರತಿಭಟನೆಯಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...