Homeಕರ್ನಾಟಕನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

- Advertisement -

ಡ್ರಗ್ ಕೇಸ್‌ಗೆ ಸಂಬಂಧಿಸಿದಂತೆ ಬಂಧನದಲ್ಲಿದ್ದು ಜಾಮೀನಿನ ಮೇಲೆ ಹೊರ ಬಂದಿರುವ ಸ್ಯಾಂಡಲ್‌ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವಿಸಿದ್ದರು ಎಂದು FSL ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇಂತಹದ್ದೆ ಡ್ರಗ್ಸ್ ಸೇವಿಸಿದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಗಿಣಿ ಮತ್ತು ಸಂಜನಾ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇವರಿಂದ ಕೂದಲಿನ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳಿಸಲಾಗಿದ್ದು, ನಿನ್ನೆ ಪರೀಕ್ಷಾ ವರದಿ ಬಂದಿದೆ. ವರದಿಯಲ್ಲಿ ಇವರಿಬ್ಬರಿಗೂ ಡ್ರಗ್ಸ್ ತೆಗೆದುಕೊಳ್ಳುವ ಅಭ್ಯಾಸವಿತ್ತು ಎನ್ನಲಾಗಿದೆ.

ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದು, ನಟಿಯರ ಕೂದಲು ಸೇರಿದ ವಿವಿಧ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್ ಪರೀಕ್ಷೆಗೆ ಕಳಿಸಲಾಗಿತ್ತು. ಸ್ಯಾಂಪಲ್ ಪರೀಕ್ಷೆಯಲ್ಲಿ ಇವರು ಡ್ರಗ್ ಸೇವಿಸಿರುವುದು ದೃಢಪಟ್ಟಿದೆ. ತನಿಖಾಧಿಕಾರಿ ಇನ್ಸ್​ಪೆಕ್ಟರ್​ ಪುನೀತ್​ ಬೆಂಗಳೂರಿನ 33ನೇ CCH​ ಕೋರ್ಟ್​ಗೆ FSL  ವರದಿಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

10 ತಿಂಗಳ ನಂತರ ಹೈದರಾಬಾದ್ FSL ಕೇಂದ್ರದಿಂದ ರಿಪೋರ್ಟ್ ಬಂದಿದ್ದು, ಆರೋಪ ಸಾಬೀತಾಗಿರುವುದರಿಂದ ನಟಿಯರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಎಫ್‌ಎಸ್‌ಎಲ್ ವರದಿ ಕೈ ಸೇರಿರುವುದರಿಂದ ಸಿಸಿಬಿ ತನಿಖೆ ಮತ್ತಷ್ಟು ತೀವ್ರಗೊಳ್ಳಲಿದೆ ಎನ್ನಲಾಗಿದೆ. ಆದರೆ, ಜಾಮೀನಿನ ಮೇಲೆ ಇರುವುದರಿಂದ ಸದ್ಯಕ್ಕೆ ಬಂಧನದ ಭೀತಿ ಇಲ್ಲ ಎನ್ನಲಾಗುತ್ತಿದೆ.

ಪಾರ್ಟಿಗಳಲ್ಲಿ ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಪ್ರಕರಣವನ್ನು ಬೆನ್ನತ್ತಿದ ಸಿಸಿಬಿ ಪೊಲೀಸರು, ಕೆಲವರನ್ನು ಬಂಧಿಸಿದ್ದರು. ಕೆಲವರು ಈಗಾಗಲೇ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದ ಪೊಲೀಸರು, 2,900 ಪುಟಗಳ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಬಾಲಿವುಡ್‌ ನಟ ಸುಶಾಂತ್ ಸಿಂಗ್ ಅಸಹಜ ಸಾವಿನ ನಂತರ ದೇಶದ ಚಿತ್ರರಂಗ ವಲಯದಲ್ಲಿ ಡ್ರಗ್ಸ್‌ ಮಾಫಿಯಾ ಬಗ್ಗೆ ಸಾಕಷ್ಟು ಸುದ್ದಿಗಳು ಹೊರಬಂದಿದ್ದವು. ಇದರಲ್ಲಿ ಹಲವಾರು ತಾರೆಯರೂ ಸೇರಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದಲ್ಲಿಯೂ ಈ ಜಾಲ ಹರಡಿಕೊಂಡಿದೆ ಎಂಬ ಸುಳಿವು ಸಿಕ್ಕ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು.


ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ರಾಗಿಣಿ, ಸಂಜನಾ ಸೇರಿದಂತೆ 25 ಜನರ ವಿರುದ್ಧ 2,900 ಪುಟಗಳ ಚಾರ್ಜ್‌ಶೀಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ...
Wordpress Social Share Plugin powered by Ultimatelysocial