Homeಕರ್ನಾಟಕಬೆಂಗಳೂರು ಮಳೆ: ನಗರದ ನೆರೆ ಪೀಡಿತ ಪ್ರದೇಶಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಶಿಕ್ಷಣ ಇಲಾಖೆ

ಬೆಂಗಳೂರು ಮಳೆ: ನಗರದ ನೆರೆ ಪೀಡಿತ ಪ್ರದೇಶಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಶಿಕ್ಷಣ ಇಲಾಖೆ

- Advertisement -
- Advertisement -

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ವೈಟ್‌ಫೀಲ್ಡ್‌ನಲ್ಲಿ ನರೆಯಿಂದಾಗಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿರುವ ಘಟನೆಯು ನಡೆದಿದೆ. ಹೀಗಾಗಿ ನಗರದ ಮಹದೇವಪುರ, ಬೊಮ್ಮನಹಳ್ಳಿ, ಕೆ.ಆರ್. ಪುರಂ ಮತ್ತು ಮಂಡೂರು ವ್ಯಾಪ್ತಿಯ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ.

ಸರ್ಜಾಪುರ ರಿಂಗ್ ರಸ್ತೆ ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಲಘು ವಾಹನಗಳನ್ನು ನಿಷೇಧಿಸಲಾಗಿದೆ. ಮಳೆಯಿಂದಾಗಿ ಸರ್ಜಾಪುರ, ಬೆಳ್ಳಂದೂರು, ಮಾರತಹಳ್ಳಿ, ವರ್ತುಲ ರಸ್ತೆಗಳಲ್ಲಿ ನೀರು ನಿಂತು ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನ ಸನ್ನಿ ಬ್ರೂಕ್ಸ್‌ ಲೇಔಟ್‌ ನೀರಿನಿಂದ ಸಂಪೂರ್ಣ ಜಲಾವೃತವಾಗಿದ್ದು, ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ. ಲೇಔಟ್‌ನ ಜನರು ಮನೆಯಿಂದ ಹೊರಬರಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಸರ್ಜಾಪುರ ರಸ್ತೆಯ ದಿ ಕಂಟ್ರಿಸೈಡ್ ಅಪಾರ್ಟ್‌ಮೆಂಟ್ ಸಂಪೂರ್ಣ ಜಲಾವೃತಗೊಂಡಿದೆ. ರೈನ್‌ಬೋ ಡ್ರೈವ್ ಬಡಾವಣೆ ಪಕ್ಕದ ಕಂಟ್ರಿಸೈಡ್ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 5 ಅಡಿಯಷ್ಟು ನೀರು ನಿಂತಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯ ನೆರೆ ಪರಿಶೀಲನೆ ಸಭೆಯಲ್ಲಿ ನಿದ್ದೆ ಹೊಡೆದ ಸಚಿವ ಆರ್‌. ಅಶೋಕ್‌: ಕಾಂಗ್ರೆಸ್‌‌ ಆಕ್ರೋಶ

ಇಕೋಸ್ಪೇಸ್ ಬಳಿಯ ಮಾರತಹಳ್ಳಿ-ಸರ್ಜಾಪುರ ಮಾರ್ಗದ ಎರಡೂ ಬದಿಯ ರಸ್ತೆ ಜಲಾವೃತಗೊಂಡಿದೆ. ಸೋಮವಾರ ಒಂದು ಭಾಗದ ರಸ್ತೆ ಮಾತ್ರ ಮಳೆ ನೀರಿನಿಂದ ಮುಳುಗಿತ್ತು. ಮಂಗಳವಾರ ಎರಡು ಬದಿಯ ರಸ್ತೆಯೂ ಜಲಾವೃತಗೊಂಡಿವೆ. ರಸ್ತೆ ಮೇಲೆ ನೀರು ರಭಸವಾಗಿ ಹರಿಯುತ್ತಿದೆ. ವಿಭೂತಿಪುರ ಕೆರೆ, ಸಾವಳ ಕೆರೆಗಳು ಭರ್ತಿಯಾಗಿರುವುದರಿಂದ ನೀರು ರಸ್ತೆಗೆ ನುಗ್ಗುತ್ತಿದೆ.

ವಿಮಾನ ಸಂಚಾರದಲ್ಲಿ ವ್ಯತ್ಯಯ

ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಅನೇಕ ವಿಮಾನಗಳ ಹಾರಾಟ ವಿಳಂಬವಾಗಿದೆ. ಎಚ್ ಎ ಎಲ್ ವಿಮಾನ ನಿಲ್ದಾಣ ಸಮೀಪದ ಯಮಲೂರಿನ ಬಳಿ ರಸ್ತೆ ಜಲಾವೃತಗೊಂಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...