Homeಕರ್ನಾಟಕಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

ಜನರು ಮಳೆಯಿಂದಾಗಿ ಸಂಕಷ್ಟಪಡುತ್ತಿದ್ದರೆ ಸಂಸದ ತೇಜಸ್ವಿ ಸೂರ್ಯ ಹೊಟೇಲ್ ಒಂದರ ತಿಂಡಿಯನ್ನು ಪ್ರಮೋಟ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ರಸ್ತೆಗಳಲ್ಲೇ ನದಿಯಂತೆ ನೀರು ಹರಿಯುತ್ತಿದ್ದು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ನಡುವೆ ಜಲವಾವೃತ ರಸ್ತೆಯಲ್ಲಿ 23 ವರ್ಷದ ಯುವತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಸಾರ್ವಜನಿಕರು ರಾಜ್ಯ ಸರ್ಕಾರದ ಅಸಮರ್ಪಕ ನಿರ್ವಹಣೆ ಮತ್ತು ನಿರ್ಲಕ್ಷ್ಯವನ್ನು ಪ್ರಶ್ನಿಸುತ್ತಿದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತ ಯುವತಿಯನ್ನು ಅಖಿಲಾ ಎಂದು ಗುರುತಿಸಲಾಗಿದ್ದು, ಸೋಮವಾರ ರಾತ್ರಿ ತನ್ನ ಸ್ಕೂಟಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ನಗರದ ವೈಟ್‌ಫೀಲ್ಡ್ ಪ್ರದೇಶದ ಬಳಿ ವಿದ್ಯುತ್ ಕಂಬಕ್ಕೆ ಆಕಸ್ಮಿಕವಾಗಿ ತಗುಲಿ ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಸ್ತೆಯು ಜಲಾವೃತಗೊಂಡಿದ್ದರಿಂದ ಯುವತಿ ತನ್ನ ಸ್ಕೂಟಿಯಿಂದ ಇಳಿದು ಮೊಣಕಾಲು ಆಳದ ನೀರಿನಲ್ಲಿ ದ್ವಿಚಕ್ರ ವಾಹನವನ್ನು ತಳ್ಳಿಕೊಂಡು ಹೋಗುತ್ತಿದ್ದರು. ಈ ವೇಳೆ ಅವರು ವಿದ್ಯುತ್ ಕಂಬಕ್ಕೆ ತಗುಲಿದ್ದರಿಂದ ವಿದ್ಯುತ್ ಸ್ಪರ್ಶವಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರನ್ನು ಅಲ್ಲಿಗೆ ತರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಅವರ ಸಾವಿಗೆ ಬಿಬಿಎಂಪಿ ಅಧಿಕಾರಿಗಳು ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನಿರ್ಲಕ್ಷ್ಯವೇ ಕಾರಣ ಎಂದು ಅಖಿಲಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಮಳೆಯಿಂದಾಗಿ ಬೆಂಗಳೂರಿನಲ್ಲಿ ವರದಿಯಾದ ಮೊದಲ ಸಾವು ಇದಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಕೆರೆಗಳು ಮತ್ತು ಚರಂಡಿಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ. ರೇನ್‌ಬೋ ಡ್ರೈವ್ ಲೇಔಟ್, ಸನ್ನಿ ಬ್ರೂಕ್ಸ್ ಲೇಔಟ್, ಸರ್ಜಾಪುರ ರಸ್ತೆಯ ಕೆಲವು ಪ್ರದೇಶಗಳಲ್ಲಿ ಜಲಾವೃತವಾಗಿದ್ದು, ಬೆಳಿಗ್ಗೆ ವಿದ್ಯಾರ್ಥಿಗಳು ಮತ್ತು ಕಚೇರಿಗೆ ತೆರಳುವವರನ್ನು ಸಾಗಿಸಲು ಟ್ರ್ಯಾಕ್ಟರ್ ಮತ್ತು ದೋಣಿಗಳನ್ನು ಬಳಸಲಾಗಿದೆ.

ಮಳೆಯಿಂದಾಗಿ ತೊಂದರೆಗೀಡಾದರೆ ಬಿಬಿಎಂಪಿ 24×7 ಸಹಾಯವಾಣಿ (22660000) ಮತ್ತು WhatsApp ಸಹಾಯವಾಣಿ (9480685700), ಜೊತೆಗೆ ವಲಯ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ಅಲ್ಲದೆ ಟೋಲ್ ಫ್ರೀ ಸಂಖ್ಯೆ 1533 ಕೂಡಾ ಮಳೆ ಸಹಾಯವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಕೂಡಾ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ ಅಥವಾ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ವೈಟ್‌ಫೀಲ್ಡ್, ಬೆಳ್ಳಂದೂರು, ಮಾರತ್ತಹಳ್ಳಿ ಜಲಾವೃತಗೊಂಡಿದ್ದು ಸಂಚಾರ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಇಂದಿರಾನಗರ, ಕೆಂಗೇರಿ, ಆರ್‌.ಆರ್‌. ನಗರ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ.

ಬೆಂಗಳೂರಿನ ನಾಗರಿಕರು ಮಳೆಯಿಂದಾಗಿ ಸಂಕಷ್ಟ ಪಡುತ್ತಿದ್ದರೆ ಬೆಂಗಳೂರು ದಕ್ಷಿಣದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ನಗರದ ಹೊಟೇಲ್ ಒಂದರ ತಿಂಡಿಯ ಬಗ್ಗೆ ಪ್ರಮೋಷನ್ ಮಾಡುವಲ್ಲಿ ನಿರತರಾಗಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಉಂಟಾಗಿದೆ.

ಬೆಂಗಳೂರಿನ ಪರಿಸ್ಥಿತಿಯ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,“ಇದಕ್ಕೆಲ್ಲಾ ಹಿಂದಿನ ಕಾಂಗ್ರೆಸ್ ಸರಕಾರವೇ ಕಾರಣ. ಕಾಂಗ್ರೆಸ್ ಸರ್ಕಾರದ ಯೋಜಿತವಲ್ಲದ ದುರಾಡಳಿತದಿಂದಾಗಿ ಬೆಂಗಳೂರಿನ ಹಲವಾರು ವಸತಿ ಪ್ರದೇಶಗಳು ಪ್ರವಾಹದಂತಹ ಪರಿಸ್ಥಿತಿಗಳನ್ನು ಎದುರಿಸಬೇಕಾಯಿತು” ಎಂದು ಹೇಳಿದ್ದಾರೆ.

ಬೆಂಗಳೂರು ಮತ್ತು ಇತರೆ ಜಿಲ್ಲೆಗಳ ಪ್ರವಾಹ ನಿರ್ವಹಣೆಗೆ ಕರ್ನಾಟಕ ಸರ್ಕಾರವು 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...