Homeಕರ್ನಾಟಕಬೆಂಗಳೂರು: ಡ್ರಾಪ್‌ ಮಾಡುವುದಾಗಿ ಕರೆದೋಯ್ದು ಮಹಿಳೆ ಮೇಲೆ ಅತ್ಯಾಚಾರ; ಬಸ್ ಚಾಲಕ ಅರೆಸ್ಟ್

ಬೆಂಗಳೂರು: ಡ್ರಾಪ್‌ ಮಾಡುವುದಾಗಿ ಕರೆದೋಯ್ದು ಮಹಿಳೆ ಮೇಲೆ ಅತ್ಯಾಚಾರ; ಬಸ್ ಚಾಲಕ ಅರೆಸ್ಟ್

- Advertisement -
- Advertisement -

ಪಶ್ಚಿಮ ಬೆಂಗಳೂರಿನ ನಾಯಂಡಹಳ್ಳಿ ಬಳಿ ಖಾಸಗಿ ಶಾಲಾ ಬಸ್ಸಿನ ಚಾಲಕ ತನ್ನ ವಾಹನದೊಳಗೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಂಗಳವಾರ ನಡೆದಿದೆ.

ಆರೋಪಿ, ನಾಯಂಡಹಳ್ಳಿ ನಿವಾಸಿ ಶಿವಕುಮಾರ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಾಗರಭಾವಿಯಲ್ಲಿ ವಾಸವಾಗಿರುವ ಅತ್ಯಾಚಾರ ಸಂತ್ರಸ್ತೆ, ಖಾಸಗಿ ಶಾಲೆಯೊಂದರಲ್ಲಿ ಆಯಾ (ಪ್ಯೂನ್) ಆಗಿ ಕೆಲಸ ಮಾಡುತ್ತಿದ್ದಾರೆ.

ಕೆಲಸ ಮುಗಿಸಿ ನಾಯಂಡಹಳ್ಳಿ ಜಂಕ್ಷನ್ ಬಳಿ ಬಸ್‌ಗಾಗಿ ಮಹಿಳೆ ಕಾಯುತ್ತಿದ್ದಾಗ ಶಿವಕುಮಾರ್ ಬಸ್‌ ಚಲಾಯಿಸಿಕೊಂಡು ಆ ಮಹಿಳೆ ಇರುವತ್ತ ಬಂದಿದ್ದನು. ಮಹಿಳೆ ಡ್ರಾಪ್ ಗಾಗಿ ಬಸ್ಸಿನತ್ತ ಕೈಬೀಸಿದ್ದರು. ಶಿವಕುಮಾರ್ ಬಸ್ ನಿಲ್ಲಿಸಿ, “ನಾನೂ ನಾಗರಭಾವಿ ಕಡೆಗೆ ಹೋಗುತ್ತಿದ್ದೇನೆ” ಎಂದು ಹೇಳಿ ಮಹಿಳೆಯನ್ನು ಬಸ್‌ನಲ್ಲಿ ಕೂರಿಸಿಕೊಂಡಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಜೆ 5.30ರ ಸುಮಾರಿಗೆ ಮಹಿಳೆ ವಾಹನವನ್ನು ಹತ್ತಿದ ಕೂಡಲೇ ಶಿವಕುಮಾರ್ ನಾಯಂಡಹಳ್ಳಿ ಜಂಕ್ಷನ್‌ನಿಂದ ಮೂರು ಕಿ.ಮೀ ಆಸುಪಾಸಿನಲ್ಲಿರುವ ಕೈಲಾಸಗಿರಿಯ ಮಲೆ ಮಹದೇಶ್ವರ ದೇವಸ್ಥಾನದ ಕಡೆಗೆ ಹೋಗಿ ಬಸ್ಸನ್ನು ರಸ್ತೆಬದಿಯಲ್ಲಿ ನಿಲ್ಲಿಸಿದ್ದನು. ಮಹಿಳೆಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಬಸ್ಸಿನೊಳಗೆ ಅತ್ಯಾಚಾರ ಎಸಗಿದ್ದಾನೆ. “ಪೊಲೀಸರನ್ನು ಸಂಪರ್ಕಿಸಬೇಡ ಅಥವಾ ಘಟನೆಯ ಬಗ್ಗೆ ಯಾರಿಗೂ ಹೇಳಬೇಡ” ಎಂದು ಬೆದರಿಸಿದ ನಂತರ ಆತ ಸಂಜೆ 7 ಗಂಟೆ ಸುಮಾರಿಗೆ ಮಹಿಳೆಯನ್ನು ಡ್ರಾಪ್ ಮಾಡಿದ್ದಾನೆ.

ಬಸ್‌ನಿಂದ ಇಳಿದ ನಂತರ ಸಂತ್ರಸ್ತ ಮಹಿಳೆಯು ನೋಂದಣಿ ಸಂಖ್ಯೆಯೊಂದಿಗೆ ವಾಹನದ ಚಿತ್ರವನ್ನು ಕ್ಲಿಕ್ ಮಾಡಿಕೊಂಡರು. ಅದನ್ನು ತನ್ನ 20 ವರ್ಷದ ಮಗನಿಗೆ ತಲುಪಿಸಿದರು. ಚಾಲಕ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಗನಿಗೆ ತಿಳಿಸಿದರು.

ನಾಯಂಡಹಳ್ಳಿಯಲ್ಲಿ ವಾಹನ ಮತ್ತು ಚಾಲಕನನ್ನು ಕೆಲವು ಬಾರಿ ನೋಡಿರುವುದಾಗಿ ತಾಯಿ ತಿಳಿಸಿದ್ದರಿಂದ, ಸಂತ್ರಸ್ತೆಯ ಮಗ ತನ್ನ ಸ್ನೇಹಿತರ ಜೊತೆಗೂಡಿ ಬಸ್ ಹುಡುಕಲು ಹೊರಟನು.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರಾತ್ರಿ 8.30ರ ಸುಮಾರಿಗೆ ನಾಯಂಡಹಳ್ಳಿಯಲ್ಲಿ ಬಸ್ ಪತ್ತೆ ಹಚ್ಚಲಾಯಿತು. ಆ ವೇಳೆಗೆ ಚಾಲಕ ಕಂಠಪೂರ್ತಿ ಕುಡಿದಿದ್ದ. ಸಂತ್ರಸ್ತೆಯ ಮಗ ಮತ್ತು ಆತನ ಸ್ನೇಹಿತರು ಚಾಲಕನನ್ನು ಬಸ್‌ನಿಂದ ಹೊರಕ್ಕೆ ಎಳೆದುಕೊಂಡು ಬಂದು ಜಗಳವಾಡಿದರು. ಇವರಿಬ್ಬರ ಜಗಳ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಚಾಲಕ ಏನು ಮಾಡಿದ್ದಾನೆಂದು ಜನರಿಗೆ ತಿಳಿದಿರಲಿಲ್ಲ. ಅತ್ಯಾಚಾರ ನಡೆದಿರುವ ಕುರಿತು ಚಂದ್ರಾ ಲೇಔಟ್ ಪೊಲೀಸರಿಗೆ ಮಾಹಿತಿ ನೀಡಲಾಯಿತು.

“ನಾವು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ತಂಡವು ಬಸ್‌ನಿಂದ ಮತ್ತು ಸಂತ್ರಸ್ತೆಯಿಂದ ಸಾಕ್ಷ್ಯವನ್ನು ಸಂಗ್ರಹಿಸಿದೆ. ಅತ್ಯಾಚಾರ, ಕೊಲೆ ಯತ್ನ ಇತರ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಲಕ್ಷ್ಮಣ ಬಿ ನಿಂಬರಗಿ ತಿಳಿಸಿದ್ದಾರೆ.

“ಶಿವಕುಮಾರ್ ಪ್ರತಿನಿತ್ಯ ಇದೇ ರಸ್ತೆಯಲ್ಲಿ ಹೋಗುತ್ತಿದ್ದರಿಂದ ಕೆಲವು ಬಾರಿ ಆತನನ್ನು ನೋಡಿದ್ದೆ, ಆದರೆ ನಾವು ಪರಿಚಯಸ್ಥರಲ್ಲ” ಎಂದು ಮಹಿಳೆ ಪೊಲೀಸರಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...