Homeಮುಖಪುಟಮಹಿಳೆಯರ ಮೇಲೆ ಆ್ಯಸಿಡ್ ದಾಳಿ: ಅಗ್ರಸ್ಥಾನದಲ್ಲಿರುವ ಬೆಂಗಳೂರು

ಮಹಿಳೆಯರ ಮೇಲೆ ಆ್ಯಸಿಡ್ ದಾಳಿ: ಅಗ್ರಸ್ಥಾನದಲ್ಲಿರುವ ಬೆಂಗಳೂರು

- Advertisement -
- Advertisement -

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) 2022ರಲ್ಲಿ ನಡೆದ ಆ್ಯಸಿಡ್ ದಾಳಿಗಳ ಕುರಿತು ವರದಿಯನ್ನು ಬಹಿರಂಗಪಡಿಸಿದೆ. 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿಗಳು ನಡೆದಿದ್ದು, ನಗರ ಪೊಲೀಸರು 8 ಪ್ರಕರಣಗಳನ್ನು ದಾಖಲಿಸಿದ್ದಾರೆ ಎನ್‌ಸಿಆರ್‌ಬಿಯ ಇತ್ತೀಚಿನ ವರದಿ ತಿಳಿಸಿದೆ.

ಎನ್‌ಸಿಆರ್‌ಬಿ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಕಳೆದ ವರ್ಷ ಬೆಂಗಳೂರಿನಲ್ಲಿ 8 ಮಹಿಳೆಯರ ಮೇಲೆ ಆಸಿಡ್ ದಾಳಿ ಮಾಡಲಾಗಿದೆ. 19 ಮೆಟ್ರೋಪಾಲಿಟನ್ ನಗರಗಳ ಪೈಕಿ ಆಸಿಡ್ ದಾಳಿಗೆ ಬಲಿಯಾದ ಮಹಿಳೆಯರ ಒಟ್ಟಾರೆ ಪಟ್ಟಿಯನ್ನು ನೋಡಿದಾಗ ಬೆಂಗಳೂರು ಅಗ್ರಸ್ಥಾನದಲ್ಲಿದೆ.

2022ರಲ್ಲಿ ದೆಹಲಿಯಲ್ಲಿ 7 ಮಹಿಳೆಯರು ಆಸಿಡ್ ದಾಳಿಗೆ ಬಲಿಯಾಗಿದ್ದು, ಎರಡನೇ ಸ್ಥಾನದಲ್ಲಿದೆ. ನಂತರ ಅಹಮದಾಬಾದ್ ಮೂರನೇ ಸ್ಥಾನದಲ್ಲಿದ್ದು, ಅಲ್ಲಿ 5 ಪ್ರಕರಣಗಳು ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ಬಿಡುಗಡೆ ಮಾಡಿದ ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ಇದಲ್ಲದೆ ಎನ್‌ಸಿಆರ್‌ಬಿ ವಿಶ್ಲೇಷಣೆಯು 2022ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 7 ಆಸಿಡ್‌ ದಾಳಿಯ ಯತ್ನ ಪ್ರಕರಣ ದಾಖಲಾಗಿದೆ ಎಂದು ಹೇಳಿದೆ. ಬೆಂಗಳೂರಿನಲ್ಲಿ 3 ದಾಳಿ ಯತ್ನ ಪ್ರಕರಣಗಳು ದಾಖಲಾಗಿರುವ ಬಗ್ಗೆ ಉಲ್ಲೇಖಿಸಿದೆ. ಹೈದರಾಬಾದ್ ಮತ್ತು ಅಹಮದಾಬಾದ್‌ನಂತಹ ನಗರಗಳಲ್ಲಿ ಕೂಡ ಆಸಿಡ್‌ ದಾಳಿ ಯತ್ನದ 2 ಪ್ರಕರಣಗಳು ದಾಖಲಾಗಿದೆ.

ಕಳೆದ ವರ್ಷ ಬೆಂಗಳೂರನಲ್ಲಿ ನಡೆದ ಆಸಿಡ್ ದಾಳಿ ಪ್ರಕರಣ ಭಾರೀ ಸುದ್ದಿಯಾಗಿತ್ತು. 24 ವರ್ಷದ ಎಂ.ಕಾಂ ಪದವೀಧರೆ ಯುವತಿ ಮೇಲೆ ಏ.28ರಂದು ಕೆಲಸಕ್ಕೆ ಹೋಗುತ್ತಿದ್ದಾಗ ಆಕೆಯ ಮೇಲೆ ಆಸಿಡ್‌ ದಾಳಿ ನಡೆಸಲಾಗಿದೆ. ಪೊಲೀಸರ ಪ್ರಕಾರ ಆರೋಪಿ ನಾಗೇಶ್‌ ಹಲವು ವರ್ಷಗಳಿಂದ ಸಂತ್ರಸ್ತೆಯನ್ನು ಪ್ರೀತಿಸುವಂತೆ ಹಿಂಬಾಲಿಸುತ್ತಿದ್ದ. ಮದುವೆಗೆಂದು ಆಕೆಯನ್ನು ಸಂಪರ್ಕಿಸಿದ್ದು ಆಕೆ ತನ್ನ ಪ್ರಸ್ತಾವನೆಯನ್ನು ತಿರಸ್ಕರಿಸಿದಾಗ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಆರೋಪಿಯನ್ನು ಮೇ ತಿಂಗಳಲ್ಲಿ ತಿರುವಣ್ಣಾಮಲೈ ಆಶ್ರಮದಿಂದ ಬಂಧಿಸಲಾಗಿತ್ತು. ಅಲ್ಲಿ ಆತ ಖಾವಿ ವಸ್ತ್ರಧರಿಸಿ ಸ್ವಾಮೀಜಿ ವೇಷದಲ್ಲಿ ಅಡಗಿಕೊಂಡಿದ್ದ. ಜೂ.2023ರಲ್ಲಿ ಸಂತ್ರಸ್ತೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಗಿತ್ತು. ಇದೇ ರೀತಿಯ ಮತ್ತೊಂದು ಪ್ರಕರಣವು 2022ರ ಜೂ.10ರಂದು ನಡೆದಿದೆ. ಪ್ರಕರಣದಲ್ಲಿ ಆರೋಪಿಯು, ಪ್ರಿಯತಮೆ ತನ್ನ ಪ್ರೀತಿ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣ ಆಸಿಡ್‌ ದಾಳಿಯನ್ನು ನಡೆಸಿದ್ದ ಎನ್ನುವುದು ತನಿಖೆಯ ವೇಳೆ ಬಯಲಾಗಿತ್ತು.

ಇದನ್ನು ಓದಿ: ಬಿಎಸ್ಪಿ ಪಕ್ಷಕ್ಕೆ ಉತ್ತರಾಧಿಕಾರಿಯನ್ನು ನೇಮಿಸಿದ ಮಾಯಾವತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...