Homeಕರ್ನಾಟಕಬೆಂಗಳೂರು: ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್‌ ಮೈದಾನ ಸಜ್ಜು, ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು: ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್‌ ಮೈದಾನ ಸಜ್ಜು, ಸಾರ್ವಜನಿಕರಿಗಿಲ್ಲ ಪ್ರವೇಶ

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಬೆಂಗಳೂರಿನ  ಮಹಾತ್ಮ ಗಾಂಧಿ ರಸ್ತೆಯ ಮಾಣಿಕ್ ಷಾ ಪರೇಡ್‌ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ಆಹ್ವಾನ ಪತ್ರಗಳು ಮತ್ತು ಪಾಸ್ ಹೊಂದಿರುವವರಿಗೆ ಮಾತ್ರ ಪರೇಡ್‌ನಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ’ಕೇವಲ 200 ಜನರನ್ನು ಮಾತ್ರ ಪರೇಡ್‌ಗೆ ಆಹ್ವಾನಿಸಲಾಗಿದೆ, ಮಾಸ್ಕ್ ಧರಿಸುವುದು ಮತ್ತು ದೈಹಿಕ ಅಂತರವನ್ನು ಕಾಪಾಡುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ’ ಎಂದು ತಿಳಿಸಿದ್ದಾರೆ.

’ಪರೇಡ್‌ನಲ್ಲಿ ಭಾಗವಹಿಸುವವರಿಗೆ ಸಂಪೂರ್ಣ ಲಸಿಕೆ ಹಾಕಲಾಗಿದೆ. ಜೊತೆಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ವಂದನೆ ಸ್ವೀಕರಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಸ್ಥಳ ಮತ್ತು ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಬಿಬಿಎಂಪಿ ವತಿಯಿಂದ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೈದಾನ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ 52 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಮಾಸ್ಟರ್ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ಭದ್ರತೆಯ ಭಾಗವಾಗಿ 14 ತಂಡಗಳನ್ನು ರಚಿಸಲಾಗಿದೆ. ಈ ಬಾರಿ ಪರೇಡ್‌ನಲ್ಲಿ ಇತರ ರಾಜ್ಯಗಳ ಪೊಲೀಸ್ ತಂಡಗಳು ಪಾಲ್ಗೊಳ್ಳುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ ಎಂದು ಹೇಳಿದ್ದಾರೆ. “ಈ ವರ್ಷ, ಆಂಧ್ರ ಪ್ರದೇಶ ಪೊಲೀಸ್ ತಂಡವು ನಮ್ಮ ಪರೇಡ್‌ನ ಭಾಗವಾಗಲಿದೆ” ಎಂದು ಹೇಳಿದ್ದಾರೆ.

“ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು. ಕೊರೊನಾ ನಿಯಮಗಳನ್ನು ಉಲ್ಲಂಘಿಸದಂತೆ ಖಚಿತಪಡಿಸಿಕೊಳ್ಳಲು ಮಾರ್ಷಲ್‌ಗಳು ಸಹ ಇರುತ್ತಾರೆ. ಜನವರಿ 26 ರಂದು ಇನ್‌ಫೆಂಟ್ರಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ರಸ್ತೆ ಸೇರಿದಂತೆ ಮೈದಾನದ ಆಸುಪಾಸಿನಲ್ಲಿ ಸಂಚಾರ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೊಲ್ಕತ್ತಾ: ಗಣರಾಜ್ಯೋತ್ಸವ ಪೂರ್ವಾಭ್ಯಾಸದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...