Homeಕರೋನಾ ತಲ್ಲಣಬೆಂಗಳೂರು ಗಲಭೆಯ ಆರೋಪಿ ಸಾವು; ಕೊರೊನಾ ಸೋಂಕು ದೃಢ!

ಬೆಂಗಳೂರು ಗಲಭೆಯ ಆರೋಪಿ ಸಾವು; ಕೊರೊನಾ ಸೋಂಕು ದೃಢ!

ಶನಿವಾರ ಬೆಳಿಗ್ಗೆ ರೋಗಿಯನ್ನು ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಗಲಭೆಯಲ್ಲಿ ಗಾಯಗೊಂಡಿದ್ದ ಅವರನ್ನು ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆತನ ಗಾಯಗಳನ್ನು ಪರೀಕ್ಷಿಸಿದ ನಂತರ ಅವನನ್ನು ವಾಪಸ್ ಕಳುಹಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಗಲಭೆಯಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ಆರೋಪಿಸಿರುವ 24 ವರ್ಷದ ಯುವಕ, ಎದೆ ನೋವು, ಹೊಟ್ಟೆ ನೋವು ಮತ್ತು ಉಸಿರಾಟದ ತೊಂದರೆಗಳಿಂದ ಶನಿವಾರ ಮೃತಪಟ್ಟಿದ್ದಾನೆ.

ಆಗಸ್ಟ್ 12 ರಂದು ಬೆಳಿಗ್ಗೆ ಬಂಧಿಸಲ್ಪಟ್ಟ ಕೆ.ಜಿ.ಹಳ್ಳಿ ನಿವಾಸಿ ಸಯ್ಯದ್ ನದೀಮ್ ಎಂಬುವವನು ಸಾವನ್ನಪ್ಪಿದ್ದಾನೆ ಎಂದು ದೃಢಪಡಿಸಲಾಗಿದೆ.

ಬಲವಾದ ಪೆಟ್ಟುಬಿದ್ದ ಗಾಯದಿಂದಾಗಿ ಆತನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆತನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ. ಆತನಿಗೆ ಬುಲೆಟ್ ಗಾಯವಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯದಲ್ಲಿ ತೊಡಕು ಉಂಟಾದಾಗ ಶುಕ್ರವಾರ ರಾತ್ರಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಯಿತು. ಹೊಟ್ಟೆಯಲ್ಲಿ ರಂಧ್ರವಿದ್ದ ಕಾರಣ ಅವನಿಗೆ ಶಸ್ತ್ರಚಿಕಿತ್ಸೆ ಮಾಡುವುದು ಅಗತ್ಯವಾಗಿತ್ತು. ಇಂದು ಬೆಳಿಗ್ಗೆ ಶಸ್ತ್ರಚಿಕಿತ್ಸೆ ಮಾಡಲಾಯಿತು. ಆದರೆ ಹೆಚ್ಚಿನ ರಕ್ತದೊತ್ತಡ ಹೊಂದಿದ್ದ ಕಾರಣ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮಂಗಳವಾರ ರಾತ್ರಿ ಫೇಸ್‌ಬುಕ್ ಪೋಸ್ಟ್‌ನಿಂದ ಪ್ರಚೋದನೆಗೆ ಒಳಗಾದ ಜನಸಮೂಹ ನಡೆಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು 200 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಸೋದರಳಿಯ ನವೀನ್ ಎಂಬುವವನು, ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಫೇಸ್‌ಬುಕ್ ಕಾಮೆಂಟ್ ಮಾಡಿದ ನಂತರ ಎರಡು ಪೊಲೀಸ್ ಠಾಣೆಗಳು ಮತ್ತು ಕಾಂಗ್ರೆಸ್ ಶಾಸಕ ಅಖಂಡ್ ಶ್ರೀನಿವಾಸ್ ಮೂರ್ತಿ ಅವರ ನಿವಾಸದ ಮೇಲೆ ದಾಳಿ ನಡೆಸಲಾಯಿತು. ನವೀನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಗಲಭೆಯ ಸಮಯದಲ್ಲಿ ಗುಂಡೇಟಿನಿಂದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ರಾತ್ರಿ ಹಿಂಸಾಚಾರ ಉಲ್ಬಣಗೊಂಡ ನಂತರ ಪೊಲೀಸರು ಜನಸಮೂಹದ ಮೇಲೆ ಗುಂಡು ಹಾರಿಸಿದರು.


ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...