Homeಕರ್ನಾಟಕಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

ಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

- Advertisement -
- Advertisement -

ಬೆಂಗಳೂರು ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿವೆ. ಇದರಿಂದಾಗಿ ಅಗತ್ಯ ಸಂದರ್ಭಗಳಲ್ಲಿ ವಾಹನ ಸವಾರರಿಗೆ ದಾರಿ ತೋರಿಸಬೇಕಾದ ಗೂಗಲ್ ಮ್ಯಾಪ್ ಈಗ ಸವಾರರ ದಿಕ್ಕು ತಪ್ಪಿಸುತ್ತಿದೆ. 

ಬೆಂಗಳೂರಿನ ನಿವಾಸಿಯೊಬ್ಬರು ಜೆ ಪಿ ನಗರದಿಂದ ಹೊಸೂರಿನವರೆಗಿನ ಮಾರ್ಗಕ್ಕಾಗಿ ಗೂಗಲ್‌ ಮ್ಯಾಪ್‌ನಲ್ಲಿ ದಾರಿಯನ್ನು ಸರ್ಚ್‌ ಮಾಡಿದ್ದಾರೆ. ಆದರೆ, ಬೆಂಗಳೂರು ನಗರದ ರಸ್ತೆಗಳು ಜಲಾವೃತಗೊಂಡಿರುವ ಕಾರಣ ಕೆಲ ಮಾರ್ಗಗಳನ್ನು ಗೂಗಲ್ ಮ್ಯಾಪ್ ತೋರಿಸುತ್ತಿಲ್ಲ. 

ಭಾರೀ ಮಳೆಯಿಂದಾಗಿ ಬೆಂಗಳೂರಿನ ಸ್ಥಿತಿ ಸಿಕ್ಕಾಪಟ್ಟೆ ಹದಗೆಟ್ಟಿದೆ. ಯಾವ ರಸ್ತೆ ಜಲಾವೃತವಾಗಿದೆ, ಯಾವ ರಸ್ತೆಯಲ್ಲಿ ಸಂಚರಿಸಿದರೆ ಮುಂದಕ್ಕೆ ಹೋಗಬಹುದು ಎನ್ನುವ ಮಾಹಿತಿಯೇ ಲಭ್ಯವಿಲ್ಲವಾಗಿದೆ. ಕೆಲವು ರಸ್ತೆಗಳನ್ನು ನೀರು ನಿಂತ ಕಾರಣಕ್ಕೆ ಬ್ಲಾಕ್ ಮಾಡಲಾಗಿದೆ. ರಾಜಾಜಿನಗರದ ಒಳ ರಸ್ತೆಯಿಂದ ಮಹಾಕವಿ ಕುವೆಂಪು ರಸ್ತೆವರೆಗೆ ನಮೂದಿಸಿದರೆ ತಲುಪುವ ಸಮಯ ಮಾತ್ರ ತೋರಿಸುತ್ತಿದ್ದು, ಗೂಗಲ್ ಮ್ಯಾಪ್‌ ಯಾವುದೇ ಮಾರ್ಗವನ್ನು ತೋರಿಸುತ್ತಿಲ್ಲ. 

ಈ ಕುರಿತು ರಾಜಾಜಿನಗರದಲ್ಲಿ ಹೊಸದಾಗಿ ಮನೆ ಮಾಡಿರುವ ನಿವಾಸಿ ಧರ್ಮ ಎನ್ನುವವರು ಮಾತನಾಡಿ, “ರಾಜಾಜಿನಗರದಿಂದ ಕುವೆಂಪು ರಸ್ತೆಗೆ ಹತ್ತಿರವಿರುವ ನನ್ನ ಕಚೇರಿಗೆ ತಲುಪಲು ಮ್ಯಾಪ್ ಹಾಕಿದೆ. ಆದರೆ, ಮಳೆಯಿಂದಾಗಿ ಎಲ್ಲಿ ಯಾವ ರಸ್ತೆಯ ಮುಖಾಂತರ ಹೋಗಬೇಕೆಂದು ಗೂಗಲ್‌ ಮ್ಯಾಪ್‌ಗೂ ತಿಳಿಯುತ್ತಿಲ್ಲ. ನಾವೆಂತಹ ಪರಿಸ್ಥಿತಿಗೆ ತಲುಪಿದ್ದೇವೆ ನೋಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗೂಗಲ್ ಮ್ಯಾಪ್‌ ದಿಕ್ಕು ತಪ್ಪಿರುವುದರಿಂದ ಆಟೋ ಚಾಲಕರು, ಕ್ಯಾಬ್ ಚಾಲಕರು ಅತಿ ಹೆಚ್ಚು ತೊಂದರೆಗೊಳಗಾಗಿದ್ದಾರೆ. ಅನಿವಾರ್ಯವಾಗಿ ಗೂಗಲ್ ಮ್ಯಾಪ್ ಬಳಸುತ್ತಿದ್ದ ವಾಹನ ಸವಾರರು ಕೂಡ ಕಂಗಾಲಾಗಿದ್ದಾರೆ. ಏನೇ ಆದರೂ ಮಹಾ ಮಳೆಗೆ ವಾಹನ ಸವಾರರಿಗೆ ಸರಿಯಾದ ದಾರಿ ತೋರಿಸಬೇಕಾಗಿದ್ದ ಗೂಗಲ್ ಮ್ಯಾಪ್ ದಿಕ್ಕು ತಪ್ಪಿ ಅದನ್ನು ಅವಲಂಬಿಸಿದ್ದವರನ್ನೂ ದಿಕ್ಕು ತಪ್ಪಿಸುತ್ತಿದೆ. 

ಇದನ್ನೂ ಓದಿ: ಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ        

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....