Homeಕರ್ನಾಟಕಜೆಡಿಎಸ್‌ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಪ್ರಶ್ನಿಸಿ ಸಿಎಂ ಇಬ್ರಾಹಿಂ ಸಲ್ಲಿಸಿದ್ದ ಅರ್ಜಿ ವಜಾ

ಜೆಡಿಎಸ್‌ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಪ್ರಶ್ನಿಸಿ ಸಿಎಂ ಇಬ್ರಾಹಿಂ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ತನ್ನನ್ನು ಉಚ್ಚಾಟಿಸಿರುವುದು ಮತ್ತು ನೂತನ ಅಧ್ಯಕ್ಷರಾಗಿ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ನೇಮಿಸಿರುವುದನ್ನು ಪ್ರಶ್ನಿಸಿ ಸಿಎಂ ಇಬ್ರಾಹಿಂ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸತ್ರ ನ್ಯಾಯಾಲಯ ಶುಕ್ರವಾರ ವಜಾ ಮಾಡಿದೆ.

ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ಶಿವಪುತ್ರ ಕುಜ್ಜಿ ಅವರು ಸಿಎಂ ಇಬ್ರಾಹಿಂ ಅವರ ಅರ್ಜಿಯನ್ನು ವಜಾ ಮಾಡಿದ್ದಾರೆ.

ಕರ್ನಾಟಕದ ವಿಧಾನಸಭೆ ಚುನಾವಣೆಗೂ ಮುನ್ನ, ಅಂದರೆ ಆಗಸ್ಟ್ 3,2022ರಂದು ಜೆಡಿಎಸ್‌ ಅಧ್ಯಕ್ಷರಾಗಿ ತನ್ನನ್ನು ರಾಜ್ಯ ಕಾರ್ಯಕಾರಿಣಿಯಲ್ಲಿ ಘೋಷಿಸಲಾಗಿತ್ತು. ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿ ಕುಮಾರಸ್ವಾಮಿ ಅವರು 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು, ಸಕಾರಣವಿಲ್ಲದೇ ತನ್ನನ್ನು 16 ನವೆಂಬರ್ 2023ರಂದು ಪಕ್ಷದಿಂದ ಉಚ್ಚಾಟಿಸಿದ್ದಾರೆ ಎಂದು ಇಬ್ರಾಹಿಂ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಮೊಕದ್ದಮೆ ದಾಖಲಿಸಿದ್ದರು.

ವಕೀಲ ಶತಬೀಷ್ ಹಾಗೂ ಶಿವಣ್ಣ ಮೂಲಕ ಸಿಎಂ ಇಬ್ರಾಹಿಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಪ್ರಕರಣ ಪ್ರತಿವಾದಿಗಳಾಗಿ ಹೆಚ್‌ಡಿ ದೇವೇಗೌಡರು ಮತ್ತು ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಮಾಡಲಾಗಿತ್ತು.

ಇದನ್ನೂ ಓದಿ : ಕೇಂದ್ರದಿಂದ ಬರ ಪರಿಹಾರ ಕೊಡಿಸುವಂತೆ ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...