Homeಕರ್ನಾಟಕಬೆಂಗಳೂರು ಕಾಲ್ತುಳಿತ | ಆರ್‌ಸಿಬಿ ಮಾರ್ಕೆಟಿಂಗ್ ಮ್ಯಾನೇಜರ್ ಸೇರಿದಂತೆ ನಾಲ್ವರ ಬಂಧನ

ಬೆಂಗಳೂರು ಕಾಲ್ತುಳಿತ | ಆರ್‌ಸಿಬಿ ಮಾರ್ಕೆಟಿಂಗ್ ಮ್ಯಾನೇಜರ್ ಸೇರಿದಂತೆ ನಾಲ್ವರ ಬಂಧನ

- Advertisement -
- Advertisement -

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧ ವಿಭಾಗ ಮತ್ತು ಬೆಂಗಳೂರು ಪೊಲೀಸರು ಶುಕ್ರವಾರ ಬೆಳಿಗ್ಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB)ನ ಮಾರ್ಕೆಟಿಂಗ್ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬೆಂಗಳೂರು ಕಾಲ್ತುಳಿತ

ನಾಲ್ವರು ಪರಾರಿಯಾಗಲು ಯತ್ನಿಸುತ್ತಿದ್ದಾಗ ನಗರದ ಹೊರವಲಯದಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಅವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಇಲಾಖೆ ಮತ್ತು ಕೇಂದ್ರ ಅಪರಾಧ ವಿಭಾಗದ (CCB) ಉನ್ನತ ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

“ನಾಲ್ವರನ್ನು ಸುರಕ್ಷಿತವಾಗಿರಿಸಲಾಗಿದೆ ಮತ್ತು ಮುಂದಿನ ಪ್ರಕ್ರಿಯೆ ನಡೆಯುತ್ತಿದೆ. ಅವರನ್ನು ಇನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿಲ್ಲ ಮತ್ತು ಬಂಧನ ಪ್ರಕ್ರಿಯೆಯ ಔಪಚಾರಿಕೀಕರಣ ನಡೆಯುತ್ತಿದೆ” ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಶಂಕಿತರಲ್ಲಿ ಒಬ್ಬನನ್ನು ಆರ್‌ಸಿಬಿಯ ಮಾರ್ಕೆಟಿಂಗ್ ಮತ್ತು ಕಂದಾಯ ಮುಖ್ಯಸ್ಥ ನಿಖಿಲ್ ಸೋಸಲೆ ಎಂದು ಮೂಲಗಳು ಗುರುತಿಸಿವೆ. ಇತರ ಮೂವರ ವಿವರಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ, ಆದರೆ ಕೆಲವು ಮಾಧ್ಯಮ ವರದಿಗಳು ಎರಡನೇ ಶಂಕಿತನನ್ನು ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ನ ಸುನಿಲ್ ಮ್ಯಾಥ್ಯೂ ಎಂದು ಗುರುತಿಸಿವೆ. ಇತರ ಇಬ್ಬರ ಗುರುತುಗಳು ಇನ್ನೂ ತಿಳಿದುಬಂದಿಲ್ಲ.

ಗುರುವಾರದಂದು ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನ ನಂತರ ಈ ಕ್ಷಿಪ್ರ ಕಾರ್ಯಾಚರಣೆ ನಡೆದಿದೆ.

ಬುಧವಾರ ಆರ್‌ಸಿಬಿ ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಸಂಭ್ರಮಾಚರಣೆಯಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಸಾವನ್ನಪ್ಪಿದವರಲ್ಲದೆ, ಅರವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರವು, ಆರ್‌ಸಿಬಿ ಸಂಸ್ಥೆ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿತ್ತು.

ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ನಗರದ ಪೊಲೀಸ್ ಕಮೀಷನರ್‌ ಅವರನ್ನು ತಕ್ಷಣದಿಂದ ಅಮಾನತ್ತು ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಗುರುವಾರ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ.” ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು, “ಆರ್‌ಸಿಬಿ ಸಂಸ್ಥೆ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ” ಎಂದು ಹೇಳಿದ್ದರು.

“ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ.” ಎಂದು ಸಿಎಂ ಹೇಳಿದ್ದರು.

“ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.” ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು. ಬೆಂಗಳೂರು ಕಾಲ್ತುಳಿತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...