Homeಕರ್ನಾಟಕಉಕ್ರೇನ್‌ನಿಂದ ಸುರಕ್ಷಿತವಾಗಿ ಬೆಂಗಳೂರು ತಲುಪಿದ ರಾಜ್ಯದ 12 ವಿದ್ಯಾರ್ಥಿಗಳು

ಉಕ್ರೇನ್‌ನಿಂದ ಸುರಕ್ಷಿತವಾಗಿ ಬೆಂಗಳೂರು ತಲುಪಿದ ರಾಜ್ಯದ 12 ವಿದ್ಯಾರ್ಥಿಗಳು

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಈ ಸಂಘರ್ಷದ ಸಮಯದಲ್ಲಿ ಪೂರ್ವ ಉಕ್ರೇನ್‌ನಲ್ಲಿ ಹಲವಾರು ಭಾರತೀಯರು ಸಿಲುಕಿಕೊಂಡಿದ್ದಾರೆ. ಅವರಲ್ಲಿ ಹಲವು ಮಂದಿ ಕನ್ನಡಿಗರು ಇದ್ದು, ಅವರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆ ತರುವ ಕೆಲಸ ನಡೆಯುತ್ತಿದೆ. ಅದರಲ್ಲಿ 12 ವಿದ್ಯಾರ್ಥಿಗಳು ಇಂದು ಬೆಂಗಳೂರಿಗೆ ಮರಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಸಂಘರ್ಷದಿಂದಾಗಿ ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ಗೆ ತೆರಳಿದ್ದ ರಾಜ್ಯದ ವಿದ್ಯಾರ್ಥಿಗಳು ಕಳೆದ ಕೆಲವು ದಿನಗಳಿಂದ ಭಯದ ಸ್ಥಿತಿಯಲ್ಲಿ ಇದ್ದರು. ಸರ್ಕಾರದ ಸಹಾಯದಿಂದ 12 ವಿದ್ಯಾರ್ಥಿಗಳು ಭಾನುವಾರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣ ತಲುಪಿದ್ದಾರೆ.

ಈ ವಿದ್ಯಾರ್ಥಿಗಳನ್ನು ಕಂದಾಯ ಸಚಿವ ಆರ್ ಅಶೋಕ್‌ ಸ್ವಾಗತಿಸಿ, ಅವರೊಂದಿಗೆ ಸಂವಾದ ನಡೆಸಿದ್ದಾರೆ“ಇಂದು ಮುಂಬೈನಿಂದ 12 ಜನರು ಆಗಮಿಸಿದ್ದಾರೆ. ದೆಹಲಿಯಿಂದ 18 ಜನರು ಆಗಮಿಸಲಿದ್ದಾರೆ. ರಾಜ್ಯ ಕಂದಾಯ ಇಲಾಖೆ ಕರ್ನಾಟಕ ಭವನದಲ್ಲಿ ವಿದ್ಯಾರ್ಥಿಗಳಿಗೆ ಎಲ್ಲ ವ್ಯವಸ್ಥೆ ಮಾಡಿದೆ. ಅವರು ಅಲ್ಲಿಯೇ ಉಳಿದುಕೊಂಡಿದ್ದಾರೆ. ಕನ್ನಡಿಗರಿಗಾಗಿ ಬೆಂಗಳೂರಿಗೆ ವಿಮಾನ ಟಿಕೆಟ್ ಕಾಯ್ದಿರಿಸಿದೆ. ಸಿಎಂ ಅವರೊಂದಿಗಿನ ಚರ್ಚೆಯಂತೆ, ಉಕ್ರೇನ್‌ನಿಂದ ಹಿಂದಿರುಗುವ ಭಾರತೀಯರ ವೆಚ್ಚವನ್ನು ಕಂದಾಯ ಇಲಾಖೆ ಭರಿಸಲು ನಿರ್ಧರಿಸಿದೆ” ಎಂದು ಕಂದಾಯ ಸಚಿವ ಆರ್‌.ಅಶೋಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

 

“ಈ ವಿದ್ಯಾರ್ಥಿಗಳು ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳಲಿದ್ದಾರೆ. ಇಂದು 5 ಬ್ಯಾಚ್‌ಗಳ ಮತ್ತೊಂದು ತಂಡ ಆಗಮಿಸುತ್ತಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕಕ್ಕೆ ಸೇರಿದ 386 ಜನರ ವಿವರಗಳನ್ನು ನಾವು ಹೊಂದಿದ್ದೇವೆ. ಎಂದು ನೋಡಲ್ ಅಧಿಕಾರಿಯಾಗಿ ನೇಮಕಗೊಂಡ ಕರ್ನಾಟಕ ರಾಜ್ಯ ವಿಪತ್ತು ಎಂಜಿಎಂಟಿ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಹೇಳಿದ್ದಾರೆ.

ಉಕ್ರೇನ್‌ನಿಂದ ಆಗಮಿಸುವ ವಿದ್ಯಾರ್ಥಿಗಳು ಮುಂಬೈ ಮತ್ತು ದೆಹಲಿಯಲ್ಲಿ ಬಂದಿಳಿದ ನಂತರ ರಾಜ್ಯದ ವಿವಿಧ ಭಾಗಗಳಲ್ಲಿರುವ ತಮ್ಮ ಮನೆಗಳನ್ನು ತಲುಪಲು  ಸರ್ಕಾರ ಎಲ್ಲಾ ಸಹಾಯವನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದರು.

ಇನ್ನು, ಉಕ್ರೇನ್‌ನ ಪಶ್ಚಿಮ ಭಾಗದಲ್ಲಿ ಸಿಲುಕಿರುವವರನ್ನು ರಸ್ತೆ ಮೂಲಕ ಕರೆತರಲು ನಿರ್ಧರಿಸಲಾಗಿದೆ. ಅದರಂತೆ, ಅನೇಕ ವಿದ್ಯಾರ್ಥಿಗಳು ರೊಮೇನಿಯಾ ಮೂಲಕ ಆಗಮಿಸುತ್ತಿದ್ದಾರೆ. ಅವರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...