Homeಕರ್ನಾಟಕಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

- Advertisement -
- Advertisement -

ನಕಲಿ ಅಂಕಪಟ್ಟಿ ತಯಾರಿಸುವ ದಂಧೆ ನಡೆಸುತ್ತಿದ್ದ ‘ಸಿಸ್ಟಮ್ಸ್ ಕ್ವೆಸ್ಟ್ ಪ್ರೈವೇಟ್ ಲಿಮಿಟೆಡ್‌’ ಎಂಬ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಶನಿವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ವಿಕಾಸ್ ಭಗತ್ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ ನಕಲಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡಿದ ಆರೋಪವನ್ನು ಪೊಲೀಸರು ಹೊರಿಸಿದ್ದಾರೆ.

26 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ವಿದ್ಯಾಭ್ಯಾಸವನ್ನು ಕರೆಸ್ಪಾಂಡೆನ್ಸ್ ಕೋರ್ಸ್ ಮೂಲಕ ಮುಂದುವರಿಸುವ ಉದ್ದೇಶದಿಂದ ಶಂಕಿತನ ಕಚೇರಿಯನ್ನು ಸಂಪರ್ಕಿಸಿದಾಗ ನಕಲಿ ಅಂಕ ಪಟ್ಟಿ ತಯಾರಿಸುವ ವಂಚನೆಯ ಯೋಜನೆ ಬಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಚೇರಿ ಸಿಬ್ಬಂದಿಯು ವಿದ್ಯಾರ್ಥಿಗೆ 25,000 ರೂಪಾಯಿ ನೀಡಿದರೆ ಪರೀಕ್ಷೆಗೆ ಹಾಜರಾಗದೆ ನಕಲಿ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ವಿದ್ಯಾರ್ಥಿಯು ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಜನವರಿ 3 ರಂದು ಅಧಿಕೃತವಾಗಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ರಾಜಾಜಿನಗರದ ನ್ಯೂ ಕ್ವೆಸ್ಟ್ ಟೆಕ್ನಾಲಜೀಸ್, ಜೆ.ಪಿ.ನಗರದ ಸಿಸ್ಟಂ ಕ್ವೆಸ್ಟ್, ಚಂದ್ರಪ್ಪ ಲೇಔಟ್‌ನ ಆರೋಹಿ ಇನ್ಸ್‌ಟಿಟ್ಯೂಟ್, ದಾಸರಹಳ್ಳಿಯ ವಿಶ್ವ ಜ್ಯೋತಿ ಕಾಲೇಜು ಮತ್ತು ವಿಜಯನಗರದ ಬೆನಕ ಕರೆಸ್ಪಾಂಡೆನ್ಸ್ ಕಾಲೇಜಿನಲ್ಲಿ ಪೊಲೀಸರು ಹಲವು ಬಾರಿ ಸಂಘಟಿತ ದಾಳಿ ನಡೆಸಿದ್ದು, ಈ ವೇಳೆ 6,800 ನಕಲಿ ಅಂಕಪಟ್ಟಿ ಕಾರ್ಡ್‌ಗಳು, 22 ಕಂಪ್ಯೂಟರ್‌/ಲ್ಯಾಪ್‌ಟಾಪ್‌ಗಳನ್ನು ಮತ್ತು 13 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ವೇಳೆ ಕಂಪನಿ ಮತ್ತು ಅದರ ಸಹವರ್ತಿಗಳ ಕಚೇರಿಗಳ ಬಗ್ಗೆ ಹುಡುಕಾಡಿದಾಗ, ಸಂಸ್ಥೆಯನ್ನು ಕಂಪ್ಯೂಟರ್ ಮತ್ತು ಸಾಫ್ಟ್‌ವೇರ್ ಅಭಿವೃದ್ಧಿಯ ವ್ಯವಹಾರವಾಗಿ ನೋಂದಾಯಿಸಲ್ಪಟ್ಟಿತ್ತು. ಆದರೆ ಈ ಸಂಸ್ಥೆಗಳಲ್ಲಿ ಯಾವುದೇ ಶಿಕ್ಷಣ-ಸಂಬಂಧಿತ ಸೇವೆಗಳನ್ನು ನೀಡುವುದಿಲ್ಲ ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಪ್ರಮುಖ ಆರೋಪಿ ವಿಕಾಸ್ ಭಗತ್ ತನಗೆ ಹೆಸರಾಂತ ವಿಶ್ವವಿದ್ಯಾನಿಲಯಗಳೊಂದಿಗೆ ಸಂಪರ್ಕವಿದೆ ಮತ್ತು ವಂಚನೆಯ ಪ್ರಮಾಣಪತ್ರಗಳನ್ನು ನೀಡುವುದಾಗಿ ವಿದ್ಯಾರ್ಥಿಗಳನ್ನು ನಂಬಿಸಿ ವಂಚಿಸುತ್ತಿದ್ದ ಎಂದು ವರದಿಯಾಗಿದೆ.

ಪ್ರತಿ ನಕಲಿ ದಾಖಲೆಗೆ ಭಗತ್ ವಿದ್ಯಾರ್ಥಿಗಳಿಂದ 25 ಸಾವಿರರಿಂದ 30 ಸಾವಿರ ರೂಗಳ ವರೆಗೆ ವಸೂಲಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಸಿಕ್ಕಿಂ ವಿಶ್ವವಿದ್ಯಾಲಯ, ಅಣ್ಣಾಮಲೈ ವಿಶ್ವವಿದ್ಯಾಲಯ, ಗೀತಂ ವಿಶ್ವವಿದ್ಯಾಲಯ, ಬಿಎಸ್‌ಐಟಿ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿಗಳಿದ್ದವು ಎಂದು ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...