Homeಕರ್ನಾಟಕಬೆಂಗಳೂರು: ಹೋಟೆಲ್‌ನಲ್ಲಿ ನೀರು ಕುಡಿದಿದ್ದಕ್ಕೆ ಇಬ್ಬರು ದಲಿತರ ಹತ್ಯೆ

ಬೆಂಗಳೂರು: ಹೋಟೆಲ್‌ನಲ್ಲಿ ನೀರು ಕುಡಿದಿದ್ದಕ್ಕೆ ಇಬ್ಬರು ದಲಿತರ ಹತ್ಯೆ

- Advertisement -
- Advertisement -

ಹೋಟೆಲ್‌ವೊಂದರಲ್ಲಿ ನೀರು ಕುಡಿದರೆಂಬ ಕಾರಣಕ್ಕೆ ಇಬ್ಬರು ದಲಿತರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ರಾಜಾನಕುಂಟೆ ಪೊಲೀಸ್ ಠಾಣೆ ಎದುರು ಶವವಿಟ್ಟು ಗುರುವಾರ ಪ್ರತಿಭಟನೆ ನಡೆಸಲಾಗಿದೆ.

ಇತ್ತೀಚಿಗೆ ಹೋಟೆಲ್‍ವೊಂದರಲ್ಲಿ ನೀರು ಕುಡಿದ ವಿಚಾರಕ್ಕೆ ನಡೆದ ಜಗಳವನ್ನೇ ಮುಂದಿಟ್ಟುಕೊಂಡು ಇಪ್ಪತ್ತು ದಿನಗಳ ಬಳಿಕ ಕಾರು ಹತ್ತಿಸಿ ಇಬ್ಬರು ದಲಿತರನ್ನು ಕೊಲೆ ಮಾಡಲಾಗಿದೆ. ಈ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಹೆಸರಘಟ್ಟ ಹೋಬಳಿಯ ಚಲ್ಲಹಳ್ಳಿ ನಿವಾಸಿಗಳಾದ ನಾಗರಾಜ್ ಹಾಗೂ ರಾಮಯ್ಯ ಎಂಬುವರನ್ನು ಉದ್ದೇಶ ಪೂರಕವಾಗಿ ಜಾತಿಯ ವಿಚಾರಕ್ಕೆ ಕಾರು ಹತ್ತಿಸಿ ಹಾಡಹಾಗಲೇ ಹತ್ಯೆ ಮಾಡಲಾಗಿದೆ, ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಮೃತರ ಸಂಬಂಧಿಕರು, ಬಿಎಸ್ಪಿ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ರಾಜಾನಕುಂಟೆ ಪೊಲೀಸ್ ಠಾಣೆ ಎದುರು ಶವವಿಟ್ಟು ಗುರುವಾರ ಪ್ರತಿಭಟನೆ ನಡೆಸಲಾಗಿದೆ

ಇಪ್ಪತ್ತು ದಿನಗಳ ಹಿಂದೆ ಹೆಸರುಘಟ್ಟದಲ್ಲಿ ಹೋಟೆಲ್‍ವೊಂದರಲ್ಲಿ ನಾಗರಾಜ್ ನೀರು ಕುಡಿದ ವಿಚಾರಕ್ಕೆ ಭರತ್ ಎಂಬಾತ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳನ್ನು ಬಳಸಿದ್ದ. ಚುನಾವಣೆ ಮುಗಿದ ಬಳಿಕ ಕೊಲೆ ಮಾಡುವುದಾಗಿ ಬಹಿರಂಗ ಬೆದರಿಕೆ ಹಾಕಿದ್ದ. ಈ ಭರತ್ ಈಗಾಗಲೇ ರೌಡಿಶೀಟರ್ ಆಗಿದ್ದು, ಈತನ ತಂದೆ ವಿರುದ್ಧವೂ ಅನೇಕ ಗಂಭೀರ ಆರೋಪಗಳಿವೆ. ಕೃತ್ಯದಲ್ಲಿ ಭಾಗಿಯಾಗಿರುವ ಭರತ್, ನಿಶಾಂತ್, ವಿನಯ್ ಎಂಬುವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮೃತರ ಸಂಬಂಧಿ ವೆಂಕಟೇಶ್ ದೂರು ಸಲ್ಲಿಸಿದ್ದಾರೆ.

ಘಟನೆ ಸಂಬಂಧ ಇಲ್ಲಿನ ರಾಜಾನಕುಂಟೆ ಠಾಣಾ ಪೊಲೀಸರಿಗೆ ದೂರು ನೀಡಲಾಗಿದ್ದು, “ಗುರುವಾರ ಮುಂಜಾನೆ ನಾಗರಾಜ್, ರಾಮಯ್ಯ ಹಾಗೂ ಗೋಪಾಲ್ ಎಂಬುವರು ಒಂದೇ ಬೈಕ್‍ನಲ್ಲಿ ಇಲ್ಲಿನ ಕೆಎಂಎಫ್ ಕಾರ್ಖಾನೆಗೆ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ನಾಗರಾಜ್, ರಾಮಯ್ಯ ಸ್ಥಳದಲ್ಲಿಯೇ ಮೃತಪಟ್ಟರೆ, ಗೋಪಾಲ್ ಅವರು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರನ್ನು ರೌಡಿಶೀಟರ್ ಭರತ್, ನಿಶಾಂತ್, ವಿನಯ್ ಸೇರಿದಂತೆ ಇತರರು ಶರವೇಗವಾಗಿ ಚಲಾಯಿಸಿಕೊಂಡು ಬಂದು ಉದ್ದೇಶ ಪೂರಕವಾಗಿ ಹತ್ಯೆ ಮಾಡಿದ್ದಾರೆ” ಎಂದು ವೆಂಕಟೇಶ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

ಬಿಎಸ್ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಪ್ರತಿಕ್ರಿಯಿಸಿ, “ಉದ್ದೇಶ ಪೂರಕವಾಗಿಯೇ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ. ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಿದರೆ, ಇದು ಕೊಲೆಯೆಂದೇ ಹೇಳಬಹುದಾಗಿದೆ. ಸದ್ಯ ಪೊಲೀಸರು ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಆದರೆ, ಇಂತಹ ಭಯಾನಕ ಕೃತ್ಯವೆಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ, ಹೋರಾಟ ಮುಂದುವರೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಪ್ರತಿಕ್ರಿಯಿಸಿ, “ಘಟನೆಗೆ ಸಂಬಂಧಿಸಿದಂತೆ ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಘಟನೆಗೆ ಕಾರಣನಾದ ಭರತ್ ಮತ್ತು ಆತನ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಕಾಂಗ್ರೆಸ್‌ನಲ್ಲಿ ನಿಲ್ಲದ ರಾಜೀನಾಮೆ ಪರ್ವ; ಎಎಪಿ ಮೈತ್ರಿ ವಿರೋಧಿಸಿ ಪಕ್ಷ ತೊರೆದ ಮತ್ತಿಬ್ಬರು...

0
ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅರವಿಂದ್ ಸಿಂಗ್ ಲವ್ಲಿ ನಂತರ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದ್ದು, ದೆಹಲಿಯ ಎರಡು ಲೋಕಸಭಾ ಸ್ಥಾನಗಳಿಗೆ ನೇಮಿಸಿದ್ದ ಅದರ ಇಬ್ಬರು ನಾಯಕರು, ವೀಕ್ಷಕರಾದ ನೀರಜ್ ಬಸೋಯಾ ಮತ್ತು ನಸೀಬ್ ಸಿಂಗ್...