Homeಕರ್ನಾಟಕಬೆಂಗಳೂರು : ರೈಲು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವು

ಬೆಂಗಳೂರು : ರೈಲು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವು

- Advertisement -
- Advertisement -

ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ಭಾನುವಾರ (ನ.24) ಮಧ್ಯಾಹ್ನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ಕೇರಳ ಮೂಲದ ಇಬ್ಬರು ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ರೈಲ್ವೆ ಪೊಲೀಸರು ಮೃತರನ್ನು ಕೇರಳದ ಪತ್ತನಂತಿಟ್ಟ ಜಿಲ್ಲೆಯ ಸ್ಟರ್ಲಿನ್ ಎಲಿಜಾ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಎಂದು ಗುರುತಿಸಿದ್ದಾರೆ. ಇವರು ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಹತ್ತಿರದ ಪಿಜಿಯಲ್ಲಿ ನೆಲೆಸಿದ್ದರು.

ಇದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ. ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಇತರ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಳಗಾವಿ ಕಡೆಗೆ ಹೋಗುತ್ತಿದ್ದಾಗ ಮಧ್ಯಾಹ್ನ 2.35ರ ಸುಮಾರಿಗೆ ದುರ್ಘಟನೆ ನಡೆದಿದ್ದು, ಇಬ್ಬರೂ ರೈಲು ಡಿಕ್ಕಿ ಹೊಡೆದ ತಕ್ಷಣವೇ ಸಾವನ್ನಪ್ಪಿದ್ದಾರೆ. ಶವಗಳು ಹಳಿಗಳ ಮೇಲೆ ತೀವ್ರವಾಗಿ ಛಿದ್ರಗೊಂಡ ಸ್ಥಿತಿಯಲ್ಲಿ ಕಂಡುಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ವಿದ್ಯಾರ್ಥಿಗಳು ತಮ್ಮ ಪಿಜಿಗೆ ತೆರಳಲು ರೈಲ್ವೆ ಹಳಿ ದಾಟುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆಯ ಸಮಯದಲ್ಲಿ ರೈಲು ಅತಿ ವೇಗದಲ್ಲಿ ಚಲಿಸುತ್ತಿತ್ತು. ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆಯುವ ಹೊತ್ತಿಗೆ ನಿಲ್ದಾಣದಿಂದ ಹೊರಟು ವೇಗ ಪಡೆದುಕೊಂಡಿತ್ತು ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸರು ಮತ್ತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ವರದಿ (ಯುಡಿಆರ್) ದಾಖಲಾಗಿದ್ದು, ವಿದ್ಯಾರ್ಥಿಗಳ ಇತ್ತೀಚಿನ ಚಟುವಟಿಕೆಗಳು ಮತ್ತು ಹಿನ್ನೆಲೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ರೈಲ್ವೆ ಅಧಿಕಾರಿಗಳು ಸಹ ತನಿಖೆ ಆರಂಭಿಸಿದ್ದಾರೆ.

ಮೃತದೇಹಗಳನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿದ್ದು, ಮುಂದಿನ ಪ್ರಕ್ರಿಯೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...