Homeಕರ್ನಾಟಕಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

- Advertisement -
- Advertisement -

ಬೆಂಗಳೂರಿನ ಬಾಬುಸಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಮಂಗಳವಾರ ಕುಸಿದು ಬಿದ್ದ ಪರಿಣಾಮ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಟ್ಟಡದ ಅಡಿಯಲ್ಲಿ 17 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭಾರೀ ಮಳೆಯ ನಡುವೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ವಿಭಾಗದ ಎರಡು ರಕ್ಷಣಾ ವ್ಯಾನ್‌ಗಳನ್ನು ಒಳಗೊಂಡ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಬೆಂಗಳೂರು

“17 ಜನರು ಕಟ್ಟಡದೊಳಗೆ ಸಿಲುಕಿರುವ ಆತಂಕವಿದೆ. ಇತರ ತಂಡಗಳ ಸಹಾಯದಿಂದ ಸಂಘಟಿತ ಪ್ರಯತ್ನದ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ಹೇಳಿದ್ದಾರೆ ಎಂದು ವರದಿಯಾಗಿದೆ. ಕಟ್ಟಡವು ಸಂಪೂರ್ಣವಾಗಿ ಕುಸಿದಿದ್ದು, ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತೋರುತ್ತಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಇತ್ತೀಚೆಗೆ ದಾಖಲೆಯ ಮಳೆ ಸುರಿಯುತ್ತಿದ್ದು, ಭಾನುವಾರ ಬೆಳಿಗ್ಗೆ 8:30 ರವರೆಗೆ GKVK ವೀಕ್ಷಣಾಲಯದಲ್ಲಿ 186.2 mm ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿದೆ. ಈ ಹಿಂದೆ 24 ಗಂಟೆಗಳ ದಾಖಲೆಯ ಮಳೆ 1997ರ ಅಕ್ಟೋಬರ್ 1ದಂದು 178.9 mm ಆಗಿತ್ತು. ಪ್ರಸ್ತತ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಿಶೇಷವಾಗಿ ಉತ್ತರ ಬೆಂಗಳೂರಿನಲ್ಲಿ ತೀವ್ರ ಪರಿಣಾಮ ಬೀರಿದೆ. ಬೆಂಗಳೂರು

ನಗರದ ಯಲಹಂಕ ಮತ್ತು ದೊಡ್ಡಬೊಮ್ಮಸಂದ್ರದಂತಹ ಪ್ರದೇಶಗಳು ಜಲಾವೃತಗೊಂಡಿದ್ದು, ರಕ್ಷಣೆ ಮತ್ತು ಸ್ಥಳಾಂತರಿಸುವ ಪ್ರಯತ್ನಗಳಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಯ ಐದು ತಂಡಗಳನ್ನು ನಿಯೋಜಿಸಲು ಸಿದ್ದರಾಗಿದ್ದಾರೆ.

ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಸಮುಚ್ಚಯದ ಸುತ್ತಲಿನ ಮನೆಗಳಿಗೆ ಸೊಂಟದವರೆಗೆ ನೀರು ನುಗ್ಗಿದೆ. ನೀರಿನಲ್ಲಿ ಮುಳುಗಿರುವ ವಾಹನಗಳು ಮತ್ತು ನಿವಾಸಿಗಳನ್ನು ರಕ್ಷಿಸುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಬೆಂಗಳೂರು ಅಭಿವೃದ್ಧಿ ಉಸ್ತುವಾರಿ ಸಚಿವರಾಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಮಾಧ್ಯಮಗಳೊಂದಿಗೆ ಪರಿಸ್ಥಿತಿ ಕುರಿತು ಮಾತನಾಡಿ,”ದುಬೈ ಮತ್ತು ದೆಹಲಿಯಲ್ಲಿ ಕೂಡಾ ಮಳೆಯಾಗುತ್ತಿದೆ ಎಂದು ನೀವು ಮಾಧ್ಯಮಗಳಲ್ಲಿ ಗಮನಿಸಿರಬಹುದು. ದೆಹಲಿಯಲ್ಲಿ ಮಾಲಿನ್ಯವಿದ್ದು, ಬರಪೀಡಿತ ಪ್ರದೇಶವಾದ ದುಬೈನಲ್ಲಿ ಮಳೆಯಾಗಿದೆ. ದೇಶದ ಹಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿ ಇದೆ. ಇದನ್ನು ನಾವು ನಿರ್ವಹಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

20 ಪಂಪ್‌ಗಳ ಮೂಲಕ ತಗ್ಗು ಪ್ರದೇಶಗಳಿಂದ ನೀರನ್ನು ತೆಗೆದುಹಾಕಲಾಗುತ್ತಿದೆ ಎಂದು ಶಿವಕುಮಾರ್ ಹೇಳಿದ್ದು, ರಕ್ಷಣಾ ತಂಡಗಳ ನಿಯೋಜನೆಯ ಬಗ್ಗೆ ದೃಢಪಡಿಸಿದ್ದಾರೆ. “ಪೀಡಿತ ಪ್ರದೇಶದಲ್ಲಿ ಇರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರು ಕಳೆದ 48 ಗಂಟೆಗಳಿಂದ ಕೆಲಸ ಮಾಡುತ್ತಿದ್ದಾರೆ. ಪ್ರವಾಹದಿಂದ ಉಂಟಾಗುವ ಅಪಾಯಗಳಿಂದಾಗಿ ಕೇಂದ್ರೀಯ ವಿಹಾರ್ ಮತ್ತು ಟಾಟಾ ನಗರದಿಂದ 604 ಕುಟುಂಬಗಳನ್ನು ಸ್ಥಳಾಂತರಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ

ಬೆಂಗಳೂರು | ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...