Homeಕರ್ನಾಟಕಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (83) ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (83) ನಿಧನ

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (83) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮನೆಯಲ್ಲಿ ಜಾರಿ ಬಿದ್ದು ತಲೆಗೆ ತೀವ್ರ ಪೆಟ್ಟಾಗಿದ್ದ ಅವರನ್ನು ಸೀತಾ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ರಕ್ತಸ್ರಾವ ಹೆಚ್ಚಾಗಿತ್ತು. ವಯಸಸಿನ ಕಾರಣಕ್ಕೆ ಸರ್ಜರಿ ಮಾಡಲು ಆಗಿರಲಿಲ್ಲ. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಶಿವರಾಂ ಅವರ ಕಾರು ಅಪಘಾತಕ್ಕೆ ಒಳಗಾಗಿತ್ತು. ಬಳಿಕ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಇದಾದ ಬಳಿಕ ಮತ್ತೆ ಮನೆಯಲ್ಲಿ ಅಯ್ಯಪ್ಪ ದೇವರ ಪೂಜೆ ಮಾಡುವಾಗ ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಅವರನ್ನು ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕನ್ನಡ ಚಿತ್ರರಂಗದಲ್ಲಿ ಆರು ದಶಕಗಳ ಕಾಲ ಪೋಷಕನಟನಾಗಿ, ಹಾಸ್ಯನಟನಾಗಿ ಸಿನಿಮಾಸಕ್ತರನ್ನು ರಂಜಿಸಿರುವ ಎಸ್. ಶಿವರಾಂ ಅವರು 1938ರಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಗಡಿಯಲ್ಲಿನ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದರು. ಕೇವಲ ನಟನೆ ಜೊತೆಗೆ ನಿರ್ದೇಶಕರಾಗಿ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ತಮ್ಮ ಕೊಡುಗೆ ನೀಡಿದ್ದಾರೆ.

ತಮ್ಮ ಸಹೋದರ ಎಸ್.ರಾಮನಾಥನ್‍ರವರೊಂದಿಗೆ ಸೇರಿ ರಾಶಿ ಬ್ರದರ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ‘ಗೆಜ್ಜೆಪೂಜೆ’, ‘ಉಪಾಸನೆ’, ‘ನಾನೊಬ್ಬ ಕಳ್ಳ’, ‘ಡ್ರೈವರ್ ಹನುಮಂತು, ‘ಬಹಳ ಚೆನ್ನಾಗಿದೆ’ ಸೇರಿ ಹಲವಾರು ಚಿತ್ರಗಳನ್ನು ನಿರ್ಮಿಸಿದರು.

ಇದನ್ನೂ ಓದಿ: ಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

ಚಂದನವನದಲ್ಲಿ ನಟನಾಗಿ ಹಲವಾರು ದಿಗ್ಗಜರೊಂದಿಗೆ ಕೆಲಸ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಪುಟ್ಟಣ್ಣ ಕಣಗಾಲ್ ಅವರ ಎಲ್ಲಾ ಸಿನಿಮಾಗಳಲ್ಲಿಯೂ ಕೆಲಸ ಮಾಡಿದ್ದಾರೆ. 1958-1965 ರವರೆಗೆ ಶಿವರಾಂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಗುಬ್ಬಿ ವೀರಣ್ಣ ಅವರ ನಾಟಕ ಪ್ರದರ್ಶನಗಳ ಪ್ರಭಾವಕ್ಕೆ ಒಳಗಾಗಿ, ಚಿತ್ರ ತಯಾರಿಕೆ ಮತ್ತು ನಟನೆಯತ್ತ ಆಸಕ್ತಿ ತಳೆದು ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದರು. ನಟ ಶಿವರಾಂ ಅವರು 1965ರಲ್ಲಿ ಕು.ರಾ. ಸೀತಾರಾಮಶಾಸ್ತ್ರಿ ಅವರ ನಿರ್ದೇಶನದ, ಕಲ್ಯಾಣ್ ಕುಮಾರ್ ನಟನೆಯ ಬೆರೆತ ಜೀವ ಚಿತ್ರದಲ್ಲಿ ನಟನಾಗಿ ಬೆಳ್ಳಿ ಪರದೆಯ ಮೇಲೆ ಕಾಣಿಸಿಕೊಂಡರು.

‘ಶರಪಂಜರ’, ‘ನಾಗರಹಾವು’ , ‘ಶುಭಮಂಗಳ’, ‘ಚಲಿಸುವ ಮೋಡಗಳು’ , ‘ಶ್ರಾವಣ ಬಂತು’ , ‘ಹಾಲು ಜೇನು’, ‘ಹೊಂಬಿಸಿಲು’, ‘ಹೊಸ ಬೆಳಕು’, ‘ಗುರು ಶಿಷ್ಯರು’ , ‘ಸಿಂಹದಮರಿ ಸೈನ್ಯ’ , ‘ಮಕ್ಕಳ ಸೈನ್ಯ’, ‘ಆಪ್ತಮಿತ್ರ’, ‘ಹುಚ್ಚ’ ಮುಂತಾದ ಸಿನಿಮಾಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ.


ಇದನ್ನೂ ಓದಿ: ಅಪ್ಪು ಹಾದಿಯಲ್ಲಿ ನಡೆಯುತ್ತಿರುವ ಅಭಿಮಾನಿಗಳು: ನೇತ್ರದಾನಕ್ಕೆ ಸಾಲುಗಟ್ಟಿ ನಿಂತ ಫ್ಯಾನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...