Homeಚಳವಳಿ'ರೈತರೊಂದಿಗೆ ಬೆಂಗಳೂರು': ರೈತ ಹೋರಾಟವನ್ನು ಬೆಂಬಲಿಸಲು ಚರ್ಚೆ-ಸಹಿ ಸಂಗ್ರಹ ಅಭಿಯಾನ

‘ರೈತರೊಂದಿಗೆ ಬೆಂಗಳೂರು’: ರೈತ ಹೋರಾಟವನ್ನು ಬೆಂಬಲಿಸಲು ಚರ್ಚೆ-ಸಹಿ ಸಂಗ್ರಹ ಅಭಿಯಾನ

"ಡಿಸೆಂಬರ್ 26ರ ಶನಿವಾರ, ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತ, ಆನಂದರಾವ್ ಸರ್ಕಲ್ ಬಳಿ ಬೆಳಿಗ್ಗೆ 11ರಿಂದ 3ರವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಸಂವಾದ-ಸಹಿ ಸಂಗ್ರಹ-ಪ್ಯಾನೆಲ್ ಚರ್ಚೆ-ಸಾಂಸ್ಕೃತಿಕ ಕಾರ್ಯಕ್ರಮಗಳಿರಲಿವೆ"

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ 29 ದಿನಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ವಿವಿಧ ಸ್ವರೂಪದಲ್ಲಿ ಮೊದಲಿನಿಂದಲೂ ದೇಶದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈಗ ಕರ್ನಾಟಕದಲ್ಲಿ ‘ನಾವು ಭಾರತೀಯರು’ ಸಂಘಟನೆಯ ವತಿಯಿಂದ “ರೈತರೊಂದಿಗೆ ಬೆಂಗಳೂರು” ಎಂಬ ವಿಶಿಷ್ಟ ಪ್ರತಿಭಟನಾ ಅಭಿಯಾನವನ್ನು ಆಯೋಜಿಸಲಾಗಿದೆ.

ಡಿಸೆಂಬರ್ 26ರ ಶನಿವಾರ, ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತ, ಆನಂದರಾವ್ ಸರ್ಕಲ್ ಬಳಿ, ಬೆಳಿಗ್ಗೆ 11ರಿಂದ 3ರವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಸಂವಾದ-ಸಹಿ ಸಂಗ್ರಹ-ಪ್ಯಾನೆಲ್ ಚರ್ಚೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿರಲಿವೆ.

“ಬನ್ನಿ, ಜೊತೆಯಾಗಿ… ತೀವ್ರ ಚಳಿಯಲ್ಲಿ, ಬದುಕುವ ಹಕ್ಕಿಗಾಗಿ ಸಂಘರ್ಷ ನಡೆಸುತ್ತಿರುವ ಲಕ್ಷಾಂತರ ರೈತರಿಗೆ ನಮ್ಮ ಬೆಂಬಲ ಘೋಷಿಸೋಣ…” ಎಂಬುದು ಈ ಪ್ರತಿಭಟನಾ ಕಾರ್ಯಕ್ರಮದ ಧ್ಯೇಯವಾಗಿದೆ. ಈ ಅಭಿಯಾನದ ಮೂಲಕ ರೈತರನ್ನು ಬೆಂಬಲಿಸುವಂತೆ ಬೆಂಗಳೂರಿನ ಜನತೆಗೆ ‘ನಾವು ಭಾರತೀಯರು’ ತಂಡ ಕರೆ ನೀಡಿದೆ.

ಇದನ್ನೂ ಓದಿ: ‘IPL T20’ ಟೂರ್ನಿಗೆ 2 ಹೊಸ ತಂಡ ಸೇರ್ಪಡೆ: ಬಿಸಿಸಿಐ ಒಪ್ಪಿಗೆ

ದೆಹಲಿ ಮತ್ತು ಹರಿಯಾಣ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 29 ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ತಮ್ಮ ವಿರೋಧವನ್ನು ಇನ್ನಷ್ಟು ತೀವ್ರಗೊಳಿಸುವ ಉದ್ದೇಶದಿಂದ ಇತ್ತೀಚೆಗೆ ದೇಶದಾದ್ಯಂತ ಉಪವಾಸಕ್ಕೆ ಕರೆ ನೀಡಿದ್ದರು.

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...