Homeಕರ್ನಾಟಕಬೆಂಗಳೂರು | ಮಹಿಳೆಯ ಹತ್ಯೆ : ದೇಹ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ಕೊಲೆಗಾರ

ಬೆಂಗಳೂರು | ಮಹಿಳೆಯ ಹತ್ಯೆ : ದೇಹ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ಕೊಲೆಗಾರ

- Advertisement -
- Advertisement -

ಬೆಂಗಳೂರು ನಗರದ ಮಲ್ಲೇಶ್ವರ ಪೈಪ್‌ಲೈನ್ ಕೆ.ವಿ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರನ್ನು ಹತ್ಯೆಗೈದು, ದೇಹವನ್ನು ಸುಮಾರು 30 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಭೀಕರ ಘಟನೆ ಬೆಳಕಿಗೆ ಬಂದಿದೆ.

ಮಹಾಲಕ್ಷ್ಮಿ (29) ಹತ್ಯೆಯಾದ ಮಹಿಳೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ವೈಯ್ಯಾಲಿಕಾವಲ್ ಠಾಣೆ ಪೊಲೀಸರು, ಹಂತಕನ ಪತ್ತೆಗೆ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕೃತ್ಯ ನಡೆದ ಸ್ಥಳಕ್ಕೆ ಬೆರಳಚ್ಚು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಜ್ಞರು, ಶ್ವಾನದಳ ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೆಹಲಿಯ ಶ್ರದ್ದಾ ವಾಕರ್ ರೀತಿಯಲ್ಲೇ ಕೊಲೆ ನಡೆದಿದೆ ಎಂದು ವರದಿಗಳು ಹೇಳಿವೆ.

ಕೃತ್ಯ ನಡೆದ ಸ್ಥಳದ ಅಕ್ಕಪಕ್ಕದ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಲಾಗುತ್ತಿದೆ. ಕೊಲೆಯಾದ ಮಹಿಳೆಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಹಂತಕನ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಯಾದ ಮಹಾಲಕ್ಷ್ಮಿ ಅವರ ಪೋಷಕರು ನೇಪಾಳ ಮೂಲದವರು. 30 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ನೆಲಮಂಗಲ ಬಳಿ ವಾಸಿಸುತ್ತಿದ್ದರು. ಮಹಾಲಕ್ಷ್ಮಿ ಪಶ್ಚಿಮ ಬಂಗಾಳದ ಹೇಮಂತ್ ದಾಸ್ ಎಂಬವರನ್ನು ಮದುವೆಯಾಗಿದ್ದರು. ದಂಪತಿಗೆ 4 ವರ್ಷದ ಹೆಣ್ಣು ಮಗುವಿದೆ. ದಂಪತಿ ಮಧ್ಯೆ ಇತ್ತೀಚೆಗೆ ವೈಮನಸ್ಸು ಉಂಟಾಗಿತ್ತು. ಮಹಾಲಕ್ಷ್ಮಿ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ಪ್ರತಿನಿತ್ಯ ಕೆಲಸಕ್ಕೆ ಹೋಗಿ ಬರುತ್ತಿದ್ದ ಮಹಾಲಕ್ಷ್ಮಿ, ಕಳೆದ 20 ದಿನಗಳಿಂದ ಕಾಣಿಸುತ್ತಿರಲಿಲ್ಲ. ಹಾಗಾಗಿ, ಅಕ್ಕಪಕ್ಕದ ಮನೆಯವರು ಆಕೆಗೆ ಕರೆ ಮಾಡಿದ್ದರು. ಈ ವೇಳೆ ಮೊಬೈಲ್ ಸ್ವಿಚ್ ಆಫ್ ಬಂದಿದೆ. ಅನುಮಾನಗೊಂಡ ಸ್ಥಳೀಯರು ಮಹಾಲಕ್ಷ್ಮಿಯ ಸ್ನೇಹಿತೆಯರಿಂದ ನಂಬರ್ ಪಡೆದು, ಆಕೆಯ ತಾಯಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅವರು ಬಂದು ಮನೆಯ ಬೀಗ ಒಡೆದು ಪರಿಶೀಲಿಸಿದಾಗ ದುರ್ವಾಸನೆ ಬರಲು ಪ್ರಾರಂಭಿಸಿದೆ. ಮನೆಯಲ್ಲಿ ರಕ್ತದ ಕಲೆಗಳು ಕಂಡು ಬಂದಿದೆ. ಫ್ರಿಡ್ಜ್ ತೆರೆದು ನೋಡಿದಾಗ, ಅದರಲ್ಲಿ ತುಂಡರಿಸಿದ ಮಹಾಲಕ್ಷ್ಮಿಯ ದೇಹ ಕಂಡು ಬಂದಿದೆ ಎಂದು ವರದಿಗಳು ಹೇಳಿವೆ.

ಪತಿಯ ವಿಚಾರಣೆ : ಪೊಲೀಸರು ಕೊಲೆಯಾದ ಮಹಾಲಕ್ಷ್ಮಿಯ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಪೌರಕಾರ್ಮಿಕ ಮಹಿಳೆಯರ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ : ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...