Homeಕರ್ನಾಟಕಬೆಂಗಳೂರು: ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಹತ್ಯೆ

- Advertisement -
- Advertisement -

ಬೆಂಗಳೂರಿನ ಆನೇಕಲ್-ಜಿಗಣಿ ರಸ್ತೆಯಲ್ಲಿ ಸೋಮವಾರ (ಡಿಸೆಂಬರ್ 27) ರಾತ್ರಿ 38 ವರ್ಷದ ಮಹಿಳೆಯನ್ನು ಐದು ಜನರ ತಂಡವು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಣಕಾಸಿನ ವಿವಾದಗಳು ಮತ್ತು ಅನೈತಿಕ ಸಂಬಂಧ ಕೊಲೆಗೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತ ಮಹಿಳೆಯನ್ನು ಜಿಗಣಿ ನಿವಾಸಿ ಅರ್ಚನಾ ರೆಡ್ಡಿ ಎಂದು ಗುರುತಿಸಲಾಗಿದೆ. ಎಂಟು ವರ್ಷಗಳ ಹಿಂದೆ ಪತಿಗೆ ವಿಚ್ಛೇದನ ನೀಡಿದ್ದ ಆಕೆ ನವೀನ್ ಕುಮಾರ್ ಎಂಬ ವ್ಯಕ್ತಿಯೊಂದಿಗೆ ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿ ಇದ್ದರು. ಆದರೆ, ಆಸ್ತಿ ವಿಚಾರಕ್ಕೆ ಗಲಟೆ ನಡೆದು ಆಕೆ ಆತನಿಂದ ಅಂತರ ಕಾಯ್ದುಕೊಂಡಿದ್ದರು ಎನ್ನಲಾಗಿದೆ.

ಆಸ್ತಿ ವಿಚಾರದ ಗಲಾಟೆ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ನವೀನ್ ಕುಮಾರ್‌ ಮತ್ತು ಆತನ ಸಹಚರರು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ ದ್ವೇಷ ಭಾಷಣ: ಬೇಷರತ್‌‌ ಕ್ಷಮೆ ಕೇಳಿದ ತೇಜಸ್ವಿ ಸೂರ್ಯ

ರಾತ್ರಿ 10.30ರ ಸುಮಾರಿಗೆ ಜಿಗಣಿಯಿಂದ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಕೂಟರ್‌ನಲ್ಲಿ ಅರ್ಚನಾ ಅವರನ್ನು ಹಿಂಬಾಲಿಸಿದ್ದ ಆರೋಪಿಗಳು ಆಕೆಯ ಕಾರಿಗೆ ಅಡ್ಡಗಟ್ಟಿ, ಆಕೆಯನ್ನು ಕಾರಿನಿಂದ ಹೊರಗೆಳೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಆಕೆಯ ಡ್ರೈವರ್‌ ಪ್ರಮೋದ್ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕೊಲೆಗೆ ಸಂಚು ರೂಪಿಸಿದ ಶಂಕಿತ ಆರೋಪಿಗಳಿಗಾಗಿ ಹುಡುಕುತ್ತಿದ್ದಾರೆ. ಜೊತೆಗೆ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಸಿಸಿಟಿವಿ ಕ್ಯಾಮೆರಾಗಳನ್ನು ವಶಪಡಿಸಿಕೊಂಡಿದ್ದಾರೆ.


ಇದನ್ನೂ ಓದಿ: ಬೆಂಗಳೂರು :ಕೊರೊನಾ ನಿಯಮಗಳನ್ನು ಪಾಲಿಸದ ಗರುಡಾ ಮಾಲ್‌ಗೆ 20 ಸಾವಿರ ರೂ. ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...