Homeಕರ್ನಾಟಕಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ ಹಾಕಿದ ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ ಹಾಕಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್‌ ಮಾಲೀಕರು ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ. ಪಾಲಿಕೆಗೆ ಆಸ್ತಿ ತೆರಿಗೆ ಕಟ್ಟದೆ ಇಷ್ಟು ದಿನ ಸತಾಯಿಸುತ್ತಿದ್ದ ಹಿನ್ನೆಲೆ ಮಾಲ್‌ಗೆ ಬೀಗ ಹಾಕಲಾಗಿದೆ. ಈ ಕಾರಣದಿಂದ ಮಾಲ್‌ಗೆ ಬರುವವರನ್ನು BBMP ಮಾರ್ಷಲ್‌ಗಳು ಮತ್ತು ಮಾಲ್​ ಸಿಬ್ಬಂದಿ ವಾಪಸ್ ಕಳಿಸುತ್ತಿದ್ದಾರೆ.

ಮಂತ್ರಿಮಾಲ್‌ 27 ಕೋಟಿ 22 ಲಕ್ಷ 6 ಸಾವಿರದ 302 ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಬಿಬಿಎಂಪಿ ಹಲವು ಬಾರಿ ನೋಟಿಸ್‌ ನೀಡಿದ್ದರೂ ಮಾಲೀಕರು ಪ್ರತಿಕ್ರಿಯಿಸಿರಲ್ಲ. ಹೀಗಾಗಿ ಮಂತ್ರಿಮಾಲ್ ವಿರುದ್ದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಬಿಬಿಎಂಪಿ ಅಧಿಕಾರಿಗಳು ಮಾಲ್‌ನ ಮುಖ್ಯ ದ್ವಾರಕ್ಕೆ ಬೀಗ ಹಾಕಿದ್ದಾರೆ.

ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ನೇತೃತ್ವದ ತಂಡ ಮಂತ್ರಿ ಮಾಲ್‌ಗೆ ತೆರಳಿದ್ದು, ಮಾಲ್‌ನಲ್ಲಿದ್ದ ಜನರನ್ನು ಹೊರಗಿ ಕಳುಹಿಸಿ, ಮುಖ್ಯ ದ್ವಾರಕ್ಕೆ ಬೀಗ ಜಡಿಸಿದ್ದಾರೆ. ಗ್ರಾಹಕರು ಮಾಲ್‌ನಿಂದ ವಾಪಸ್ ತೆರಳಿದ್ದಾರೆ. ಸದ್ಯ ಮಾಲ್‌ಗೆ ಬೀಗ ಹಾಕಲಾಗಿದ್ದು, ಮುಖ್ಯ ಆಯುಕ್ತರ ನಿರ್ದೇಶನದಂತೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ವಸತಿ ಶಾಲೆಯ 60 ವಿದ್ಯಾರ್ಥಿಗಳಿಗೆ ಕೊರೊನಾ; ಅ.20 ವರೆಗೆ ಶಾಲೆ ಬಂದ್

ಈ ಹಿಂದೆ ಮಾಲೀಕರು ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಚೆಕ್‌ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಲಾಗಿದೆ. ಬೌನ್ಸ್ ಕೇಸ್‌ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಸದ್ಯಕ್ಕೆ 5 ಕೋಟಿ ರೂಪಾಯಿ ತೆರಿಗೆಯನ್ನು ತಕ್ಷಣದಲ್ಲೇ ಪಾವತಿಸಬೇಕು. ಮಾಲೀಕರು ಇದಕ್ಕೆ ಒಪ್ಪದಿದ್ದರೆ ಮಾಲ್‌ನಲ್ಲಿರುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುವುದು. ಇದಕ್ಕೆ ಕಾನೂನಿನಲ್ಲಿ ಅವಕಾಶವಿದೆ ಎಂದು ಜಂಟಿ ಆಯುಕ್ತ ಶಿವಸ್ವಾಮಿ ತಿಳಿಸಿದ್ದಾರೆ.

ಮಂತ್ರಿ ಮಾಲ್‌ನ ಮಾಲೀಕರು 5 ಕೋಟಿ ರೂಪಾಯಿ ಪಾವತಿಸಿರುವ ಡಿಡಿಯನ್ನು ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಅಧಿಕಾರಗಳ ಮುಂದಿನ ನಡೆ ಏನು ಎಂದು ತಿಳಿಯಬೇಕಿದೆ.


ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...