Homeಮುಖಪುಟಕವಿತಾ ಲಂಕೇಶ್‌ ನಿರ್ದೇಶನದ "ಗೌರಿ" ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ

ಕವಿತಾ ಲಂಕೇಶ್‌ ನಿರ್ದೇಶನದ “ಗೌರಿ” ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ

- Advertisement -
- Advertisement -

ಖ್ಯಾತ ನಿರ್ದೇಶಕಿ ಕವಿತಾ ಲಂಕೇಶ್‌ರವರು ನಿರ್ದೇಶಿಸಿರುವ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ಕುರಿತು “ಗೌರಿ” ಸಾಕ್ಷ್ಯಚಿತ್ರವು 2022ರ ಟೊರೊಂಟೊ ವುಮೆನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ ಜಯಿಸಿದೆ.

ಅಲ್ಲದೆ ಈ ಸಾಕ್ಷ್ಯಚಿತ್ರವು ಮಾಂಟ್ರಿಯಲ್‌ನ ಸೌತ್ ಏಷ್ಯಾ ಫಿಲ್ಮ್ ಫೆಸ್ಟಿವಲ್‌ಗೂ ಸಹ ಆಯ್ಕೆಯಾಗಿದೆ. ಡಾಕ್ ನ್ಯೂಯಾರ್ಕ್, ಆಮ್‌ಸ್ಟರ್‌ಡ್ಯಾಮ್‌ನ ಇಂಟರ್‌ನ್ಯಾಶನಲ್ ಡಾಕ್ಯುಮೆಂಟರಿ ಫಿಲ್ಮ್ ಫೆಸ್ಟಿವಲ್, ಸನ್‌ಡಾನ್ಸ್ ಫಿಲ್ಮ್ ಫೆಸ್ಟಿವಲ್ ಮತ್ತು ಪ್ರಪಂಚದಾದ್ಯಂತದ ಇತರ ಸಿನಿಮೋತ್ಸವಗಳಿಗೆ ಈ ಸಾಕ್ಷ್ಯಚಿತ್ರವನ್ನು ಪರಿಗಣಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ 200 ಕ್ಕೂ ಹೆಚ್ಚು ಪತ್ರಕರ್ತರ ಮೇಲೆ ದಾಳಿಗಳು ನಡೆದ ವರದಿಯಾಗಿವೆ. 30 ಕ್ಕೂ ಹೆಚ್ಚು ಪತ್ರಕರ್ತರನ್ನು ಕಳೆದ ದಶಕದಲ್ಲಿ ಹತ್ಯೆ ಮಾಡಲಾಗಿದೆ. ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಸ್ಥಾನವು 180 ರಲ್ಲಿ 150ಕ್ಕೆ ಕುಸಿದಿದೆ. ಭಿನ್ನಮತೀಯರು ಮತ್ತು ಪತ್ರಕರ್ತರ ಮೇಲಿನ ದಾಳಿಗಳು ಹೊಸದಲ್ಲ ಮತ್ತು ಭಾರತಕ್ಕೆ ಸೀಮಿತವಾಗಿಲ್ಲ, ಆದರೆ ಕಳೆದ ದಶಕದಲ್ಲಿನ ಈ ದಾಳಿಗಳು ತೀವ್ರ ರೂಪದಲ್ಲಿದ್ದು ಚಿಂತಿಸಬೇಕಾದ ವಿಷಯಗಳಾಗಿವೆ ಎಂದು ಕವಿತಾ ಲಂಕೇಶ್ ಹೇಳಿದ್ದಾರೆ.

ಕವಿತಾ ಲಂಕೇಶ್

 

ಈ ಸಾಕ್ಷ್ಯ ಚಿತ್ರವು ಭಾರತದಲ್ಲಿ ಪತ್ರಕರ್ತರು ದಿನನಿತ್ಯವು ಎದುರಿಸುತ್ತಿರುವ ಮೌಖಿಕ, ದೈಹಿಕ ದಾಳಿಗಳನ್ನು ತೆರೆದಿಡುತ್ತಿದೆ. ತಮ್ಮ ದಿಟ್ಟ ವರದಿಗಳ ಕಾರಣಕ್ಕಾಗಿ ಗೌರಿಯವರು ತಮ್ಮ ಮೇಲಿನ 80ಕ್ಕೂ ಹೆಚ್ಚು ಪ್ರಕರಣಗಳನ್ನು ರಾಜ್ಯಾದ್ಯಂತ ಓಡಾಡುತ್ತಾ ಹೇಗೆ ಅದನ್ನೊಂದು ಅವಕಾಶವನ್ನಾಗಿ ಬಳಸಿಕೊಂಡರು ಎಂಬುದರ ವಿವರಣೆ ಇಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಆಂಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ “ಗೌರಿ” ಸಾಕ್ಷ್ಯಚಿತ್ರವನ್ನು ನಿರ್ಮಾಣಕ್ಕೆ ಕೈಜೋಡಿಸಿದೆ. ಈ ಸಂಸ್ಥೆಯು ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...