Homeಮುಖಪುಟಕವಿತಾ ಲಂಕೇಶ್‌ ನಿರ್ದೇಶನದ “ಗೌರಿ” ಚಿತ್ರಕ್ಕೆ ಅತ್ಯುತ್ತಮ ದೀರ್ಘ ಸಾಕ್ಷ್ಯಚಿತ್ರ ಪ್ರಶಸ್ತಿ

ಕವಿತಾ ಲಂಕೇಶ್‌ ನಿರ್ದೇಶನದ “ಗೌರಿ” ಚಿತ್ರಕ್ಕೆ ಅತ್ಯುತ್ತಮ ದೀರ್ಘ ಸಾಕ್ಷ್ಯಚಿತ್ರ ಪ್ರಶಸ್ತಿ

- Advertisement -
- Advertisement -

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕಿ ಕವಿತಾ ಲಂಕೇಶ್‌ರವರು ನಿರ್ದೇಶಿಸಿರುವ ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ರವರ ಕುರಿತ “ಗೌರಿ” ಸಾಕ್ಷ್ಯಚಿತ್ರವು 2023ರ ಮಾಂಟ್ರಿಯಲ್‌ನ ದಕ್ಷಿಣ ಏಷ್ಯಾ ಚಲನಚಿತ್ರೋತ್ಸವದಲ್ಲಿ “ಅತ್ಯುತ್ತಮ ದೀರ್ಘ ಸಾಕ್ಷ್ಯಚಿತ್ರ ಪ್ರಶಸ್ತಿ”ಜಯಿಸಿದೆ.

“ಈ ಸಾಕ್ಷ್ಯಚಿತ್ರವು 2017ರಲ್ಲಿ ರಾಜಕೀಯ ಹತ್ಯೆಗೊಳಗಾದ ಬೆಂಗಳೂರಿನ ಪತ್ರಕರ್ತೆ ಗೌರಿಲಂಕೇಶ್‌ರವರ ಕುರಿತಾಗಿದ್ದು, ಭಾರತೀಯ ರಾಜಕೀಯದಲ್ಲಿನ ಪ್ರಸ್ತುತ ಬಿಕ್ಕಟ್ಟಿನ ಸಂದರ್ಭದಲ್ಲಿ ಕೆಚ್ಚೆದೆಯ ಮತ್ತು ರಾಜಿಯಾಗದ ನಾಡಿಮಿಡಿತವಾಗಿದೆ. ಗೌರಿ ಅವರ ಸಹೋದರಿ ಕವಿತಾ ಲಂಕೇಶ್ ಅವರು ಉತ್ಸಾಹದಿಂದ ನಿರ್ದೇಶಿಸಿದ ಮತ್ತು ನಿರೂಪಿಸಿದ ಡಾಕ್ಯು-ಥ್ರಿಲ್ಲರ್ ಆಗಿದೆ” ಎಂದು ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಲ್ಲೇಖಿಸಲಾಗಿದೆ.

ಆಸ್ಕರ್ ನಾಮನಿರ್ದೇಶನಗೊಂಡ “ಆಲ್ ದಟ್ ಬ್ರೀಥ್ಸ್” ಸಾಕ್ಷ್ಯಚಿತ್ರವೂ ಈ ಸ್ಪರ್ಧೆಯಲ್ಲಿತ್ತು ಮತ್ತು ರನ್ನರ್ ಅಪ್ ಅನ್ನು ಪ್ರಶಸ್ತಿ ಗೆದ್ದುಕೊಂಡಿದೆ.

ಆಂಆಂಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ “ಗೌರಿ”ಸಾಕ್ಷ್ಯಚಿತ್ರವನ್ನು ನಿರ್ಮಾಣಕ್ಕೆ ಕೈಜೋಡಿಸಿದೆ. ಈ ಸಂಸ್ಥೆಯು ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ.

ಫ್ರೀ ಪ್ರೆಸ್ ಅನ್ಲಿಮಿಟೆಡ್ ಸಂಸ್ಥೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯಾದ ಯಾವುದೇ ಹಸ್ತಕ್ಷೇಪವಿಲ್ಲದೆ ಪ್ರತಿಯೊಬ್ಬರಿಗೂ ಅಭಿಪ್ರಾಯ ಹೊಂದುವ, ಸ್ವೀಕರಿಸುವ, ಯಾವುದೇ ಮಾಧ್ಯಮಗಳ ಮೂಲಕ ಅಭಿವ್ಯಕ್ತಪಡಿಸುವ ಮತ್ತು ಪಸರಿಸುವ ಆರ್ಟಿಕಲ್ 19 ಅನ್ನು ಎತ್ತಿ ಹಿಡಿಯುತ್ತದೆ.

ಇದನ್ನೂ ಓದಿ: ಗೌರಿ ಸಾಕ್ಷ್ಯಚಿತ್ರ; ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಬೇಕಾದ ಕನ್ನಡ ಪ್ರಜ್ಞೆಯನ್ನು ಜಾಗೃತಗೊಳಿಸುವ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...