Homeಕರ್ನಾಟಕಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

- Advertisement -
- Advertisement -

ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‌ಗಳ ಅವಧಿಗಳಲ್ಲಿ ಈ ವರೆಗೆ ಕಲಿಸಲಾಗುತ್ತಿತ್ತು. ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‌ಗಳಿಗೆ ಮಿತಿಗೊಳಿಸಿರುವುದು ‘ಕನ್ನಡ ಭಾಷೆಗೆ ಮಾಡಿದ ದ್ರೋಹ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿಯ ಭಾಗವಾಗಿ ಈಗ ಇರುವ ಮೂರು ವರ್ಷದ ಬದಲಾಗಿ ನಾಲ್ಕು ವರ್ಷದ ಪದವಿ ಕೋರ್ಸನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಅದಕ್ಕೋಸ್ಕರ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ಸಮಿತಿಯನ್ನು ನೇಮಿಸಲಾಗಿದೆ. ಪಠ್ಯಪುಸ್ತಕ ರಚನೆಯ ಉಪಸಮಿತಿಯು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ವಿಷಯಗಳನ್ನು ಕೇವಲ ಎರಡು ಸೆಮಿಸ್ಟರ್‌ಗಳಿಗೆ ಅಂದರೆ ಒಂದು ವರ್ಷಕ್ಕೆ ಮಾತ್ರ ಮಿತಿಗೊಳಿಸಿ ಶಿಫಾರಸ್ಸುಗಳನ್ನು ಮಾಡಿದೆ. ಈ ಶಿಫಾರಸ್ಸುಗಳು ‘ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿವೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

“ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶಗಳಲ್ಲಿ ದೇಶ ಭಾಷೆಗಳಿಗೆ ಪ್ರಾಮುಖ್ಯ ನೀಡಬೇಕು ಎಂಬ ಅಂಶವೂ ಇದೆ. ಆದರೆ ರಾಜ್ಯದ ಈ ಸಮಿತಿಯು ಕನ್ನಡದ ಪಾಲಿಗೆ ಮಹಾ ದ್ರೋಹವೆಸಗುವಂತಹ ಶಿಫಾರಸ್ಸುಗಳನ್ನು ಮಾಡಿದೆ ಎಂಬ ಆರೋಪಗಳನ್ನು ನಾಡಿನ ಹಿರಿಯರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಒಂದು ಸೆಮಿಸ್ಟರ್‌ನಲ್ಲಿ ಗರಿಷ್ಠವೆಂದರೆ 90 ದಿನಗಳ ಅವಧಿಯ ಬೋಧನೆ ಇರುತ್ತದೆ. ಪ್ರತಿ ವಿಷಯಕ್ಕೆ ಸಾಮಾನ್ಯವಾಗಿ ವಾರಕ್ಕೆ 4 ಗಂಟೆಯಂತೆ, ಒಂದು ಸೆಮಿಸ್ಟರ್‌ನಲ್ಲಿ ಒಂದು ವಿಷಯಕ್ಕೆ 48 ಗಂಟೆ ಬೋಧನಾ ಅವಧಿ ಇರುತ್ತದೆ. ಎರಡು ಸೆಮಿಸ್ಟರುಗಳಿಂದ ಗರಿಷ್ಠ 96 ಗಂಟೆಗಳು ಇರುತ್ತವೆ. ಕೇವಲ 96 ಗಂಟೆಗಳ ಅವಧಿಯಲ್ಲಿ ಯಾವ ವಿಷಯವನ್ನು ಕಲಿಸಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ವಿಜ್ಞಾನ, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು ಮತ್ತು ತಾಂತ್ರಿಕ ಶಿಕ್ಷಣವನ್ನು ಕಲಿಯುವ ವಿದ್ಯಾರ್ಥಿ ತನ್ನ ಕಲಿಕೆಯುದ್ದಕ್ಕೂ ಬೌದ್ಧಿಕತೆಯನ್ನು ರೂಪಿಸಿಕೊಳ್ಳುವುದರ ಜೊತೆಗೆ ಆರೋಗ್ಯಕರವಾದ ಮನಸ್ಸನ್ನೂ ಕಟ್ಟಿ ಕೊಳ್ಳಬೇಕಾಗುತ್ತದೆ. ಇದು ಶಿಕ್ಷಣದ ಮೂಲ ಉದ್ದೇಶವೂ ಹೌದು. ಸರ್ಕಾರವು ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿದರೆ ಅವರು ಜಗತ್ತಿನ ಶ್ರೇಷ್ಠ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತ ಮುಂತಾದವುಗಳನ್ನು ಕಲಿಯುವುದು ಹೇಗೆ? ವಿದ್ಯಾರ್ಥಿಗಳಿಗೆ ವಿಷಯ ಜ್ಞಾನದಷ್ಟೇ ನೈತಿಕ ಶಿಕ್ಷಣವೂ ಮುಖ್ಯ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಕನ್ನಡದ ಶ್ರೇಷ್ಠ ಅಭಿವ್ಯಕ್ತಿಗಳಾದ ವಚನಗಳನ್ನು, ಪಂಪ, ರನ್ನ, ಕುಮಾರವ್ಯಾಸ ಮತ್ತು ಹರಿದಾಸರ ಕಾವ್ಯಗಳನ್ನು ಕಲಿಯುವುದು ಹೇಗೆ? ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮೇರು ಸಾಹಿತಿಗಳಾದ ಕುವೆಂಪು, ಕಾರಂತರು, ಬೇಂದ್ರೆ, ಮಾಸ್ತಿ, ಪು.ತಿ.ನ ಮುಂತಾದವರು ರೂಪಿಸಿದ ಜೀವನೋತ್ಸಾಹದ ಬದುಕಿನ ದರ್ಶನಗಳನ್ನು ಮಕ್ಕಳು ಕಲಿಯುವುದು ಹೇಗೆ? ಎಂದು ಅವರು ತಿಳಿಸಿದ್ದಾರೆ.

ದೇಶದ ಸಂಸ್ಕೃತಿ, ಭಾಷೆ,‌ ಮಹಾಕಾವ್ಯಗಳು, ಪುರಾಣಗಳು, ಕಲೆ, ಜನಪದ ಮುಂತಾದ ಪರಂಪರೆಗಳ ಬಗ್ಗೆ ಮಾತನಾಡುವ ಬಿಜೆಪಿಯು ಪದವಿ ಕಲಿಯುವ ನಮ್ಮ ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿ ಕೇವಲ ಅದಾನಿ, ಅಂಬಾನಿಗಳಂಥ ಲೂಟಿಕೋರರ ಮಾದರಿಗಳನ್ನು ಕಲಿಸಲು ಹೊರಟಿದೆಯೆ? ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ನಮ್ಮ ದೇಶಕ್ಕೆ ಜ್ಞಾನ ಇರುವ, ದುಡ್ಡು ಇರುವ ಜನರ ಅಗತ್ಯ ಎಷ್ಟಿದೆಯೋ ಅದಕ್ಕಿಂತ ಹೆಚ್ಚು ಮಾನವೀಯ ಹೃದಯ ಇರುವ ಮನುಷ್ಯರ ಅಗತ್ಯವಿದೆ. ಅಂಥದ್ದಕ್ಕೆ ವಿರುದ್ಧವಾದ ನಿಲುವುಗಳನ್ನು ರೂಪಿಸುವುದಕ್ಕಾಗಿ “ರಾಷ್ಟ್ರೀಯ ಶಿಕ್ಷಣ ನೀತಿ”ಯ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ. ಈ ದುರುದ್ದೇಶದ ಭಾಗವಾಗಿಯೇ ಉಪಸಮಿತಿಯವರು ಭಾಷೆಗಳ ಕಲಿಕೆಯನ್ನು ಎರಡು ಸೆಮಿಸ್ಟರುಗಳಿಗೆ ಇಳಿಸಿದ್ದಾರೆ. ಸರ್ಕಾರ ಈ ಸಮಿತಿಯ ಶಿಫಾರಸ್ಸುಗಳನ್ನು ಒಪ್ಪಿಕೊಂಡಿದ್ದೆ ಆದರೆ ಅದು ಬಹಳ ದೊಡ್ಡ ಮಟ್ಟದ ಕನ್ನಡ ದ್ರೋಹವಾಗುತ್ತದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: COWIN APP: ಕನ್ನಡ, ತಮಿಳು ಸೇರಿ 9 ಪ್ರಾದೇಶಿಕ ಭಾಷೆಗಳಲ್ಲಿ ಸೌಲಭ್ಯ ಲಭ್ಯ

“4 ವರ್ಷದ ಕೋರ್ಸಿಗೆ ಅನುಗುಣವಾಗಿ 3 ವರ್ಷಕ್ಕೆ ಅಥವಾ 6 ಸೆಮಿಸ್ಟರುಗಳಿಗೆ ಭಾಷಾ ವಿಷಯವನ್ನು ಬೋಧಿಸಲು ಕ್ರಮ ತೆಗೆದುಕೊಳ್ಳಬೇಕು. ಹೀಗೆ ಮಾಡುವುದರಿಂದ ನಮ್ಮ ಮಕ್ಕಳು ಉತ್ತಮ ಪರಂಪರೆಗಳಿಗೆ ವಾರಸುದಾರರಾಗಲು ಸಾಧ್ಯವಾಗುತ್ತದೆ ಮತ್ತು ರಾಷ್ಟ್ರಕ್ಕೆ ಬೇಕಾದ ಉತ್ತಮ ಮನುಷ್ಯನಾಗಿ ರೂಪುಗೊಳ್ಳಲು ಸಹಾಯವಾಗುತ್ತದೆ. ಅದರ ಬದಲಾಗಿ ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ಸರ್ಕಾರ ಮುಂದಾಗುವುದಾದರೆ ಅದರ ವಿರುದ್ಧ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ. ಈ ನಾಡು ಎಂದಿಗೂ ನಾಡು, ನುಡಿಗೆ ದ್ರೋಹ ಎಸಗಿದವರನ್ನು ಕ್ಷಮಿಸಿಲ್ಲ” ಎಂದು ಅವರು ಎಚ್ಚರಿಸಿದ್ದಾರೆ.

ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ರೂಪಿಸಬೇಕಾಗಿದೆ. ಹಾಗಾಗಿ ಹೊಸ ಪಠ್ಯಕ್ರಮವನ್ನು ರೂಪಿಸುವಾಗ ಸಂಬಂಧಿಸಿದ ತಜ್ಞರುಗಳ ಕುಳಿತು ಚರ್ಚಿಸಿ ಆರೋಗ್ಯಕರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜೊತೆಗೆ ನಾಡು-ನುಡಿಗಳನ್ನು ಕಟ್ಟಲು ಪೂರಕವಾಗುವ ಪಠ್ಯಗಳನ್ನು ರೂಪಿಸಬೇಕು. ಆರು ಸೆಮಿಸ್ಟರುಗಳಲ್ಲೂ ಕನ್ನಡ ಭಾಷಾ ವಿಷಯವನ್ನು ಎಲ್ಲಾ ಪದವಿ ಮಕ್ಕಳಿಗೂ ಕಡ್ಡಾಯವಾಗಿ ಕಲಿಸಲೇಬೇಕು. ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ವಿವಾದದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಣ ತಜ್ಞ ಶ್ರೀಪಾದ್‌ ಭಟ್‌, “ಹಾಗೆ ನೋಡಿದರೆ ಸಮವರ್ತಿ ಪಟ್ಟಿಯಲ್ಲಿ ಬರುವ ಶಿಕ್ಷಣ ನೀತಿಯ ಬಗ್ಗೆ ಒಕ್ಕೂಟ ಸರ್ಕಾರವು ರಾಜ್ಯದ ಜೊತೆಗೆ ಚರ್ಚೆ ಮಾಡಿಲ್ಲ, ಹಾಗೆಯೆ ಸಂಸತ್ತಿನಲ್ಲೂ ಚರ್ಚೆ ಮಾಡಿಲ್ಲ. ಅಲ್ಲದೆ ಕಸ್ತೂರಿ ರಂಗನ್‌ ವರದಿಗೆ ಸುಮಾರು 5 ರಿಂದ 8 ಲಕ್ಷ ಜನರು ಫೀಡ್‌ಬ್ಯಾಕ್‌ ನೀಡಿದ್ದಾರೆ, ಆದರೆ ಬಗ್ಗೆಯು ಸರ್ಕಾರ ಈ ವರೆಗೆ ಏನೂ ಹೇಳಿಲ್ಲ. ಅಲ್ಲದೆ ಉಪಮುಖ್ಯಮಂತ್ರಿ ಅಶ್ವಥ್‌ನಾರಾಯಣ್‌ ಅವರು ತನ್ನ ಮೇಲಿನವರನ್ನು ಸಂಪ್ರೀತಿಗೊಳಿಸಲು ಇದನ್ನು ತರುವುದಕ್ಕೆ ಹೊರಟಿದ್ದಾರೆ. ಜೊತೆಗೆ ಶಿಕ್ಷಣ ನೀತಿಯ ಟಾಸ್ಕ್‌ಫೋರ್ಸ್‌ನಲ್ಲಿರುವ ನಾಲ್ಕೇ ನಾಲ್ಕು ಜನರು ಇಡೀ ರಾಜ್ಯದ ಶಿಕ್ಷಣ ನೀತಿಯನ್ನು ಹೇಗೆ ನಿರ್ದರಿಸುತ್ತಾರೆ? ಈ ಟಾಸ್ಕ್‌ಫೋರ್ಸ್‌ನಲ್ಲಿರುವವರ ಅರ್ಹತೆ ಏನು” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...