Homeಮುಖಪುಟಇವರನ್ನು ಪ್ರಶ್ನಿಸಿದರೆ ಗುಂಡಿಕ್ಕುತ್ತಾರೆ ಎಚ್ಚರ: ನಟ ಕಿಶೋರ್

ಇವರನ್ನು ಪ್ರಶ್ನಿಸಿದರೆ ಗುಂಡಿಕ್ಕುತ್ತಾರೆ ಎಚ್ಚರ: ನಟ ಕಿಶೋರ್

- Advertisement -
- Advertisement -

ಕನ್ನಡದ ಖ್ಯಾತ ಚಿತ್ರನಟ ಕಿಶೋರ್ ಕುಮಾರ್ ಅವರು ಮತ್ತೆ ಪ್ರಧಾನಿ ಮೋದಿ ಹಾಗೂ ವ್ಯವಸ್ಥೆ ವಿರುದ್ಧ ಗುಡುಗಿದ್ದಾರೆ. ಈ ವಿಕೃತ ವಿಶ್ವಗುರುವನ್ನು ಹೊಡೆದೋಡಿಸಿ,  ಪ್ರೀತಿಯ ಶಾಂತಿಯ ನಮ್ಮ ಭಾರತಕ್ಕೆ ಮರಳಬೇಕಿದೆ ಎಂದು ಕರೆ ಕೊಟ್ಟಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರಗಳು, ಮಹಿಳೆಯರ ಮೇಲಿನ ನಿರಂತರ ದೌರ್ಜನ್ಯಗಳು ಹಾಗೂ ಈ ಆಡಳಿತ ವ್ಯವಸ್ಥೆ ವಿರುದ್ಧ ಮೇಲಿಂದ ಮೇಲೆ ಪ್ರತಿಕ್ರಿಯಿಸುವ ಕನ್ನಡದ ಸಂವೇದನಾಶೀಲ ನಟ ಕಿಶೋರ್ ಕುಮಾರ್ ಅವರು ಇದೀಗ ಮತ್ತೆ ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನು ಉಲ್ಲೇಖಿಸಿ ವಿಶ್ವಗುರು ಎಂದು ಕರೆಯಿಸಿಕೊಳ್ಳುವ ನರೇಂದ್ರ ಮೋದಿ ವಿರುದ್ಧ ಗುಡುಗಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಕಿಶೋರ್ ಪೋಸ್ಟ್ ಹಾಕಿದ್ದು, ”ದೇಶದಲ್ಲಿ ವಿಶ್ವಗುರುಗಳಿದ್ದಾರೆ ಎಚ್ಚರ .. ಮಣಿಪುರದಲ್ಲಿ, ಹರಿಯಾಣದಲ್ಲಿ, ಮುಂಬೈ ರೈಲಿನಲ್ಲಿ , ಟಿವಿ ಚಾನೆಲ್ಲುಗಳಲ್ಲಿ , ಪಾರ್ಲಿಮೆಂಟಿನಲ್ಲಿ , ಕಪಟ ಕ್ಯಾಪಿಟಲಿಸ್ಟುಗಳ ಡ್ರಾಯಿಂಗು ರೂಮಿನಲ್ಲಿ , ಕೋರ್ಟು ಕಚೇರಿಗಳಲ್ಲಿ , ಪೋಲೀಸು ವೇಷದಲ್ಲಿ , ಐಟಿ ಸೆಲ್ಲುಗಳಲ್ಲಿ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದ ಮೂಲೆ ಮೂಲೆಯಲ್ಲಿ.. ದೇವರ ಹೆಸರಲ್ಲಿ, ಅಧಿಕಾರ ದಾಹದ ಹೊಲಸಲ್ಲಿ , ಮತಿಭ್ರಮಿತರಾದ ಮತಾಂಧ ವಿಶ್ವಗುರುಗಳಿದ್ದಾರೆ.. ಎಚ್ಚರ…” ಎಂದು ಬರೆದಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

”ಇವರಿಗೆ ಜೈ ಅನ್ನದಿದ್ದರೆ, ಇವರನ್ನು ಪ್ರಶ್ನಿಸಿದರೆ … ಯೋಚಿಸಿದರೂ ಸಹ … ಗುಂಡಿಕ್ಕುತ್ತಾರೆ, ಬಡಿದು ಕೊಲ್ಲುತ್ತಾರೆ, ಮನೆ ಮಠ ಸುಡುತ್ತಾರೆ, ಕೆಡವುತ್ತಾರೆ, ಮಕ್ಕಳನ್ನು ಕಡಿದು ಕೊಲ್ಲುತ್ತಾರೆ. ಬೆತ್ತಲೆ ಮೆರವಣಿಗೆ ಮಾಡಿಸಿ ಅತ್ಯಾಚಾರ ಮಾಡುತ್ತಾರೆ, ದೇಶದ ಕೀರ್ತಿ ವಿಶ್ವದಲ್ಲೆಲ್ಲ ಹರಡುತ್ತಾರೆ.. ಎಚ್ಚರ..” ಎಂದು ಹೇಳಿದ್ದಾರೆ.

”ಬನ್ನಿ ಒಂದಾಗುವ ನಮ್ಮ ನಮ್ಮಲ್ಲಿ ಹೊಡೆದಾಡುವುದನ್ನು ಬಿಟ್ಟು ನಾವೆಲ್ಲರೂ ಒಂದಾಗಿ ಹೊಡೆದೋಡಿಸಬೇಕಿದೆ. ಈ ವಿಕೃತ ವಿಶ್ವಗುರುಗಳನು.. ಮತ್ತೆ ಮರಳಬೇಕಿದೆ ಪ್ರೀತಿಯ ಶಾಂತಿಯ ನಮ್ಮ ಭಾರತಕೆ..” ಎಂದು ಕಿಶೋರ್ ಕುಮಾರ್ ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಪ್ರಚಾರದಾಹಿ, ಅಧಿಕಾರದಾಹಿ ಪ್ರಧಾನಿ: ಮಣಿಪುರ ವಿಚಾರಕ್ಕೆ ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...