Homeಮುಖಪುಟಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ...

ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಿ 8 ಜನರನ್ನು ಉಪ ಮುಖ್ಯಮಂತ್ರಿಗಳಾಗಿ ಮಾಡಲು ದೆಹಲಿಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಸಭೆ ನಡೆಸಲಾಗಿದೆ.

- Advertisement -
- Advertisement -

ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಬ್ರಾಹ್ಮಣರಿದ್ದರಲ್ಲ ಆ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇದು ಪಂಚರತ್ನ ಯಾತ್ರೆಯಲ್ಲ, ಅದಕ್ಕೆ ನವಗ್ರಹ ಹಿಡಿದಿದೆ ಎಂದು ಟೀಕಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಎಚ್‌ಡಿಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಭಾಗದ ಬ್ರಾಹ್ಮಣ ಸಮಾಜ ಸರ್ವಜನೋ ಸುಖಿನೋ ಭವಂತು ಎನ್ನುವವರು. ಇವರು ನಮ್ಮ ಭಾಗದ ಬ್ರಾಹ್ಮಣರಲ್ಲ. ಮಹಾರಾಷ್ಟ್ರದ ಮರಾಠ ಪೇಶ್ವೆ ವಂಶಕ್ಕೆ ಸೇರಿದವರು. ಅವರಿಗೆ ಸಂಸ್ಕತಿ ಬೇಕಿಲ್ಲ, ದೇಶ ಒಡೆಯುವ ಕುತಂತ್ರ ರಾಜಕಾರಣ ಮಾಡುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಕೊಂದ ಪ್ರವರ್ಗದಿಂದ ಬಂದಂತವರು” ಎಂದಿದ್ದಾರೆ.

ವೀರಶೈವ ಸಮಾಜ, ಒಕ್ಕಲಿಗ ಸಮಾಜ, ಹಿಂದುಳಿದ ಮತ್ತು ದಲಿತ ಜನರು ಈ ಬಿಜೆಪಿಯ, ಆರ್‌ಎಸ್‌ಎಸ್‌ನ ಹುನ್ನಾರ, ಕುತಂತ್ರಕ್ಕೆ ಬಲಿಯಾಗಬಾರದು ಎಂದು ಹೇಳುತ್ತೇನೆ. ಇವರು ಈ ರಾಜ್ಯ ಒಡೆಯುತ್ತಾರೆ. ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಿ 8 ಜನರನ್ನು ಉಪ ಮುಖ್ಯಮಂತ್ರಿಗಳಾಗಿ ಮಾಡಲು ದೆಹಲಿಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಸಭೆ ನಡೆಸಿರುವುದರ ಕುರಿತು ನನಗೆ ಮಾಹಿತಿ ಬಂದಿದೆ ಎಂದಿದ್ದಾರೆ.

ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲಿ ಸಂಸ್ಕೃತಿಯಿದೆ. ನಾವು ಅವರ ಕಾಲಿಗೆ ಬೀಳುತ್ತೇವೆ, ಅವರನ್ನು ಪೂಜಿಸುತ್ತೇವೆ ಮತ್ತು ಗುರುಗಳ ರೀತಿ ಕಾಣುತ್ತೇವೆ. ಆದರೆ ಮೇಲಿನ ವರ್ಗದ ಬ್ರಾಹ್ಮಣರು ಸಮಾಜ ಒಡೆಯುವವರು. ಶೃಂಗೇರಿ ಮಠವನ್ನು ಒಡೆದು, ಶಂಕರಾಚಾರ್ಯರ ವಂಶಸ್ಥರನ್ನು ಓಡಿಸಿದಂತವರು. ಆ ವರ್ಗದ ಬ್ರಾಹ್ಮಣರು ಕುರಿತು ಕರ್ನಾಟಕದ ಕನ್ನಡಿಗರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು.

ಇದನ್ನೂ ಓದಿ: ‘ಗೌರಿ’ ಸಾಕ್ಷ್ಯಚಿತ್ರ: “ದಡ ದಡ, ಒಂದಲ್ಲ ಎರಡಲ್ಲ… ಸಾಲಾಗಿ ಏಳು, ತೂರಿದ್ದು ಗೌರಿಗೆ, ತಾಕಿದ್ದು ನಮ್ಮೆದೆಗೆ…”

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...