Homeಕರ್ನಾಟಕಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ...

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

- Advertisement -
- Advertisement -

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೀಗೆಬಾಗಿ ಬಾಬಾಳ್ಳಿ ಬಳಿ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಟ್ರ್ಯಾಕ್ಟರ್‌ನಲ್ಲಿ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭದ್ರಾವತಿ ವಿಭಾಗದ ಭೂ ವಿಜ್ಞಾನಿ ಕೆ.ಕೆ ಜ್ಯೋತಿ ಹಾಗೂ ಶಿವಮೊಗ್ಗ ವಿಭಾಗದ ಭೂ ವಿಜ್ಞಾನಿ ಪ್ರೀತಿ ದೊಡ್ಡಗೌಡರ್ ಮೂವರು ಸಿಬ್ಬಂದಿಯೊಂದಿಗೆ ರಾತ್ರಿ ಸ್ಥಳಕ್ಕೆ ತೆರಳಿದ್ದರು.

ಈ ವೇಳೆ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿಯೊಬ್ಬರು ಜ್ಯೋತಿ ಅವರ ಬಳಿ ಬಂದು ಮೊಬೈಲ್ ಕೊಟ್ಟು “ಅಣ್ಣ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ. ಫೋನ್ ಸ್ವೀಕರಿಸಲು ನಿರಾಕರಿಸಿದ ಅಧಿಕಾರಿ, “ಅವರಿಗೆ ನನ್ನ ಫೋನ್‌ಗೆ ಕರೆ ಮಾಡಲು ಹೇಳಿ” ಎನ್ನುತ್ತಾರೆ.

“ಅಧಿಕಾರಿಯ ಫೋನ್‌ಗೆ ಕರೆ ಮಾಡಬೇಕಂತೆ ಅಣ್ಣ” ಎಂದು ಮರಳು ತೆಗೆಯುತ್ತಿದ್ದ ವ್ಯಕ್ತಿ ಹೇಳಿದ್ದಾರೆ. “ಹೌದಾ? ಎನ್ನುವ ಆಚೆ ಕಡೆಯ ವ್ಯಕ್ತಿ, “ಲೌಡ್‌ ಸ್ಪೀಕರ್ ಆನ್ ಮಾಡು” ಎಂದು ಹೇಳಿ ಅತ್ಯಂತ ಅವಾಚ್ಯ ಪದ ಬಳಸಿ ಅಧಿಕಾರಿಯನ್ನು ನಿಂದಿಸುತ್ತಾನೆ. “ನೆಟ್ಟಗೆ ಮಾತನಾಡಿ, ಯಾರಿಗೆ ಮಾತನಾಡುತ್ತೀರಿ. ಒಬ್ಬ ಅಧಿಕಾರಿಗೆ ಮಾತನಾಡುತ್ತಿದ್ದೀರಿ. ಬೆಲೆ ಕೊಟ್ಟು ಮಾತನಾಡಿ” ಎಂದು ಮಹಿಳಾ ಅಧಿಕಾರಿ ಹೇಳಿದರೂ, ಹೀನಾಯವಾಗಿ ನಿಂದಿಸುವುದು ಮುಂದುವರಿಸುತ್ತಾನೆ.

ವೈರಲ್ ವಿಡಿಯೋದಲ್ಲಿ ಈ ಎಲ್ಲಾ ದೃಶ್ಯಗಳು ಇವೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು, ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಭದ್ರಾವತಿ ರಿಪಬ್ಲಿಕ್ ಆಗಿದೆ : ಶಾಸಕ ಚೆನ್ನ ಬಸಪ್ಪ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚೆನ್ನ ಬಸಪ್ಪ ಅವರು ವಿಡಿಯೋ ಸಂಬಂಧ ಸುದ್ದಿಗೋಷ್ಠಿ ನಡೆಸಿ ಶಾಸಕ ಸಂಗಮೇಶ್ ಮತ್ತು ಅವರ ಪುತ್ರ ಬಸವೇಶ್ ವಿರುದ್ದ ಕಿಡಿಕಾರಿದ್ದಾರೆ. ಭದ್ರಾವತಿ ರಿಪಬ್ಲಿಕ್ ಆಗಿ ಎಷ್ಟೋ ವರ್ಷಗೇ ಕಳೆದಿದೆ ಎಂದಿದ್ದಾರೆ.

ಈ ಪ್ರಕರಣ ಇಡೀ ಭದ್ರಾವತಿಗೆ ಅವಮಾನವಾಗಿದೆ. ಭದ್ರಾವತಿ ರಿಪಬ್ಲಿಕ್ ಆಗಿ ಬಹಳ ವರ್ಷಗಳೇ ಆಗಿವೆ. ಈ ಬಗ್ಗೆ ಮಾತನಾಡುವುದಕ್ಕೆ ಕಾಂಗ್ರೆಸ್‌ನವರಿಗೆ ತಾಕತ್ತಿಲ್ಲ. ಶಾಸಕರ ಮಕ್ಕಳು ಈ ರೀತಿ ಗೂಂಡಾ ವರ್ತನೆ ತೋರಿದರೆ ಏನು ಮಾಡೋಣ?. ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಷ್ಟೆ ಎಂದು ಹೇಳಿದ್ದಾರೆ. ಮಹಿಳಾ ಅಧಿಕಾರಿಗೆ ಧೈರ್ಯ ತುಂಬಿರುವ ಅವರು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.


ಜೆಡಿಎಸ್ ಕಿಡಿ

ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಜೆಡಿಎಸ್ ಕಿಡಿಕಾರಿದೆ. “ಕಾಂಗ್ರೆಸ್ ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ ! ಭದ್ರಾವತಿಯಲ್ಲಿ ಒಂದು ಪೈಸೆ ಅಭಿವೃದ್ಧಿ ಕೆಲಸ ಮಾಡದ ನಾಲಾಯಕ್‌ ಕಾಂಗ್ರೆಸ್‌ ಶಾಸಕ ಸಂಗಮೇಶ್‌ ಹಾಗೂ ಅವರ ಮಗ ಬಿ.ಎಸ್.‌ ಬಸವೇಶ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಗೂಂಡಾಗಿರಿ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ. ಅಕ್ರಮ ಮರಳುಗಾರಿಕೆಯನ್ನು ತಡೆಯಲು ಬಂದ ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್‌ ಅವರ ಪುತ್ರ ಫೋನಿನಲ್ಲಿ ಬೆದರಿಕೆ, ಧಮ್ಕಿ ಹಾಕಿ, ಅಶ್ಲೀಲ ಶಬ್ಧಗಳಿಂದ ನಿಂದಿಸಿರುವುದು ಅಕ್ಷಮ್ಯ ಅಪರಾಧ.
ರಾಜ್ಯದಲ್ಲಿರುವ ಮಹಿಳಾ ಆಯೋಗ ಏನು ಮಾಡುತ್ತಿದೆ ? ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವ ಹೆಣ್ಣುನಿಂದಕ ಶಾಸಕರ ಪುತ್ರನ ವಿರುದ್ಧ ಸರ್ಕಾರ ತಕ್ಷಣವೇ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಜನತಾದಳ ಪಕ್ಷವು ಆಗ್ರಹಿಸುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ, ಲಕ್ಷ್ಮೀ ಹೆಬ್ಬಾಳ್ಕರ್ ಮೇಡಂ ತಾವು ಈಗ ಮಹಿಳಾ ಅಧಿಕಾರಿಯ ರಕ್ಷಣೆಗೆ ನಿಂತು ನ್ಯಾಯ ಒದಗಿಸಬೇಕಿದೆ” ಎಂದು ಹೇಳಿದೆ.

ಪ್ರಕರಣ ದಾಖಲಿಸದಿದ್ದರೆ ಲೋಕಾಯುಕ್ತಕ್ಕೆ ದೂರು : ರವಿ ಕೃಷ್ಣಾರೆಡ್ಡಿ

“ಅವಾಚ್ಯವಾಗಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಕೊಳಕ ಭದ್ರಾವತಿಯ ಶಾಸಕ ಸಂಗಮೇಶರ ಮಗ ಬಸವೇಶ್ ಎನ್ನುವ ಮಾಹಿತಿ ಇದೆ. ಬಸವೇಶ್ ಆಗಲಿ ಅಥವಾ ಜ್ಯೋತಿ ಎನ್ನುವ ಆ ಶೋಷಿತ ಅಧಿಕಾರಿಯಾಗಲಿ ಇದನ್ನು ನಿರಾಕರಿಸಬೇಕು ಅಥವಾ ಖಚಿತಪಡಿಸಬೇಕು. ಈಗಾಗಲೇ ವೈರಲ್ ಆಗಿರುವ ಈ ವಿಡಿಯೋದ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಈ ಕೂಡಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಇಲ್ಲವಾದಲ್ಲಿ DC, SP ಮತ್ತು ಬೈಗುಳ ತಿಂದ ಅಧಿಕಾರಿಯ ವಿರುದ್ಧ KRS ಪಕ್ಷದವರು ಲೋಕಾಯುಕ್ತದಲ್ಲಿ ಕರ್ತವ್ಯಲೋಪದ ಅಡಿಯಲ್ಲಿ ದೂರು ದಾಖಲಿಸಲು ನಾನು ಈ ಮೂಲಕ ಶಿವಮೊಗ್ಗ ಜಿಲ್ಲೆಯ KRS ಪಕ್ಷದ ಮುಖಂಡರಿಗೆ ಸೂಚಿಸುತ್ತಿದ್ದೇನೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...