Homeಕರ್ನಾಟಕಭದ್ರಾವತಿ | ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ : ಎಫ್‌ಐಆರ್ ದಾಖಲು, ಮೂವರ ಬಂಧನ

ಭದ್ರಾವತಿ | ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ : ಎಫ್‌ಐಆರ್ ದಾಖಲು, ಮೂವರ ಬಂಧನ

- Advertisement -
- Advertisement -

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರ ಎನ್ನಲಾದ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಮೂವರನ್ನು ಮಂಗಳವಾರ (ಫೆ.11) ಬಂಧಿಸಿದ್ದಾರೆ.

ಮಹಿಳಾ ಅಧಿಕಾರಿಗೆ ಫೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋವೊಂದು ಸೋಮವಾರ (ಫೆ.10) ವೈರಲ್ ಆಗಿತ್ತು. ಫೋನ್‌ನಲ್ಲಿ ಮಾತನಾಡಿರುವ ವ್ಯಕ್ತಿ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಎನ್ನಲಾಗಿದೆ. ಈ ಸಂಬಂಧ ಮಹಿಳಾ ಅಧಿಕಾರಿ ಕೆ.ಕೆ ಜ್ಯೋತಿ ಅನಾಮಧೇಯ 6-7 ವ್ಯಕ್ತಿಗಳ ವಿರುದ್ಧ ಮಂಗಳವಾರ (ಫೆ.11) ಭದ್ರಾವತಿ ಡಿವೈಎಸ್‌ಪಿಗೆ ದೂರು ನೀಡಿದ್ದರು.

ದೂರು ದಾಖಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಅಧಿಕಾರಿ, ವೈರಲ್ ವಿಡಿಯೋದಲ್ಲಿರುವಂತೆ ಅಕ್ರಮ ಮರಳು ದಂಧೆ ತಡೆಯಲು ಹೋದಾಗ ನಡೆದಿರುವ ಘಟನೆ ಸಂಬಂಧ ದೂರು ನೀಡಿದ್ದೇನೆ ಎಂದಿದ್ದಾರೆ. ಅವರು ಶಾಸಕ ಸಂಗಮೇಶ್ ಅಥವಾ ಇತರ ಯಾರ ಹೆಸರೂ ಉಲ್ಲೇಖಿಸಿಲ್ಲ. ನಿಂದನೆ ಪ್ರಕರಣ ಹೊರತು, ಅಕ್ರಮ ಮರಳು ದಂಧೆ ಸೇರಿದಂತೆ ಇತರ ವಿಷಯಗಳ ಕುರಿತು ಮಾತನಾಡಲೂ  ನಿರಾಕರಿಸಿದ್ದಾರೆ. ಪೊಲೀಸರಿಗೆ ನೀಡಿರುವ ದೂರಿನಲ್ಲೂ ಅವರು ಯಾರ ಹೆಸರೂ ಉಲ್ಲೇಖಿಸಿಲ್ಲ ಎಂದು ವರದಿಯಾಗಿದೆ.

ಮಹಿಳಾ ಅಧಿಕಾರಿ ಮೇಲೆ ‘ಗಾಡಿ ಹತ್ತಿಸ್ರೋ’ ಎಂದರಂತೆ

“ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಹೋದಾಗ ನಮ್ಮ ಮೇಲೆ ಗಾಡಿ ಹತ್ತಿಸ್ರೋ ಅಂತ ಹೇಳುತ್ತಿದ್ರು. ಆಗ ಭಯ ಆಯ್ತು ಪೋನ್ ಕಾಲ್ ಸಹ ಬಂತು, ಯಾಕೋ ಸರಿಯಾಗಲ್ಲ ಅಂತ ವಾಪಾಸ್ಸು ಬಂದೆ. ಅಧಿಕಾರಿಗಳು ನನಗೆ ಸಪೋರ್ಟ್ ಮಾಡಿದರು” ಎಂದು ಅಧಿಕಾರಿ ಜ್ಯೋತಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಮೂವರ ಬಂಧನ

ಮಹಿಳಾ ಅಧಿಕಾರಿಯ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಭದ್ರಾವತಿ ಹಳೇ ನಗರ ಠಾಣೆ ಪೊಲೀಸರು ದಾವಣೆಗೆ ಜಿಲ್ಲೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ನಿವಾಸಿ ರವಿ (38) ಬಿನ್ ಮಲ್ಲೇಶಪ್ಪ, ಹಾಸನ ಜಿಲ್ಲೆ ಅರಕಲಗೂಡಿನ ನಿವಾಸಿ ವರುಣ್ (34) ಬಿನ್ ರಾಜಶೇಖರ್ ಮತ್ತು ಭದ್ರಾವತಿ ತಾಲೂಕಿನ ಸುರೇಂದ್ರ ಗೌಡ ಕ್ಯಾಂಪ್‌ನ ಅಜಯ್ ಬಿನ್ ತಿಪ್ಪೇಶ್ (28) ಎಂಬವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಎಫ್‌ಐಆರ್‌ನಲ್ಲಿ ಶಾಸಕರ ಮಗನ ಹೆಸರೇ ಇಲ್ಲ!

ಪ್ರಕರಣ ಸಂಬಂಧ ಪೊಲೀಸರು 6-7 ಜನರ ವಿರುದ್ದ ಎಫ್‌ಐಆರ್ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. ಇನ್ನುಳಿದವರಿಗೆ ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಮಹಿಳಾ ಅಧಿಕಾರಿಗೆ ನಿಂದಿಸಿದ್ದಾರೆ ಎನ್ನಲಾದ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಅವರ ಹೆಸರೇ ಎಫ್‌ಐಆರ್ ಪ್ರತಿಯಲ್ಲಿ ಇಲ್ಲ ಎಂದು ವರದಿಗಳು ಹೇಳಿವೆ.

‘ಯಾವ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗಲ್ಲ’ : ಡಾ.ನಾಗಲಕ್ಷ್ಮೀ ಚೌಧರಿ

ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ನಿಂದಿಸಿದ್ದಾರೆ ಎಂಬ ಆರೋಪದ ಕುರಿತು ಮಂಗಳವಾರ ಬೀದರ್‌ನಲ್ಲಿ ಪ್ರತಿಕ್ರಿಯೆ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು “ಮಹಿಳಾ ಆಯೋಗದಿಂದ ಸಮನ್ಸ್ ನೋಟಿಸ್ ಕಳುಹಿಸಲಾಗಿದೆ. ಯಾವುದೇ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗಲ್ಲ. ಕೆಟ್ಟ ಪದಗಳಿಂದ ನಿಂದನೆಯಾಗಿರುವುದು ನಮಗೆ ಮುಖ್ಯವಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....