Homeಮುಖಪುಟರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

ರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ, ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಈ ಯುವಜನರನ್ನು ಕಾಡುತ್ತಿವೆ.

- Advertisement -
- Advertisement -

‘ಯುದ್ಧಭೂಮಿಯಲ್ಲಿ ಗುಂಡು ಬೀಳುತ್ತದೆ ಎಂದು ತಿಳಿದಿದೆ. ಆದರೂ ನಾನು ಹಿಂದೆ ಸರಿಯುವುದಿಲ್ಲ….’ ಈ ಬರಹವಿದ್ದ ಪ್ಲಕಾರ್ಡ್ ಹಿಡಿದಿದ್ದ ಪಂಜಾಬಿ ಯುವಕನನ್ನು ನೀವು ಸೋಶಿಯಲ್ ಮೀಡಿಯಾಗಳಲ್ಲಿ ನೋಡಿರಬಹುದು. ಇದು ಕೇವಲ ಆ ಯುವಕನೊಬ್ಬನ ಮಾತಲ್ಲ. ಕೃಷಿ ಕಾಯ್ದೆಗಳ ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾವಿರಾರು ಯುವಜನರು ಸಹ ಇದೇ ಕಿಚ್ಚು, ಹೋರಾಟದ ಉತ್ಸಾಹವನ್ನು ಹೊಂದಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನೆರೆದಿದ್ದಾರೆ. ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರು, ವಯಸ್ಸಾದ ರೈತರು ಹಾಗೂ ಯುವಜನರೂ ಇದ್ದರೆ. ಆದರೆ ಪಂಜಾಬ್-ಹರಿಯಾಣ ಭಾಗದ ಸಿಂಘು ಗಡಿಯಲ್ಲಿ ಯುವಜನರ ಸಂಖ್ಯೆ ಅತಿ ಹೆಚ್ಚಿದೆ.

ಸಾವಿರಾರು ಯುವಜನರು I love Kisan, I love Kethi, No Farmer No Food…. (ರೈತರನ್ನು ಪ್ರೀತಿಸುತ್ತೇನೆ, ಕೃಷಿಯನ್ನು ಪ್ರೀತಿಸುತ್ತೇನೆ, ರೈತರಿಲ್ಲದೆ ಆಹಾರವಿಲ್ಲ) ಹೀಗೆ ವಿವಿಧ ಘೋಷಣೆಯುಳ್ಳ ಪ್ಲಕಾರ್ಡ್ ಹಿಡಿದುಕೊಂಡು ಸಿಂಘು ಗಡಿಯಲ್ಲಿ ಟ್ಯ್ರಾಕ್ಟರ್ ಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ತಿರುಗುತ್ತಲೆ ಇರುತ್ತಾರೆ. ರೈತರು ಮಲಗಿದ ಮೇಲೂ ಅಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುಲು ಈ ಯುವಕಲು ಸ್ವಯಂ ಸೇವಕರಾಗಿ ಅಲ್ಲಿ ಗಸ್ತು ತಿರುಗುತ್ತ ರಕ್ಷಣೆಯ ಜವಾಬ್ದಾರಿ ನೋಡಿಕೊಳ್ಳುತ್ತಾರೆ.

1984 ರ ಘಟನೆಯ ನಂತರ ಯಾವುದೇ ಹೋರಾಟದಲ್ಲಿ ಭಾಗವಹಿಸದೇ ಇದ್ದ ಪಂಜಾಬಿ ಯುವಜನರು ಇದೇ ಮೊದಲ ಬಾರಿಗೆ ಬೃಹತ್ ಸಂಖ್ಯೆಯಲ್ಲಿ ಈ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಮಾಧ್ಯಮಗಳು ಬಿತ್ತರಿಸಿದಂತೆ ಮಾದಕ ವ್ಯಸನಕ್ಕೆ ಯುವಜನರು ಒಳಗಾಗಿದ್ದಾರೆ ಎಂಬ ಮಾತನ್ನು ಸುಳ್ಳು ಮಾಡಿರುವ ಈ ಯುವಜನರು ಉಳಿದವರಿಗೆ ಸ್ಫೂರ್ತಿಯಾಗಿದ್ದಾರೆ‌ ಎಂದರೆ ತಪ್ಪಾಗಲಾರದು. ಉಡ್ತ ಪಂಜಾಬ್ ಬದಲಿಗೆ ಪಡ್ತ ಪಂಜಾಬ್ ಎಂದು ಬದಲಾಗಿದೆ ಎಂಬ ಪ್ಲಕಾರ್ಡ್‌ಗಳು ಎಲ್ಲೆಲ್ಲೂ ಕಾಣುತ್ತವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಪಂಜಾಬ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅರ್ಷ್‌ದೀಪ್‌‌ “ನನ್ನನ್ನು ಒಳಗೊಂಡಂತೆ ಪಂಜಾಬಿನ ಯುವ ಸಮೂಹ ಯಾವುದೇ ಹೋರಾಟದಲ್ಲಿ ಈ ಮಟ್ಟಕ್ಕೆ ತೊಡಗಿಸಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ಯುವ ಸಮೂಹ ಈ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಹೋರಾಟವಲ್ಲ ಕ್ರಾಂತಿಯೂ ಹೌದು” ಎನ್ನುತ್ತಾರೆ.

ನಾನು ಅನ್ನ ತಿನ್ನುತ್ತೇನೆ. ಹಾಗಾಗಿ ಅನ್ನ ಬೆಳೆದವರ ಪರ ಹೋರಾಟ ಮಾಡುತ್ತೇನೆ. ರೈತರಿಲ್ಲದೇ ದೇಶವಿಲ್ಲ ಹಾಗಾಗಿ ನಾನು ರೈತ ಹೋರಾಟದಲ್ಲಿ ವಾಲಂಟೀಯರ್ ಆಗಿ ಕೆಲಸ ಮಾಡಲು ಮುಂದೆ ಬಂದಿದ್ದೇನೆ ಎನ್ನುವ ಅರ್ಷ್‌ದೀಪ್, ನಾನು ಇಲ್ಲಿಗೆ ಹೋರಾಟಕ್ಕೆ ಬಂದಿರುವುದಕ್ಕೆ ನಮಗೆ ತಂದೆಗೆ ಸ್ವಲ್ಪ ಭಯವಿದೆ. ಆದರೆ ನನ್ನ ತಾಯಿ ಸಂಪೂರ್ಣ ಬೆಂಬಲ ನೀಡಿದ್ದಾರೆ ಅನ್ನುತ್ತಾರೆ.

ಶಾಂತಿಯುತವಾಗಿ ಹೋರಾಡುತ್ತಿರುವ ರೈತ ಹೋರಾಟಗಾರರನ್ನು ಖಾಲಿಸ್ತಾನಿಗಳು, ಭಯೋತ್ಪಾದಕರು ಎಂದು ಮಾಧ್ಯಮಗಳು ಮತ್ತು ಬಿಜೆಪಿಗರು ಕರೆದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಈ ಯುವಜನರನ್ನು ಕೆರಳಿಸಿದೆ. ರೈತ ಹೋರಾಟದ ವಿರುದ್ಧವಿರುವ ಮಾಧ್ಯಮಗಳನ್ನು ಗೋ ಮೀಡಿಯಾ ಎಂದು ಕರೆಯುವ ಈ ಯುವಜನರು ಯೂಟ್ಯೂಬ್, ಟ್ವಿಟ್ಟರ್, ಫೇಸ್‌ಬುಕ್‌ನಂತ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುವುದಲ್ಲದೇ ರೈತರ ಹೋರಾಟವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ.

1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ ಇಂದಿನ ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಬಹುಪಾಲು ಯುವಜನರನ್ನು ಕಾಡಿದ್ದು, ಈ ಹೋರಾಟದ ಬದ್ಧತೆಯ ಅರಿವು ಮೂಡಿಸಿದೆ ಎನ್ನಬಹುದು.‌


ಇದನ್ನೂ ಓದಿ: ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...