Homeಮುಖಪುಟಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

- Advertisement -
- Advertisement -

ಹಿಂದೂ ಧರ್ಮದಲ್ಲಿ ಆಳವಾಗಿ ಬೇರೂರಿರುವ ಜಾತಿಭೇದ ಕೊನೆಗೊಳಿಸುವ ಹೇಳಿಕೆ ನೀಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್, “ಒಂದು ದೇವಸ್ಥಾನ, ಒಂದು ಬಾವಿ ಮತ್ತು ಒಂದು ಶ್ಮಶಾನ” ಎಂಬ ತತ್ವವನ್ನು ಎಲ್ಲರಿಗೂ ಅಳವಡಿಸಿಕೊಳ್ಳುವ ಮೂಲಕ ಸಾಮಾಜಿಕ ಸಾಮರಸ್ಯಕ್ಕಾಗಿ ಶ್ರಮಿಸಬೇಕೆಂದು ಎಂದು ಹಿಂದೂ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಅಲಿಘರ್‌ನಲ್ಲಿ ಮಾತನಾಡಿದ ಭಾಗವತ್, ಎಚ್‌ಬಿ ಇಂಟರ್ ಕಾಲೇಜು ಮತ್ತು ಪಂಚನ್ ನಗರಿ ಪಾರ್ಕ್‌ನಲ್ಲಿರುವ ಎರಡು ‘ಶಾಖೆ’ಗಳಲ್ಲಿ ‘ಸ್ವಯಂಸೇವಕರೊಂದಿಗೆ’ ಮಾತನಾಡಿದರು. ಶಾಂತಿಗಾಗಿ ತನ್ನ ಜಾಗತಿಕ ಜವಾಬ್ದಾರಿಯನ್ನು ಪೂರೈಸಲು ಭಾರತಕ್ಕೆ ನಿಜವಾದ ಸಾಮಾಜಿಕ ಏಕತೆಯನ್ನು ಸಾಧಿಸುವುದು ಅತ್ಯಂತ ಮುಖ್ಯ ಎಂದು ಹೇಳಿದರು.

ಸಂಪ್ರದಾಯ, ಸಾಂಸ್ಕೃತಿಕ ಮೌಲ್ಯಗಳು ಮತ್ತು ನೈತಿಕ ತತ್ವಗಳಲ್ಲಿ ಬೇರೂರಿರುವ ಸಮಾಜವನ್ನು ನಿರ್ಮಿಸುವಂತೆ ಅದರ ಸದಸ್ಯರನ್ನು ಒತ್ತಾಯಿಸಿದ್ದಾರೆ ಎಂದು ಆರ್‌ಎಸ್‌ಎಸ್ ಮೂಲಗಳು ತಿಳಿಸಿವೆ.

‘ಸ್ವಯಂಸೇವಕರು’ ಸಮಾಜದ ಎಲ್ಲ ವರ್ಗಗಳನ್ನು ತಲುಪಬೇಕೆಂದು, ತಳಮಟ್ಟದಲ್ಲಿ ಸಾಮರಸ್ಯ ಮತ್ತು ಏಕತೆಯ ಸಂದೇಶವನ್ನು ಹರಡಲು ಅವರನ್ನು ತಮ್ಮ ಮನೆಗಳಿಗೆ ಆಹ್ವಾನಿಸಬೇಕೆಂದು ಅವರು ಒತ್ತಾಯಿಸಿದರು.

ಸಂಸ್ಕಾರದಿಂದ ಪಡೆದ ಬಲವಾದ ಕುಟುಂಬ ಮೌಲ್ಯಗಳ ಮೇಲೆ ನಿರ್ಮಿಸಲಾದ ‘ಕುಟುಂಬ’ವು ಸಮಾಜದ ಮೂಲಭೂತ ಘಟಕವಾಗಿ ಉಳಿದಿದೆ. ರಾಷ್ಟ್ರೀಯತೆ ಮತ್ತು ಸಾಮಾಜಿಕ ಒಗ್ಗಟ್ಟಿನ ಅಡಿಪಾಯವನ್ನು ಬಲಪಡಿಸಲು ಹಬ್ಬಗಳ ಸಾಮೂಹಿಕ ಆಚರಣೆ ಮಾಡಬೇಕು ಎಂದು ಭಾಗವತ್ ಹೇಳಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 17 ರಂದು ಪ್ರಾರಂಭವಾದ ಅವರ ಭೇಟಿಯು, ಈ ವಿಜಯದಶಮಿಯಿಂದ ಪ್ರಾರಂಭವಾಗುವ ಆರ್‌ಎಸ್‌ಎಸ್ ಶತಮಾನೋತ್ಸವ ಆಚರಣೆಯ ಸಿದ್ಧತೆಗಳ ಭಾಗವಾಗಿ ಬ್ರಜ್ ಪ್ರದೇಶದ ಆರ್‌ಎಸ್‌ಎಸ್ ಪ್ರಚಾರಕರೊಂದಿಗೆ ದೈನಂದಿನ ಸಭೆಗಳನ್ನು ಒಳಗೊಂಡಿದೆ.

ಬಿಜೆಪಿ ಶಾಸಕನಿಂದ ‘ಲವ್ ಜಿಹಾದ್’ ಆರೋಪ; ಅಂಗಡಿ-ಮನೆಗಳನ್ನು ಸುಟ್ಟುಹಾಕಿದ ಉದ್ರಿಕ್ತ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...