Homeಕರ್ನಾಟಕಭೈರಪ್ಪ ಬಿಜೆಪಿ ವಕ್ತಾರರಂತೆ ಮಾತನಾಡಬಾರದು: ವಿಶ್ವನಾಥ್‌ ಸಲಹೆ

ಭೈರಪ್ಪ ಬಿಜೆಪಿ ವಕ್ತಾರರಂತೆ ಮಾತನಾಡಬಾರದು: ವಿಶ್ವನಾಥ್‌ ಸಲಹೆ

“ಶಿಕ್ಷಣ ಇಲಾಖೆಯ ಗೊಂದಲಕ್ಕೆ ಕಂದಾಯ ಮಂತ್ರಿ ಉತ್ತರ ಕೊಡಬೇಕಾ?” ಎಂದು ವಿಶ್ವನಾಥ್‌ ಕೇಳಿದ್ದಾರೆ.

- Advertisement -
- Advertisement -

“ಡಾ.ಎಸ್‌.ಎಲ್‌.ಭೈರಪ್ಪ ಅವರು ದೊಡ್ಡ ಸಾಹಿತಿ. ಆದರೆ ಅವರು ಬಿಜೆಪಿ ವಕ್ತಾರರ ರೀತಿ ಮಾತನಾಡಬಾರದು” ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ.

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಾದಿತ ಪಠ್ಯಪುಸ್ತಕಗಳ ಕುರಿತು ಭೈರಪ್ಪನವರು ಒಲವು ತೋರಿರುವುದಕ್ಕೆ ಪ್ರತಿಕ್ರಿಯೆ ನೀಡಿದರು.

“ಭೈರಪ್ಪ ದೊಡ್ಡ ಸಾಹಿತಿ. ಅವರು ಬಿಜೆಪಿ ವಕ್ತಾರರ ರೀತಿ ಮಾತನಾಡಬಾರದು. ಸಾರಸ್ವತ ಲೋಕದ ಸೌಂದರ್ಯ ಹೆಚ್ಚಿಸಬೇಕೇ ಹೊರತು, ಪಕ್ಷದ ವಕಾಲತ್ತು ವಹಿಸಬಾರದು. ಅವರ ಮಾತುಗಳಲ್ಲಿ ರಾಜಕೀಯ ದುರ್ನಾತ ಬರುತ್ತಿದೆ. ಇದು ಅವರಿಗೆ ಶೋಭೆ ತರುವಂಥದ್ದಲ್ಲ” ಎಂದು ಕಿವಿಮಾತು ಹೇಳಿದರು.

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್‌.ಅಶೋಕ್‌ ಸುದ್ದಿಗೋಷ್ಠಿ ನಡೆಸಿರುವುದನ್ನು ಕಟುವಾಗಿ ಟೀಕಿಸಿರುವ ವಿಶ್ವನಾಥ್‌, “ಪಠ್ಯ ಪರಿಷ್ಕರಣೆ ‍ಪ್ರಕ್ರಿಯೆ ಯಾವುದೋ ಪಕ್ಷದ ಕಾರ್ಯಕ್ರಮವಲ್ಲ. ಸದ್ಯ ಶಿಕ್ಷಣ ಇಲಾಖೆ ಅಧೋಗತಿಗೆ ಹೋಗುತ್ತಿದೆ. ಶಿಕ್ಷಣ ಇಲಾಖೆಯ ಗೊಂದಲಕ್ಕೆ ಕಂದಾಯ ಮಂತ್ರಿ ಉತ್ತರ ಕೊಡಬೇಕಾ? ನಗರಾಭಿವೃದ್ಧಿ ಸಚಿವರು ಉತ್ತರಿಸುತ್ತಾರೆ ಎಂದರೆ ಏನರ್ಥ? ಶಿಕ್ಷಣ ಸಚಿವ ನಾಗೇಶ್ ಏನು ಮಾಡುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಟ್ರಾಕ್ಟರ್‌2ಟ್ವಿಟರ್‌’, ‘ಕಿಸಾನ್‌ಏಕ್ತಾಮೋರ್ಚಾ’ ಟ್ವಿಟರ್‌ ಖಾತೆಗಳಿಗೆ ತಡೆ: ಕಾರಣ?

“ಪಠ್ಯಕ್ರಮದ ವಿಷಯದಲ್ಲಿ ಮತ್ತು ಅಕ್ಷರದ ಮೇಲೆ ಸರ್ಕಾರ ಹಠ ಮಾಡಬಾರದು; ಪ್ರತಿಷ್ಠೆಯಾಗಿ ಸ್ವೀಕರಿಸಬಾರದು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವ ವಿಷಯದಲ್ಲಿ ಹಠ ಮಾಡಲಿ, ಶಿಕ್ಷಣ ರಂಗವನ್ನು ಉನ್ನತಮಟ್ಟಕ್ಕೆ ತೆಗೆದುಕೊಂಡು ಹೋಗುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿ” ಎಂದಿದ್ದಾರೆ.

“ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸುವ ಪಠ್ಯಕ್ರಮವನ್ನು ಇಡೀ ನಾಡು ಒಕ್ಕೊರಲಿಂದ ವಿರೋಧಿಸಿದೆ. ಆದ್ದರಿಂದ, ಆ ಪಠ್ಯವನ್ನು ವಾಪಸ್ ಪಡೆದು ಪ್ರಸಕ್ತ ಸಾಲಿನಲ್ಲಿ ಹಳೆಯದ್ದನ್ನೇ ಬೋಧಿಸಬೇಕು. ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಸಾಹಿತಿಗಳು, ಪೋಷಕರು, ತಜ್ಞರನ್ನು ಒಳಗೊಂಡ ಸಮಿತಿ ರಚಿಸಿ, ವಿಸ್ತೃತವಾಗಿ ಚರ್ಚಿಸಿ ಪಠ್ಯಪುಸ್ತಕ ಪರಿಷ್ಕರಿಸಬೇಕು. ಮುಂದಿನ ಶೈಕ್ಷಣಿಕ ಸಾಲಿನಿಂದ ಎಲ್ಲವನ್ನೂ ಸರಿಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

ಪಠ್ಯಪುಸ್ತಕ ವಿವಾದದ ಆರಂಭದಿಂದಲೂ ಎ.ಎಚ್.ವಿಶ್ವನಾಥ್‌ ಸರ್ಕಾರದ ನಡೆಯನ್ನು ಖಂಡಿಸುತ್ತಲೇ ಬಂದಿದ್ದಾರೆ. ಇವರ ಜೊತೆ ಅನೇಕ ಬಿಜೆಪಿ ನಾಯಕರೂ ದನಿಗೂಡಿಸಿದ್ದಾರೆ.

ವಿವಾದದ ಆರಂಭದಲ್ಲೇ ಪ್ರತಿಕ್ರಿಯೆ ನೀಡಿದ್ದ ಅಡಗೂರು ಎಚ್‌.ವಿಶ್ವನಾಥ್‌, “ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲ. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವುದು ದುರಂತ” ಎಂದಿದ್ದರು.

“ಮನಸ್ಸಿಗೆ ಬಹಳ ಬೇಜಾರಾಗುತ್ತಿದೆ. ಪಠ್ಯಪುಸ್ತಕ ಎಂಬುದು ರಾಜಕೀಯ ಸಂಘರ್ಷವಲ್ಲ. ಒಂದು ಸರ್ಕಾರದ ನೀತಿಯ ಮೇಲೆ ಅವುಗಳು ರಚನೆಯಾಗಬಾರದು. ಇನ್ನೊಂದು ಸರ್ಕಾರ ಅವುಗಳನ್ನು ಬದಲಿಸುವುದು ಸರಿಯಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....