Homeಮುಖಪುಟರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

- Advertisement -
- Advertisement -

ರಾಜಸ್ಥಾನದ ನೂತನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಇಂದು ಜೈಪುರದಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ.

ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇ ಅವರು ಭಜನ್‌ ಲಾಲ್ ಶರ್ಮಾ ಹೆಸರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಪ್ರಸ್ತಾಪಿಸಿದ್ದು, ಅದಕ್ಕೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಜೈಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.

ಭಜನ್‌ ಲಾಲ್ ಶರ್ಮಾ ಸಂಗನೇರ್ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರು. ಆದರೂ, ಆರೆಸ್ಸೆಸ್ ನಾಯಕರ ಜೊತೆಗಿನ ನಿಕಟ ಸಂಪರ್ಕ ಸಿಎಂ ಸ್ಥಾನಕ್ಕೇರುವಂತೆ ಮಾಡಿದೆ. ಭಜನ್‌ ಲಾಲ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ವಿಶ್ವಾಸಾರ್ಹ ಪಕ್ಷದ ಸದಸ್ಯ ಎಂದೂ ತಿಳಿದು ಬಂದಿದೆ.

ಬಿಜೆಪಿ ಶಾಸಕಾಂಗ ಪಕ್ಷವು ವಾಸುದೇವ್ ದೇವನಾನಿ ಅವರನ್ನು ಹೊಸ ಸ್ಪೀಕರ್ ಆಗಿ ಆಯ್ಕೆ ಮಾಡಿದೆ. ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಘೋಷಣೆ ಮಾಡಿದೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಪ್ರಲ್ಹಾದ್ ಜೋಶಿ ಜೈಪುರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನೇತೃತ್ವ ವಹಿಸಿದ್ದರು.

ಮೂರು ರಾಜ್ಯಗಳಲ್ಲೂ ಹೊಸಬರಿಗೆ ಸಿಎಂ ಪಟ್ಟ

ಪಂಚರಾಜ್ಯ ಚುನಾವಣೆಗಳ ಪೈಕಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು ದಾಖಲಿಸಿತ್ತು. ಮೂರು ರಾಜ್ಯಗಳಲ್ಲೂ ಹೊಸ ಮುಖಗಳನ್ನು ಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡಲಾಗಿದೆ. ಛತ್ತೀಸ್‌ಗಢದಲ್ಲಿ ವಿಷ್ಣು ದೇವ್ ಸಾಯಿ, ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್ ಮತ್ತು ರಾಜಸ್ಥಾನದಲ್ಲಿ ಭಜನ್‌ಲಾಲ್ ಶರ್ಮಾ ಆಯ್ಕೆಯಾಗಿದ್ದಾರೆ.

ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಮತ್ತು ಪ್ರಮುಖ ಬಿಜೆಪಿ ನಾಯಕಿ ವಸುಂಧರಾ ರಾಜೇ ಸಿಎಂ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು. ಆದರೆ, ಹೊಸ ಶಾಸಕ ಭಜನ್ ಲಾಲ್ ಶರ್ಮಾ ಅವರಿಗೆ ಮನೆ ಹಾಕಿ ಹೈಕಮಾಂಡ್ ರಾಜೇ ಅವರಿಗೆ ಶಾಕ್ ಕೊಟ್ಟಿದೆ. ಆದರೆ, ರಾಜೇ ಅವರೇ ನೂತನ ಸಿಎಂ ಹೆಸರು ಪ್ರಸ್ತಾಪಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಮಧ್ಯಪ್ರದೇಶದಲ್ಲೂ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರದ ಮಾಜಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೆಸರು ಸಿಎಂ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿತ್ತು. ಆದರೆ, ಹೈಕಮಾಂಡ್ ಮೋಹನ್ ಯಾದವ್‌ ಅವರನ್ನು ಆಯ್ಕೆ ಮಾಡಿದೆ. ತೋಮರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಘೋಷಣೆ ಮಾಡಿದೆ.

ಛತ್ತೀಸ್‌ಗಢ, ಮಧ್ಯಪ್ರದೇಶ ಸಿಎಂ ನಾಳೆ ಪ್ರಮಾಣ ವಚನ:

ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶ ರಾಜ್ಯಗಳ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನಾಳೆ(ಡಿ.13) ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಾಳೆ ಪ್ರಧಾನಿ ಮೋದಿ ಮೊದಲು ಮಧ್ಯಪ್ರದೇಶಕ್ಕೆ ಬೆಳಗ್ಗೆ 11.30ಕ್ಕೆ ತಲುಪಲಿದ್ದು, ಅಲ್ಲಿ ನೂತನ ಸಿಎಂ ಮೋಹನ್ ಯಾದವ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಲಿದ್ದಾರೆ. ಇದಾದ ಬಳಿಕ ಸಂಜೆ 4 ಗಂಟೆಗೆ ಛತ್ತೀಸ್‌ಗಢ ತಲುಪಲಿರುವ ಪ್ರಧಾನಿ, ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ : ಅಮಿತ್ ಶಾಗೆ ಇತಿಹಾಸದ ಅರಿವಿಲ್ಲ: ರಾಹುಲ್ ತಿರುಗೇಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read