Homeಮುಖಪುಟಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಭಾರತ ಬಂದ್: ತುಮಕೂರಿನಲ್ಲಿ ಸಕಲ ಸಿದ್ಧತೆ, ಹಲವು ಸಂಘಟನೆಗಳ ಬೆಂಬಲ

ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್‌ಗೆ ಸ್ಪಂದಿಸಬೇಕು.

- Advertisement -
- Advertisement -

ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹಿಸಿ ತುಮಕೂರಿನಲ್ಲಿಯೂ ಡಿಸೆಂಬರ್ 8ರಂದು ಬಂದ್ ನಡೆಸುತ್ತಿದ್ದು ರೈತ, ದಲಿತ, ಪ್ರಗತಿಪರ, ಕನ್ನಡಪರ, ಕಾರ್ಮಿಕ ಸಂಘಟನೆಗಳು, ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಾಹಿತಿ-ಕಲಾವಿದರಿಂದ ಬೆಂಬಲದ ಮಹಾಪೂರ ಹರಿದುಬಂದಿದೆ. ಜಿಲ್ಲೆಯ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಮೆರವಣಿಗೆ ನಡೆಸಿ ಬಂದ್ ಆಚರಿಸಲಾಗುವುದು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಅನ್ನ ನೀಡುವ ರೈತರಪರ ಬಂದ್ ಗೆ ಸ್ಪಂದಿಸಬೇಕು ಎಂದು ಮುಖಂಡರು ಮನವಿ ಮಾಡಿದ್ದಾರೆ.

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಬಂದ್ ಗೆ ಜನರಿಂದಲೂ ಬೆಂಬಲ ದೊರೆಯುತ್ತಿದೆ. ದೇಶದ ಬೆನ್ನೆಲುಬು, ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದು ಹನ್ನೆರಡು ದಿನಗಳಿಂದಲೂ ಚಳಿ ಮಳೆ ಲೆಕ್ಕಿಸದೆ ದೆಹಲಿಯಲ್ಲಿ ನೂರಾರು ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ. ದೇಶದ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಸಂಗೀತ ಕೇಳುವುದರಲ್ಲಿ ಮತ್ತು ಇತರೆ ಕಾರ್ಯಕ್ರಮಗಳಲ್ಲಿ ಮಗ್ನರಾಗಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಯಾವೊಬ್ಬ ಪ್ರಧಾನಿಯೂ ಹೀಗೆ ರೈತರನ್ನು ಕಡೆಗಣಿಸಿರಲಿಲ್ಲ. ರೈತರನ್ನು ಇಷ್ಟೊಂದು ಕ್ರೂರವಾಗಿ ನಡೆಸಿಕೊಂಡಿರಲಿಲ್ಲ ಎಂದು ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೂರ ಕಾನೂನುಗಳನ್ನು ಜಾರಿಗೊಳಿಸುತ್ತಿವೆ. ಇವುಗಳು ರೈತರನ್ನು ಸಂಕಷ್ಟಕ್ಕೆ ಗುರಿ ಮಾಡುತ್ತವೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಂಥ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಈ ಬೇಡಿಕೆಗಳ ಆಧಾರದ ಮೇಲೆ ದೆಹಲಿಯಲ್ಲಿ ನಡೆಸುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ತುಮಕೂರು ಬಂದ್ ಗೆ ಆಚರಿಸುತ್ತೇವೆ. ಎಲ್ಲಾ 10 ತಾಲೂಕುಗಳಲ್ಲೂ ಪ್ರತಿಭಟನೆ ನಡೆಸುತ್ತೇವೆ. ದೆಹಲಿಯಲ್ಲಿ ರೈತರ ಮೇಲೆ ಜಲಫಿರಂಗಿ ಮೂಲಕ ಹೋರಾಟ ಹತ್ತಿಕ್ಕುವುದನ್ನು ಖಂಡಿಸುತ್ತೇವೆ. ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂದಕ್ಕೆ ಪಡೆಯಬೇಕು. ಸ್ವಾಮಿನಾಥನ್ ವರದಿಯನ್ನು ಯಥಾವತ್ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಮತ್ತು ಎಐಕೆಎಸ್ ಮುಖಂಡ ಕಂಬೇಗೌಡ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಸರಿಯಲ್ಲ. ರೈತರ ಪ್ರತಿಭಟನೆಗಳನ್ನು ಪ್ರಧಾನಿ ಗಮನಿಸಬೇಕಿತ್ತು. ಅವರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಮೊಂಡುತನ ಪ್ರದರ್ಶಿಸುತ್ತಿರುವುದು ಖಂಡನೀಯ. ಪ್ರಧಾನಿಯ ಧೋರಣೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ಎತ್ತಿತೋರಿಸುತ್ತದೆ” ಎಂದು ಟೀಕಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ಮಾತನಾಡಿ, ಪ್ರಧಾನಿಯದು ಹಿಟ್ಲರ್ ಧೋರಣೆ. ಸರ್ವಾಧಿಕಾರಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ನಿಯಮಗಳಂತೆ ನಡೆಯಬೇಕು. ಅದು ಬಿಟ್ಟು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಖಂಡನೀಯ. ಬಂದ್ ಗೆ ನಮ್ಮ ಬೆಂಬಲವೂ ಇದೆ. ಜನರಿಗೆ ಅನ್ನ ನೀಡುವ ರೈತರು ಬೀದಿಗೆ ಬಿದ್ದಿದ್ದಾರೆ. ಹಾಗಾಗಿ ಆಟೋಚಾಲಕರು, ಬಸ್ ಮಾಲಿಕರು, ಬೀದಿ ಬದಿ ವ್ಯಾಪಾರಿಗಳು ಬಂದ್ ಗೆ ಸಹಕಾರ ನೀಡಬೇಕು. ಸರ್ಕಾರ ರೈತರ ಮೇಲಿನ ದಬ್ಬಾಳಿಕೆಯನ್ನು ನಿಲ್ಲಿಸಬೇಕು. ಕೃಷಿ-ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಮಾಡಬೇಕು ಎಂದು ಒತ್ತಾಯಿಸಿದರು.

ಬಂದ್ ಗೆ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ತುಮಕೂರು ಜಿಲ್ಲಾ ಸಮಿತಿ ಕೂಡ ಬೆಂಬಲ ಸೂಚಿಸಿದೆ.  ರೈತರ ಹೋರಾಟ ಗ್ರಾಮೀಣ ಭಾರತದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹೊಸ ಕೃಷಿ ಕಾಯ್ದೆಗಳಿಂದ ಒಕ್ಕಲುತನಕ್ಕೆ ಧಕ್ಕೆ ಆಗಲಿದೆ.  ಕಂಪನಿಗಳು ಕೃಷಿ ಮಾಡಲಿವೆ. ಇದರಿಂದ ಜನರೂ ಕೂಡ ತೀವ್ರ ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ. ಹಾಗಾಗಿ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು. ಈ ಕಾಯ್ದೆಗಳು ಅನುಷ್ಠಾನಕ್ಕೆ ಬಂದರೆ ಸಂ ರೈತರು ಕಾರ್ಪೊರೇಟ್ ಕಂಪೆನಿಗಳ ಗುಲಾಮರಾಗಿ ಕೆಲಸ ಮಾಡಬೇಕಾದ ಅನಿವಾರ್ಯತೆ ಬರುತ್ತದೆ. ಅದಾನಿ, ಅಂಬಾನಿಗಳ ಸೂಪರ್ ಲಾಭ ಗಳಿಕೆಗೆ ದಾರಿ ಮಾಡಿಕೊಡುತ್ತದೆ.  ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ. ಹಾಗಾಗಿ ಸರ್ಕಾರ ತನ್ನ ಬಿಗಿ ನಿಲುವಿನಿಂದ ಹಿಂದೆ ಸರಿಯಬೇಕು ಎಂದು ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ಹೇಳಿಕೆ ನೀಡಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...