Homeಚಳವಳಿಭಾರತ್ ಬಂದ್: ರೈತರ ಕರೆಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ಬೆಂಬಲ

ಭಾರತ್ ಬಂದ್: ರೈತರ ಕರೆಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ಬೆಂಬಲ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27ಕ್ಕೆ ಕರೆ ನೀಡಿರುವ ಭಾರತ್ ಬಂದ್‌ಗೆ ಜಗನ್ ಮೋಹನ್ ರೆಡ್ಡಿಯವರ ಆಂಧ್ರಪ್ರದೇಶ ಸರ್ಕಾರ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ.

ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಕಾರ್ಮಿಕರಿಗೆ ಮತ್ತು ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತದೆ ಎಂದು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರಿದಂತೆ ಆಂಧ್ರಪ್ರದೇಶ ಸರ್ಕಾರವು ರೈತರು ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಮಿಕರ  ಪ್ರತಿಭಟನೆಯನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 26 ಮಧ್ಯರಾತ್ರಿಯಿಂದ ಸೆಪ್ಟೆಂಬರ್ 27 ಮಧ್ಯಾಹ್ನದವರೆಗೆ ರಾಜ್ಯಾದ್ಯಂತ ಎಪಿಎಸ್‌ಆರ್‌ಟಿಸಿ ಬಸ್‌ಗಳನ್ನು  ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಪೆರ್ನಿ ವೆಂಕಟರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ತಾನು ಸಂಪೂರ್ಣವಾಗಿ ವಿರೋಧಿಸುತ್ತೇನೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಬಂದ್‌ನಲ್ಲಿ ಶಾಂತಿಯುತ ಪ್ರತಿಭಟನೆಗೆ ಮನವಿ ಮಾಡಿದ್ದಾರೆ.

ಈಗಾಗಲೇ ಕಾಂಗ್ರೆಸ್, ಎಡಪಕ್ಷಗಳು ಮತ್ತು ತೆಲುಗು ದೇಶಂ ಪಕ್ಷಗಳು ಭಾರತ್ ಬಂದ್‌ಗೆ ತಮ್ಮ ಬೆಂಬಲವನ್ನು ಸೂಚಿಸಿವೆ. ರೈತರು ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ರಾಜ್ಯದಲ್ಲಿಯೂ ಸೋಮವಾರ ಕರ್ನಾಟಕ ಬಂದ್‌ಗೆ ರೈತಪರ ಸಂಘಟನೆಗಳು ಕರೆ ನೀಡಿದೆ. ರೈತರ ಕರೆಗೆ ಶಾಲಾ-ಕಾಲೇಜುಗಳು ನೈತಿಕ ಬೆಂಬಲ ವ್ಯಕ್ತಪಡಿಸಿದ್ದು, ಅಖಿಲ ಭಾರತ ವಕೀಲರ ಒಕ್ಕೂಟ ಸಂಪೂರ್ಣ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಘೋಷಿಸಿದೆ.

ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಮಹಿಳಾ, ದಲಿತ, ಜನಪರ ಸಂಘಟನೆಗಳು ಪ್ರತಿಭಟನೆಯಲ್ಲಿ ತೊಡಗಿಸಿಕೊಳ್ಳಲು ಸಭೆ ನಡೆಸಿ ನಿರ್ಧರಿಸಿವೆ. ಭಾರತ್ ಬಂದ್ ಹಿನ್ನೆಲೆ ರಾಜ್ಯದಲ್ಲಿ ಕರ್ನಾಟಕ ಬಂದ್ ಯಶಸ್ವಿಗೊಳಿಸುವುದು ಮುಖ್ಯ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...