ಜನವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಇಂದು (ಸೆ.27) ನಡೆಯುತ್ತಿರುವ ಭಾರತ್ ಬಂದ್ ಬೆಂಬಲಿಸಿ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆಗಳು ನಡೆಯಿತು.
ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಜರುಗಿತು. ಆನಂದರಾವ್ ವತ್ತದ ಬಳಿಯ ಗಾಂಧಿ ಪ್ರತಿಮೆ, ಸ್ವಾತಂತ್ರ್ಯ ಉದ್ಯಾನ, ಕೆ.ಆರ್.ವೃತ್ತ, ನೃಪತುಂಗ ವೃತದ ಮೂಲಕ ತೆರಳಿದ ಮೆರವಣಿಗೆ ಮೈಸೂರು ಬ್ಯಾಂಕ್ ವೃತ್ತಕ್ಕೆ ತಲುಪಿತು. ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಮೆಜಸ್ಟಿಕ್, ಕಾರ್ಪೋರೇಷನ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಯ ಕಾವು..
ಬೆಂಗಳೂರಿನಲ್ಲಿ ಬಂದ್ ಈ ರೀತಿ ಇದೆ..#BharatBandh #BharathBandh #FarmersProtest pic.twitter.com/amSTGDusfk
— Naanu Gauri (@naanugauri) September 27, 2021
ಬಿಎಸ್‌ಎನ್‌ಎಲ್ ಎಂಪ್ಲಾಯೀಸ್ ಯೂನಿಯನ್ ವತಿಯಿಂದಲೂ ಪ್ರತಿಭಟನೆ ನಡೆಸಲಾಯಿತು. ಕಾರ್ಮಿಕ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಅನ್ನದಾತರ ಹೋರಾಟಕ್ಕೆ ಕೈಜೋಡಿಸಿವೆ.
ಪ್ರತಿಭಟನೆ ನಡೆಸಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿರುವ ಘಟನೆಯೂ ನಡೆದಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿತ್ತು.
ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ


