Homeಕರ್ನಾಟಕಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

- Advertisement -
- Advertisement -

ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟಂಬರ್‌ 27ಕ್ಕೆ ಕರೆ ನೀಡುರುವ ಭಾರತ್ ಬಂದ್‌ಗೆ ರಾಷ್ಟ್ರವ್ಯಾಪಿ ಬೆಂಬಲ ವ್ಯಕ್ತವಾಗಿದೆ. ಅಖಿಲ ಭಾರತ ವಕೀಲರ ಒಕ್ಕೂಟದ ಕರ್ನಾಟಕ ರಾಜ್ಯ ಸಮಿತಿ ಕೂಡ ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ವಕೀಲರ ಒಕ್ಕೂಟದ ಕರ್ನಾಟಕ ರಾಜ್ಯ ಸಮಿತಿ, ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿ ಬಂದ್‌ನಲ್ಲಿ ಭಾಗವಹಿಸುವುದಾಗಿ ತಿಳಿಸಿದೆ.

“ಭಾರತ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಐತರ ಬೇಡಿಕೆಗಳಿಗೆ ಸ್ಪಂದಿಸದೆ ಸರ್ಕಾರ ರೈತ ವಿರೋಧಿ ನಿಲುವುಗಳನ್ನು ಮುಂದುವರೆಸುತ್ತಿರುವುದು ದುರಾದೃಷ್ಟಕರ” ಎಂದಿದೆ”.

ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

“ಸೆ. 27 ರಂದು ಹಲವು ರೈತ ಸಂಘಟನೆಗಳು ಒಗ್ಗೂಡಿ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ಗೆ ಕರೆ ನೀಡಿದ್ದು, ಸದರಿ ಕೃಷಿ ಮಸೂದೆಗಳಲ್ಲಿ ರೈತರ ಹಿತಾಸಕ್ತಿ ಯನ್ನು ಕಡೆಗಣಿಸಿ, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗುವಂತಹ ಹತ್ತಾರು ಅಂಶಗಳನ್ನು ಒಳಗೊಂಡಿದ್ದು ,ಈ ಕೃಷಿ ಕಾಯ್ದೆಗಳನ್ನು ಅಖಿಲ ಭಾರತ ವಕೀಲರ ಒಕ್ಕೂಟ (AILU ) ಕರ್ನಾಟಕ ರಾಜ್ಯ ಸಮಿತಿ ವಿರೋಧಿಸುತ್ತಿದ್ದು ಭಾರತ್ ಬಂದ್ ಅನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಹೇಳಿಕೆ ನೀಡಿದೆ.

ಭಾರತ್ ಬಂದ್‌ಗೆ ಎಸ್‌ಕೆಎಂ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಬಂದ್‌ ಶಾಂತಿಯುತವಾಗಿರುತ್ತದೆ ಮತ್ತು ಜನರು ಯಾವುದೇ ಅನಾನುಕೂಲತೆಯನ್ನು ಅನುಭವಿಸದಂತೆ ರೈತರು ನೋಡಿಕೊಳ್ಳುತ್ತಾರೆ ಎಂದು ಹೇಳಿದೆ.

“ಒಕ್ಕೂಟ ಸರ್ಕಾರದ ರಾಜ್ಯ ಕಚೇರಿಗಳು, ಮಾರುಕಟ್ಟೆಗಳು, ಅಂಗಡಿಗಳು, ಕಾರ್ಖಾನೆಗಳು, ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಅಂದು ಬಂದ್‌ ಆಗಲಿದೆ. ಬಂದ್‌‌ ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗಿ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ” ಎಂದು ಎಸ್‌ಕೆಎಂ ಶುಕ್ರವಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಸೆ. 27 ರಂದು ರಾಜ್ಯದಲ್ಲಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, “ ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾರ್ಥಿ, ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...