Homeಚಳವಳಿಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಭಾರತ್ ಬಂದ್‌ಗೆ, ಆರ್‌ಜೆಡಿ, ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ಟಿಆರ್‌ಎಸ್, 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ಬೆಂಬಲವನ್ನು ಘೋಷಿಸಿವೆ.

- Advertisement -
- Advertisement -

ಪ್ರತಿಭಟನಾ ನಿತರ ರೈತರು ಮತ್ತು ಸರ್ಕಾರದ ನಡುವಿನ ಐದನೇ ಸುತ್ತಿನ ಮಾತುಕತೆ ಶನಿವಾರ  ವಿಫಲವಾಗಿದ್ದರಿಂದ, ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ಡಿಸೆಂಬರ್ 8 ರ ಮಂಗಳವಾರ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.

ಕೃಷಿ ಮಸೂದೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಕೇಂದ್ರ ಸರ್ಕಾರ ಪದೇ ಪದೇ ಆಶ್ವಾಸನೆ ನೀಡಿದೆ. ಆದರೆ ಸಭೆಗಳು ವಿಫಲವಾಗುತ್ತಿರುವುದರಿಂದ, ಡಿಸೆಂಬರ್ 8 ಕ್ಕೆ ಘೋಷಿಸಲಾದ ಭಾರತ್ ಬಂದ್ ಯೋಜಿಸಿದಂತೆ ನಡೆಯಲಿದೆ ಎಂದು ಕೃಷಿ ಒಕ್ಕೂಟದ ಮುಖಂಡರು ಹೇಳಿದ್ದಾರೆ. ರೈತರ ಪ್ರತಿಭಟನೆಗೆ  ಬಿಜೆಪಿಯೇತರ ಸರ್ಕಾರಗಳು, ಎಡ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ 2020, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ 2020 ರ ರೈತ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ- 2020 ಇವುಗಳನ್ನು ವಿರೋಧಿಸಿ ರೈತರು ಕಳೆದ 11 ದಿನಗಳಿಂದಲೂ  ಪ್ರತಿಭಟಿಸುತ್ತಿದ್ದಾರೆ.

“ಸರ್ಕಾರವು ಕೃಷಿ ಕಾನೂನುಗಳ ಸಂಬಂಧ ಕರಡನ್ನು ಸಿದ್ಧಪಡಿಸಿ ನಮಗೆ ನೀಡುತ್ತದೆ. ಈ ಕುರಿತು ಕೇಂದ್ರ ಸರ್ಕಾರ ರಾಜ್ಯಗಳನ್ನೂ ಸಂಪರ್ಕಿಸುತ್ತಾರೆ ಎಂದು ತಿಳಿಸಿದ್ದಾರೆ. ಎಂಎಸ್‌ಪಿ ಬಗ್ಗೆಯೂ ಚರ್ಚೆಗಳು ನಡೆದವು. ಆದರೆ, ನಾವು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಕುರಿತು ಮಾತನಾಡಬೇಕು ಎಂದು ಹೇಳಿದ್ದೇವೆ. ಈ ಮೊದಲು ಘೋಷಿಸಿದಂತೆ ಭಾರತ್ ಬಂದ್ ನಡೆಯಲಿದೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಸರ್ಕಾರದ ಜೊತೆ ಮಾತುಕತೆಯಿಂದ ಪ್ರಯೋಜನವಿಲ್ಲ. ಅವರು ಕಾಯ್ದೆಗಳನ್ನು ವಾಪಸ್ ಪಡೆಯಲು ಮುಂದಾಗುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ. ಹಾಗಾಗಿ ಮಂಗಳವಾರ ಭಾರತ್ ಬಂದ್ ನಡೆಸಲಿದ್ದೇವೆ. ದೆಹಲಿಯ ಪ್ರತಿ ರಸ್ತೆಗಳನ್ನು, ಪ್ರತಿ ಟೋಲ್‌ಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಘೋಷಿಸಿದ್ದರು.

ರೈತರ ಭಾರತ್ ಬಂದ್‌ಗೆ, ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ದೇಶಾದ್ಯಂತ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ಭಾರತ್ ಬಂದ್ ಕರೆಯ ಭಾಗವಾಗಿ, ರೈತರು ದೆಹಲಿಗೆ ಹೋಗುವ ಎಲ್ಲಾ ರಸ್ತೆಗಳನ್ನು ನಿರ್ಬಂಧಿಸಲು ಸಿದ್ಧರಾಗಿದ್ದಾರೆ. ಟೋಲ್ ಪ್ಲಾಜಾಗಳನ್ನು ಸಹ ಆಕ್ರಮಿಸಲಾಗುವುದು ಮತ್ತು ಕೇಂದ್ರ ಸರ್ಕಾರ ಮತ್ತು ಕಾರ್ಪೊರೇಟ್ ಸಂಸ್ಥೆಗಳ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳಲಿದೆ.

ಎಡ ಪಕ್ಷಗಳು ಭಾರತ್ ಬಂದ್‌ಗಾಗಿ ರೈತರ ಕರೆಗೆ ತಮ್ಮ ಬೆಂಬಲವನ್ನು ಸೂಚಿಸಿದ್ದು, ರೈತರಿಗೆ ಸಹಕಾರ ನೀಡಿ ಪ್ರತಿಭಟನೆಗೆ ಬೆಂಬಲ ತೋರಿಸುವಂತೆ ಇತರ ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ. ಸಿಪಿಐ, ಸಿಪಿಐ (ಎಂ) ಮತ್ತು ಸಿಪಿಎಂ (ಎಂಎಲ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ ಮತ್ತು ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC), ಹಿಂದ್ ಮಜ್ದೂರ್ ಸಭಾ (HMS), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಅಖಿಲ ಭಾರತ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC)  ಮತ್ತು ಟ್ರೇಡ್ ಯೂನಿಯನ್ ಕೋ- ಆರ್ಡಿನೇಷನ್ ಸೆಂಟರ್ (TUCC)  ಕಾರ್ಮಿಕ ಸಂಘಟನೆಗಳು ಸಹ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ನೀಡಿವೆ.

ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಬಿಹಾರದ ಗಾಂಧಿ ಮೈದಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಕ್ಕಾಗಿ ಪಾಟ್ನಾ ಪೊಲೀಸರು ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಮತ್ತು ಇತರ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ದೆಹಲಿ ಚಲೋ ಆಂದೋಲನಕ್ಕೆ ಒಗ್ಗಟ್ಟಾಗಿ ಪ್ರತಿಭಟನೆ ನಡೆಸಬೇಕೆಂದು ಬಿಹಾರ ವಿಧಾನಸಭೆ ಪ್ರತಿಪಕ್ಷದ ನಾಯಕ ತೇಜಶ್ವಿ ಯಾದವ್ ಕರೆ ನೀಡಿದ್ದರು.

ಆರ್‌ಜೆಡಿ, ಎಡ ಪಕ್ಷಗಳು ಮತ್ತು ಕಾಂಗ್ರೆಸ್ ಹಿರಿಯ ಮುಖಂಡರು ಶನಿವಾರ ಧರಣಿ ನಡೆಸಿದ್ದರು. ಧರಣಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ರೈತರ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆಗಳು ನಡೆಯಲಿವೆ. ಪ್ರತಿಭನಟನಾ ನಿರತ ರೈತ ಸಂಘಟನೆಗಳು, ಉತ್ತರ ಪ್ರದೇಶ ಮತ್ತು ಹರಿಯಾಣ ಗಡಿಯ ರೈತರಿಗೆ ತಮ್ಮೊಂದಿಗೆ ಸೇರಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಕಳೆದ 10 ದಿನಗಳಿಂದ, ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶವನ್ನು (ಎನ್‌ಸಿಆರ್) ಸಂಪರ್ಕಿಸುವ ರಸ್ತೆಗಳು, ದೆಹಲಿ ಗಡಿ ಭಾಗಗಳು ಪಂಜಾಬ್, ಹರಿಯಾಣ ಮತ್ತು ಇತರ ರಾಜ್ಯಗಳ ಸಾವಿರಾರು ರೈತರ ಪ್ರತಿಭಟನೆಗೆ ಸಾಕ್ಷಿಯಾಗಿದೆ.


ಇದನ್ನೂ ಓದಿ: ಅನ್ನ ನೀಡುವ ರೈತರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...