Homeಮುಖಪುಟಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ - AIKSCC

ಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ – AIKSCC

"ಸರ್ಕಾರವು ಜನರ ಧ್ವನಿಯನ್ನ ಆಲಿಸಲಿ. ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬಾರದು. ಇದು ರೈತರು ಮತ್ತು ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ"

- Advertisement -
- Advertisement -

ದೇಶದಾದ್ಯಂತ ಹಲವಾರು ರೈತ ಸಂಘಟನೆಗಳು ಹಮ್ಮಿಕೊಂಡಿದ್ದ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದ್ದು, “ಇದು ರೈತರು ಮತ್ತು ಕಾರ್ಪೋರೇಟ್ ಕಂಪನಿಗಳ ನಡುವಿನ ಹೋರಾಟವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ” ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳು ಮತ್ತು ವಿದ್ಯುತ್ ಕಾಯ್ದೆಯ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ದೇಶವ್ಯಾಪಿ ಹಮ್ಮಿಕೊಂಡಿದ್ದ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಿದ್ದಕ್ಕೆ AIKSCC ದೇಶದ ಜನತೆ ಮತ್ತು ಹತ್ತಾರು ಸಂಘಟನೆಗಳಿಗೆ ಧನ್ಯವಾದಗಳನ್ನು ಹೇಳಿದೆ.

ಇದನ್ನೂ ಓದಿ: ಭಾರತ್‌‌ ಬಂದ್ | ಕರ್ನಾಟಕದಲ್ಲಿ ಯಶಸ್ವಿ; ಜಿಲ್ಲಾವಾರು ಹೋರಾಟದ ಚಿತ್ರಗಳು!

“ದೇಶದಾದ್ಯಂತ ಎಲ್ಲಾ ವರ್ಗಕ್ಕೆ ಸೇರಿದ ಲಕ್ಷಾಂತರ ಜನರು ಈ ಹೋರಾಟದಲ್ಲಿ ಭಾಗವಹಿಸಿ ರೈತರ ನ್ಯಾಯಯುತವಾದ ಬೇಡಿಕೆಯನ್ನು ಗೌರವಿಸಿದ್ದಾರೆ. ಲಕ್ಷಾಂತರ ಸಂಖ್ಯೆಯ ರೈತರು ದೆಹಲಿಗೆ ನಡೆಸಿದ ಮೆರವಣಿಗೆಯಿಂದ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ. ಪ್ರತಿಭಟನಾ ನಿರತರನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಆ ಕುತಂತ್ರಗಳೆಲ್ಲವೂ ಇಂದು ವಿಫಲವಾಗಿವೆ. ಸರ್ಕಾರವು ಜನರ ಧ್ವನಿಯನ್ನ ಆಲಿಸಲಿ. ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬಾರದು. ಇದು ರೈತರು ಮತ್ತು ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ” ಎಂದು ಹೇಳಿದೆ.

AIKSCC ಸೇರಿದಂತೆ ಹತ್ತಾರು ರೈತ ಸಂಘಟನೆಗಳು ಸೇರಿದಂತೆ ದೇಶದ ಜನರು ಭಾರತ್ ಬಂದ್ ಕರೆಗೆ ಉತ್ಸಾಹದಿಂದ ಪ್ರತಿಕ್ರಿಯಿಸಿದ್ದು, ಈ ಸರ್ಕಾರ ನೀಡಿರುವ ‘ಆರ್ಥಿಕ ಉತ್ತೇಜಕ’ದ ಜವಾಬನ್ನು ದೇಶದ ಜನರು ತಿರಸ್ಕರಿಸಿದ್ದಾರೆ. ಹಲವು ದಿನಗಳಿಂದ ಸರ್ಕಾರದ ಮೊಂಡು ವಾದವನ್ನು ಕೇಳಿರುವ ರೈತರು ಸರ್ಕಾರದ ಧೋರಣೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಒಡಿಶಾ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದ್ದರೆ, ಕರ್ನಾಟಕ, ಮಹಾರಾಷ್ಟ್ರ, ಬಿಹಾರ, ತ್ರಿಪುರ, ಕೇರಳ ಸೇರಿದಂತೆ ಒಟ್ಟು 22 ರಾಜ್ಯಗಳಲ್ಲಿ ಭಾರತ್ ಬಂದ್ ಅನ್ನು ವ್ಯಾಪಕವಾಗಿ ಆಚರಿಸಲಾಯಿತು. ಹಲವು ರಾಜ್ಯಗಳಲ್ಲಿ ಬೆಳಿಗ್ಗೆಯಿಂದಲೇ ರ್ಯಾಲಿಗಳು, ಧರಣಿಗಳು ನಡೆದಿದ್ದು, ಭಾರಿ ಪ್ರಮಾಣದಲ್ಲಿ ಜನತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕಾರ್ಮಿಕರು, ವಿದ್ಯಾರ್ಥಿಗಳು, ಅನೇಕ ವಿದ್ವಾಂಸರೂ ಸೇರಿದಂತೆ 1000 ಕ್ಕೂ ಹೆಚ್ಚು ಜಿಲ್ಲಾ ಮತ್ತು ತಹಸಿಲ್ ಬಾರ್ ಅಸೋಸಿಯೇಷನ್‌ಗಳು ರೈತರಿಗೆ ಬೆಂಬಲವಾಗಿ ನಿಂತಿದ್ದವು.

ಇದನ್ನೂ ಓದಿ: ಈ ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಕೂಡಾ ತರಲು ಬಯಸಿತ್ತು ಎಂದ ಬಿಜೆಪಿ; ತಿರುಗೇಟು ನೀಡಿದ…

“ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಗುಜರಾತ್, ಉತ್ತರಪ್ರದೇಶ ಮತ್ತು ಹರಿಯಾಣ ಸರ್ಕಾರಗಳ ಪ್ರಜಾಪ್ರಭುತ್ವ ವಿರೋಧಿ ಕ್ರಮಗಳನ್ನು AIKSCC ತೀವ್ರವಾಗಿ ಖಂಡಿಸುತ್ತದೆ. ಮತ್ತು ಬಂಧನಕ್ಕೊಳಗಾದ ಎಲ್ಲಾ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಕಾರ್ಪೋರೇಟ್‌ ಪರ ಕಾನೂನುಗಳನ್ನು ಜಾರಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರ ನಿಲುವನ್ನು ಖಂಡಿಸುತ್ತೇವೆ. ರೈತರನ್ನು ರಕ್ಷಿಸುವ ಕಾನೂನುಗಳು ಎಂದು ಹೇಳುವ ನರೇಂದ್ರ ಮೋದಿ ವಾಸ್ತವದಲ್ಲಿ ಕಾರ್ಪೋರೇಟ್‌ ಕುಳಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರವು ಈ ಕರಾಳ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವವರೆಗೂ ಎಲ್ಲ ಸಂಘಟನೆಗಳೂ ತಮ್ಮ ಹೋರಾಟವನ್ನು ಮುಂದುವರಿಸಲಿವೆ” ಎಂದು ತಿಳಿಸಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿ ನಾಳೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಾಲ್ನಡಿಗೆ ಜಾಥಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...